ಕೊಲೆ ಆರೋಪಿ ದರ್ಶನ್‌ಗೆ ಮತ್ತೆ ಸಂಕಷ್ಟ: ಬೇಲ್ ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸರ್ಕಾರ ಅಸ್ತು

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಈ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರದ ಅನುಮತಿ ಕೇಳಲಾಗಿತ್ತು. ಇದೀಗ ಸರ್ಕಾರದಿಂದ ಅನುಮತಿ ಸಿಕ್ಕಿರುವ ಹಿನ್ನೆಲೆಯಲ್ಲಿ ನಿಯಮಾನುಸಾರ ಸುಪ್ರೀಂ ಅರ್ಜಿ ಸಲ್ಲಿಸುವುದಾಗಿ ಹೇಳಿದ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ 
 

government Decided to Petition to the Supreme Court to cancel the Renukaswamy Murder Case Darshan Bail grg

ಬೆಂಗಳೂರು(ನ.16):  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ರದ್ದು ಕೋರಿ ಶೀಘ್ರದಲ್ಲೇ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ. 

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಈ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರದ ಅನುಮತಿ ಕೇಳಲಾಗಿತ್ತು. ಇದೀಗ ಸರ್ಕಾರದಿಂದ ಅನುಮತಿ ಸಿಕ್ಕಿರುವ ಹಿನ್ನೆಲೆಯಲ್ಲಿ ನಿಯಮಾನುಸಾರ ಸುಪ್ರೀಂ ಅರ್ಜಿ ಸಲ್ಲಿಸುವುದಾಗಿ ಹೇಳಿದರು. 

ಜಗದೀಶ್​ಗೆ ದರ್ಶನ್​ ಆಪರೇಷನ್​ದ್ದೇ ಚಿಂತೆ! ಲಕ್ವ ಹೊಡೆದ್ರೆ ಏನ್​ ಗತಿ? ವಿಡಿಯೋದಲ್ಲಿ ಲಾಯರ್​ ಹೇಳಿದ್ದೇನು?

ತೀವ್ರ ಬೆನ್ನುನೋವಿನಿಂದ ಬಳಲುತ್ತಿರುವ ಆರೋಪಿ ನಟ ದರ್ಶನ್‌ಗೆ ವೈದ್ಯಕೀಯ ಚಿಕಿತ್ಸೆಗಾಗಿ ಜಾಮೀನು ನೀಡುವಂತೆ ಆರೋಪಿ ಪರ ವಕೀಲರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಅ.30ರಂದು ಆರು ವಾರಗಳ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. 

ಬಳಿಕ ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದ ಆರೋಪಿ ದರ್ಶನ್, ನಗರದ ಖಾಸಗಿ ಆಸ್ಪತ್ರೆಯಲ್ಲಿ ಫಿಜಿಯೋಥೆರಫಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೈಲಿನಿಂದ ಬಿಡುಗಡೆಯಾಗಿ ಕುಟುಂಬದ ಜತೆಗೆ ಇರುವ ಆರೋಪಿ ದರ್ಶನ್ ಈವರೆಗೂ ಶಸ್ತ್ರಚಿಕಿತ್ಸೆ ಮಾಡಿಸಿಲ್ಲ. ಹೀಗಾಗಿ ಆರೋಪಿಯ ಈ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ತನಿಖಾಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಈ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ವಕೀಲರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಶೀಘ್ರದಲ್ಲೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಇದರಿಂದ ಆರೋಪಿ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗಲಿದೆ ಎಂದು ತಿಳಿದು ಬಂದಿದೆ.

Latest Videos
Follow Us:
Download App:
  • android
  • ios