ವಾಲ್ಮೀಕಿ ಸಮುದಾಯಕ್ಕೆ ಶೀಘ್ರ ಸಿಹಿ ಸುದ್ದಿ: ಸಚಿವ ರಾಮುಲು
ವಾಲ್ಮೀಕಿ ಸಮುದಾಯಕ್ಕೆ ಆದಷ್ಟುಶೀಘ್ರದಲ್ಲಿಯೇ ರಾಜ್ಯ ಸರ್ಕಾರ ಸಿಹಿ ಸುದ್ದಿಯನ್ನು ನೀಡಲಿದೆ ಎಂದು ಪರಿಶಿಷ್ಟಪಂಗಡಗಳ ಕಲ್ಯಾಣ ಮತ್ತು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ಬೆಂಗಳೂರು (ಆ.31) : ವಾಲ್ಮೀಕಿ ಸಮುದಾಯಕ್ಕೆ ಆದಷ್ಟುಶೀಘ್ರದಲ್ಲಿಯೇ ರಾಜ್ಯ ಸರ್ಕಾರ ಸಿಹಿ ಸುದ್ದಿಯನ್ನು ನೀಡಲಿದೆ ಎಂದು ಪರಿಶಿಷ್ಟಪಂಗಡಗಳ ಕಲ್ಯಾಣ ಮತ್ತು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ. ಮಂಗಳವಾರ ಟ್ವೀಟ್ ಮಾಡಿರುವ ಅವರು, ಮೀಸಲಾತಿ ಸಂಬಂಧ ನ್ಯಾ.ನಾಗಮೋಹನ್ ದಾಸ್ ವರದಿ ನೀಡಿದ್ದಾರೆ. ನ್ಯಾ.ಸುಭಾಷ್ ಅಡಿ ನೇತೃತ್ವದ ತ್ರಿಸದಸ್ಯ ಸಮಿತಿಯು ನೀಡಿರುವ ವರದಿ ಸರ್ಕಾರದ ಪರಿಶೀಲನಾ ಹಂತದಲ್ಲಿದೆ. ಅದಷ್ಟುಶೀಘ್ರ ನಮ್ಮ ಸಮುದಾಯಕ್ಕೆ ಸಿಹಿ ಸುದ್ದಿಯನ್ನು ನಮ್ಮ ಸರ್ಕಾರವೇ ಕೊಡಲಿದೆ. ಈ ಬಗ್ಗೆ ಯಾರಿಗೂ ಸಂಶಯವೇ ಬೇಡ. ಮೀಸಲಾತಿ ಸಂಬಂಧ ನಾನು ಹೇಳಿರುವ ಮಾತಿನಿಂದ ಒಂದು ಇಂಚೂ ಹಿಂದೆ ಸರಿಯಲ್ಲ. ಈಗಲೂ ಅದಕ್ಕೆ ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.
ನಮ್ಮ ಸಮಾಜಕ್ಕೆ ಶ್ರೀರಾಮುಲು ದೊಡ್ಡ ಅನ್ಯಾಯ ಮಾಡಿದ್ದಾರೆ, ವಾಲ್ಮೀಕಿ ಸಮುದಾಯ ಆಕ್ರೋಶ
ಪರಿಶಿಷ್ಟಪಂಗಡದ ಜನಾಂಗದವರಿಗೆ ಮೀಸಲಾತಿ ಪ್ರಮಾಣವನ್ನು ಶೇ.3ರಿಂದ ಶೇ.7.5ಕ್ಕೆ ಹೆಚ್ಚಿಸುವ ಸಂಬಂಧ ನಿವೃತ್ತ ನ್ಯಾ. ನಾಗಮೋಹನ್‌ದಾಸ್ ವರದಿಯನ್ನು ಜಾರಿಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿಕೊಳ್ಳಲಾಗಿದೆ. ಅವರಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದಿದ್ದಾರೆ.
ತಮ್ಮ ಸಮುದಾಯಕ್ಕೆ ಶೇ.7.5ರಷ್ಟುಮೀಸಲಾತಿ ನೀಡಬೇಕು ಎಂಬ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ವಾಲ್ಮೀಕಿ ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ 200 ದಿನ ದಾಟಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಭೇಟಿ ನೀಡಿ ಧರಣಿ ಹಿಂಪಡೆಯುವಂತೆ ಮನವಿ ಮಾಡಿದರೂ ಸ್ವಾಮೀಜಿ ತಮ್ಮ ಪಟ್ಟು ಸಡಿಲಿಸಿಲ್ಲ.ವಾಲ್ಮೀಕಿ ಜನಾಂಗದ ಮೀಸಲಾತಿ ಹೋರಾಟಕ್ಕೆ ಸುದೀಪ್ ಬೆಂಬಲ