ಗೃಹಲಕ್ಷ್ಮಿ ಮೊದಲ ಕಂತು 4,600 ಕೋಟಿ ಬಿಡುಗಡೆ: ಮನೆಯೊಡತಿ ಖಾತೆಗೆ ಹಣ ಬರೋದು ಯಾವಾಗ?
ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕಾಗಿ 2023-24ನೇ ಸಾಲಿಗೆ 17,500 ಕೋಟಿ ರು. ನಿಗದಿ ಮಾಡಲಾಗಿದೆ. ಅದರ ಮೊದಲ ಕಂತಾಗಿ 4,375 ಕೋಟಿ ರು. ಬಿಡುಗಡೆ ಮಾಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಬೆಂಗಳೂರು(ಸೆ.15): ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರು. ಸಹಾಯಧನ ನೀಡುವ ಸಲುವಾಗಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಅವಧಿಗಾಗಿ 4,600 ಕೋಟಿ ರು. ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶಿಸಿದೆ.
ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕಾಗಿ 2023-24ನೇ ಸಾಲಿಗೆ 17,500 ಕೋಟಿ ರು. ನಿಗದಿ ಮಾಡಲಾಗಿದೆ. ಅದರ ಮೊದಲ ಕಂತಾಗಿ 4,375 ಕೋಟಿ ರು. ಬಿಡುಗಡೆ ಮಾಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಕಾಂಗ್ರೆಸ್‌ನ ಕನಸಿನ ಯೋಜನೆಗೆ ಕೆವೈಸಿ ತೊಂದರೆನಾ..? ಗೃಹಲಕ್ಷ್ಮಿ ಗೊಂದಲ ಶುರುವಾಗಿದ್ದು ಎಲ್ಲಿ ..?
ಅದರಂತೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಕ್ರಿಯಾ ಯೋಜನೆಗೆ ಅನುಮೋದನೆ ಪಡೆಯುವ ಷರತ್ತು ವಿಧಿಸಿ ಮೊದಲ ಕಂತಿನ ಅನುದಾನವಾಗಿ (ಆಗಸ್ಟ್-ಸೆಪ್ಟೆಂಬರ್ ತಿಂಗಳಿಗೆ) 4,600 ಕೋಟಿ ರು. ಬಿಡುಗಡೆಗೆ ಆದೇಶಿಸಲಾಗಿದೆ.