Asianet Suvarna News Asianet Suvarna News

ಸಾಲ ಕಟ್ಟದಿದ್ದರೂ ರೈತರ ಆಸ್ತಿ ಜಪ್ತಿ ಮಾಡುವಂತಿಲ್ಲ: ಸಿಎಂ ಬೊಮ್ಮಾಯಿ

ಸಹಕಾರ ಸಂಘಗಳು, ಬ್ಯಾಂಕ್‌ಗಳಿಗೆ ರೈತರು ಸಾಲ ಮರು ಪಾವತಿಸದಿದ್ದರೆ ಆಸ್ತಿ ಜಪ್ತಿ ಮಾಡುವಂತಿಲ್ಲ ಎಂದು ರಾಜ್ಯದಲ್ಲಿ ಕಾನೂನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ಹೇಳಿದ್ದಾರೆ. 

government to implement rules to ban confiscation of farmers property over loans by banks gvd
Author
First Published Nov 6, 2022, 2:45 AM IST

ಬೆಂಗಳೂರು (ನ.06): ಸಹಕಾರ ಸಂಘಗಳು, ಬ್ಯಾಂಕ್‌ಗಳಿಗೆ ರೈತರು ಸಾಲ ಮರು ಪಾವತಿಸದಿದ್ದರೆ ಆಸ್ತಿ ಜಪ್ತಿ ಮಾಡುವಂತಿಲ್ಲ ಎಂದು ರಾಜ್ಯದಲ್ಲಿ ಕಾನೂನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ಹೇಳಿದ್ದಾರೆ. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಹೆಬ್ಬಾಳದ ಜಿಕೆವಿಕೆಯಲ್ಲಿ ಶನಿವಾರ ಏರ್ಪಡಿಸಿದ್ದ ‘ಕೃಷಿ ಮೇಳ’ದಲ್ಲಿ ಸಾಧಕ ರೈತರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಕೃಷಿ ಚಟುವಟಿಕೆಗೆ ಸಹಕಾರ ಸಂಘಗಳು, ಬ್ಯಾಂಕ್‌ಗಳಿಂದ ರೈತರು ಸಾಲ ಪಡೆದು ಕೆಲವೊಮ್ಮೆ ಮರು ಪಾವತಿ ಮಾಡಲು ಆಗುವುದಿಲ್ಲ. 

ಇಂತಹ ಸಮಯದಲ್ಲಿ ರೈತರ ಆಸ್ತಿ ಜಪ್ತಿ ಆಗುವುದನ್ನು ತಡೆಯಲು ಕಾನೂನು ಜಾರಿಗೆ ತರಲಾಗುವುದು. ಈ ಸಂಬಂಧ ಕಾನೂನು ತಜ್ಞರ ಜೊತೆ ಚರ್ಚೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು. ಸಾಲ ಮರು ಪಾವತಿ ಆಗದಿದ್ದರೆ ಆಸ್ತಿ ಜಪ್ತಿ ಮಾಡದೆ ಸಮಯಾವಕಾಶ ನೀಡಬೇಕು ಎಂದು ಸಹಕಾರ ಹಾಗೂ ಇತರೆ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ. ಗ್ರಾಮೀಣ ಸಾಲ ಪದ್ಧತಿಯಲ್ಲಿ ಬಹಳಷ್ಟುಬದಲಾಗಬೇಕಿದೆ. ನಮ್ಮಲ್ಲಿ 2ರಿಂದ 3 ಹೆಕ್ಟೇರ್‌ ಭೂಮಿ ಇರುವ ರೈತರೇ ಹೆಚ್ಚಿದ್ದು, 1 ಲಕ್ಷದವರೆಗೆ ಮಾತ್ರ ಸಾಲ ಸಿಗುತ್ತಿದೆ. ಈ ಬಗ್ಗೆ ನಬಾರ್ಡ್‌ ಜೊತೆ ಮಾತನಾಡಿದ್ದು, ಐದಾರು ಲಕ್ಷ ರು. ಸಾಲ ಸಿಕ್ಕರೆ ರೈತರಿಗೂ ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

Global Investors Meet 2022: ಕುಲಕರ್ಣಿ, ಗೌಡ, ಪಾಟೀಲರು ಉದ್ಯಮಿ ಆಗ್ಬೇಕು: ಸಿಎಂ ಬೊಮ್ಮಾಯಿ

ಕೃಷಿ ಬೆಳೆದಿದೆ, ರೈತ ಬೆಳೆದಿಲ್ಲ: ಇಂದು ಕೃಷಿ ಕ್ಷೇತ್ರ ವಿಸ್ತಾರವಾಗಿದೆ. ಆದರೆ ರೈತರು ಮಾತ್ರ ಅಭಿವೃದ್ಧಿ ಹೊಂದಿಲ್ಲ. ಸರ್ಕಾರ ಮತ್ತು ಸಮಾಜವು ರೈತರ ಅಭಿವೃದ್ಧಿಗೆ ಪೂರಕವಾಗಿ ಕಾರ್ಯ ನಿರ್ವಹಿಸಬೇಕು. ಕೃಷಿ ವಿವಿಗಳು ಕ್ಯಾಂಪಸ್‌ ಬಿಟ್ಟು ಹೊರಬಂದು ರೈತರ ಜಮೀನುಗಳಲ್ಲಿ ಸಂಶೋಧನೆ ನಡೆಸಬೇಕು. ಹೊಸ ತಳಿ, ನೂತನ ತಾಂತ್ರಿಕತೆಗಳು ರೈತರಿಗೆ ಸುಲಭವಾಗಿ ಸಿಗುವಂತಾಗಬೇಕು. ಕೃಷಿಯ ವಿಚಾರದಲ್ಲಿ ರಾಜಕಾರಣ ಮಾಡಬಾರದು. ರೈತ ಯಾವುದೇ ಪಕ್ಷಕ್ಕೆ ಸೇರಿಲ್ಲ. ಆದರೆ ಎಲ್ಲ ಪಕ್ಷಗಳೂ ರೈತರಿಗೆ ಸೇರಿವೆ ಎಂದು ವ್ಯಾಖ್ಯಾನಿಸಿದರು. ಭೂಮಿ ತಾಯಿಯನ್ನು ಸ್ವಂತ ತಾಯಿಯಂತೆ ನೋಡಿಕೊಳ್ಳಬೇಕು. 

ಕೃಷಿಯೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿರಬೇಕು. ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿ ಆಗದ ರಾಷ್ಟ್ರ ಸ್ವಾಭಿಮಾನಿ ರಾಷ್ಟ್ರವಾಗಲು ಸಾಧ್ಯವಿಲ್ಲ. ಸಮಗ್ರ ಕೃಷಿಯಿಂದ ಅಧಿಕ ಆದಾಯ ಗಳಿಸಬಹುದು. ಈ ನಿಟ್ಟಿನಲ್ಲಿ ಕೃಷಿ ವಿವಿಗಳೂ ರೈತರಿಗೆ ಮಾರ್ಗದರ್ಶನ ನೀಡಬೇಕು. ರೈತ ಶಕ್ತಿ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಡೀಸೆಲ್‌ ಸಬ್ಸಿಡಿ ನೀಡಲಾಗುವುದು ಎಂದು ವಿವರಿಸಿದರು. ಬಸವರಾಜ ಬೊಮ್ಮಾಯಿ ಅವರು ಹಸಿರು ಶಾಲು ಹೊದ್ದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಇದೇ ಸಂದರ್ಭದಲ್ಲಿ ಕೃಷಿಯಲ್ಲಿ ಸಾಧನೆ ಮಾಡಿದ ಹಲವು ಸಾಧಕರನ್ನು ಗೌರವಿಸಲಾಯಿತು. ಕಂದಾಯ ಸಚಿವ ಆರ್‌.ಅಶೋಕ್‌, ಕೃಷಿ ಸಚಿವ ಬಿ.ಸಿ.ಪಾಟೀಲ್‌, ಶಾಸಕ ಕೃಷ್ಣ ಭೈರೇಗೌಡ, ಬೆಂಗಳೂರು ಕೃಷಿ ವಿವಿ ಕುಲಪತಿ ಡಾ.ಎಸ್‌.ವಿ.ಸುರೇಶ್‌, ರಾಯಚೂರು ಕೃಷಿ ವಿವಿ ಕುಲಪತಿ ಡಾ.ಎಂ.ಹನುಮಂತಪ್ಪ ಮತ್ತಿತರರು ಉಪಸ್ಥಿತರಿದ್ದರು.

ಚಂದ್ರು ಸಾವಿನ ಬಗ್ಗೆ ಅನುಮಾನ, ರೇಣುಕಾಚಾರ್ಯ ಜೊತೆ ಚರ್ಚಿಸಿ ತನಿಖೆ: ಸಿಎಂ ಬೊಮ್ಮಾಯಿ

ರಾಸಾಯನಿಕ ಗೊಬ್ಬರ ಕಡಿಮೆ ಮಾಡಿ: ಕೃಷಿ ಮೇಳವು ಸಾವಿರಾರು ಜನರಿಗೆ ಪ್ರೇರಣೆ ನೀಡುವ ಕೆಲಸವನ್ನು ಮಾಡುತ್ತಿದೆ. ಇಲ್ಲಿನ ಸಂಭ್ರಮದ ವಾತಾವರಣ ಗಮನಿಸಿದಾಗ ಮೈಸೂರು ಜಂಬೂ ಸವಾರಿ ನೋಡಿದಂತೆ ಅನಿಸಿತು. ರೈತರು ರಾಸಾಯನಿಕ ಗೊಬ್ಬರಗಳ ಬಳಕೆ ಕಡಿಮೆ ಮಾಡುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಕರೆ ನೀಡಿದರು. ರಾಸಾಯನಿಕ ಗೊಬ್ಬರಗಳ ಅಧಿಕ ಬಳಕೆಯಿಂದ ಮಣ್ಣಿನ ಫಲವತ್ತತೆ ಕಡಿಮೆಯಾಗಿದ್ದು, ಫಲವತ್ತತೆ ಹೆಚ್ಚಿಸಬೇಕು. ಆಧುನಿಕ ತಂತ್ರಜ್ಞಾನ, ಉಪಕರಣಗಳನ್ನು ಬಳಸಿಕೊಂಡು ರೈತರು ಹೆಚ್ಚು ಆದಾಯ ಗಳಿಸಬೇಕು. ಬೆಂಗಳೂರು ಕೃಷಿ ವಿವಿ ರೈತಪರವಾಗಿ ಕೆಲಸ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Follow Us:
Download App:
  • android
  • ios