ಸಾರಿಗೆ ಇಲಾಖೆಗೆ ಕೆಲಸಕ್ಕೆ ಸೇರಬೇಕು ಅಂದುಕೊಂಡಿದ್ದವರಿಗೆ ಗುಡ್ ನ್ಯೂಸ್; 8719 ಸಿಬ್ಬಂದಿ ನೇಮಕಕ್ಕೆ ಸರ್ಕಾರ ಗ್ರೀನ್ ಸಿಗ್ನಲ್!
ಸಾರಿಗೆ ಇಲಾಖೆಯಲ್ಲಿ ಶೀಘ್ರ 8 ಸಾವಿರ ಹುದ್ದೆಗಳ ನೇಮಕಾತಿಗೆ ಸೂಚನೆ ನೀಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಬೆಂಗಳೂರು (ಅ.22): ಸಾರಿಗೆ ಇಲಾಖೆಯಲ್ಲಿ ಶೀಘ್ರ 8 ಸಾವಿರ ಹುದ್ದೆಗಳ ನೇಮಕಾತಿಗೆ ಸೂಚನೆ ನೀಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಶನಿವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, 4 ಸಾರಿಗೆ ಸಂಸ್ಥೆಗಳಲ್ಲಿ 2016ರಿಂದ ಈವರೆಗೂ ಸುಮಾರು 13,800 ನೌಕರರು ನಿವೃತ್ತರಾಗಿದ್ದಾರೆ. ಈ ಬಗ್ಗೆ 13000 ಚಾಲನಾ ಮತ್ತು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದ ನಿಗಮಗಳು. ಈ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ಅಂದಾಜು 8719 ಸಾವಿರ ಹುದ್ದೆಗಳ ನೇಮಕಾತಿಗೆ ಸೂಚನೆ ನೀಡಲಾಗಿದೆ. ಅದಂತೆ ಮೊದಲನೇ ಹಂತದಲ್ಲಿ 6500 ಚಾಲನಾ ಸಿಬ್ಬಂದಿ ಹಾಗೂ 300 ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದರು.
4 ಸಾರಿಗೆ ನಿಗಮಗಳಿಗೆ 5675 ಹೊಸ ಬಸ್‌ಗಳ ಖರೀದಿ: ಸಿಎಂ ಸಿದ್ದರಾಮಯ್ಯ
ನೇಮಕಾತಿ ಸಂಬಂಧ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಯವರು ಸಭೆ ನಡೆಸಿದ್ದು, ಸಮಸ್ಯೆಗಳನ್ನು ಅವರ ಗಮನಕ್ಕೆ ತಂದಿದ್ದೇವೆ. ಪರಿಹರಿಸುವ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಶಕ್ತಿ ಯೋಜನೆಯಡಿ ಈವರೆಗೆ 80 ಕೋಟಿ ಮಹಿಳೆಯರು ಪ್ರಯಾಣಿಸಿದ್ದು, ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಐದು ಸಾವಿರಕ್ಕೂ ಹೆಚ್ಚು ಹೊಸ ಬಸ್‌ಗಳು ಬರಲಿವೆ. ಈ ಹಿಂದಿನ ಸರ್ಕಾರ ಕಳೆದ 4 ವರ್ಷಗಳಿಂದ ಬಸ್ ಖರೀದಿ ಮಾಡಿರಲಿಲ್ಲ. ಈಗ ಎರಡು ಸಾವಿರ ಕೋಟಿ ರು.ವೆಚ್ಚದಲ್ಲಿ ಎಲ್ಲ ರೀತಿಯ ಬಸ್ ಖರೀದಿ ಮಾಡುತ್ತೇವೆ ಎಂದರು.
ಉನ್ನತ ಶಿಕ್ಷಣ ಬ್ಯಾಕ್‌ಲಾಗ್ ಹುದ್ದೆ ಭರ್ತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಯಾವ ಸಂಸ್ಥೆಗೆ ಎಷ್ಟು ಸಿಬ್ಬಂದಿ ನೇಮಕಾತಿ?
KSRTC:
- ಡ್ರೈವರ್ ಕಮ್ ಕಂಡಕ್ಟರ್ : 2000
- ತಾಂತ್ರಿಕ ಸಿಬ್ಬಂದಿ : 300
NWKRTC :
- ಡ್ರೈವರ್ ಕಮ್ ಕಂಡಕ್ಟರ್ 2000
BMTC :
- ಕಂಡಕ್ಟರ್ 2500
KKRTC
ಈಗಾಗಲೇ 1619 ಚಾಲನಾ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಚಾಲನಾ ಪರೀಕ್ಷೆ ನಡೆಯುತ್ತಿದೆ. ಜನವರಿ 2024 ರ ಕೊನೆಯಲ್ಲಿ ಅಂತಿಮ ಆಯ್ಕೆಪಟ್ಟಿ ಬಿಡುಗಡೆಗೊಳಿಸಲಿರುವ ನಿಗಮ KKRTC ಯಲ್ಲಿ 300 ಕಂಡಕ್ಟರ್ ಗಳ ನೇಮಕಾತಿಗೆ ಅನುಮತಿ ದೊರಕಿದ್ದು, ಅಧಿಸೂಚನೆ ಹೊರಡಿಸಲಿದ್ದಾರೆ