Asianet Suvarna News Asianet Suvarna News

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಬಳಿಕ ಬುಲೆಟ್ ಪ್ರೂಫ್ ಕಾರಿನಲ್ಲಿ ರಾಜ್ಯಪಾಲರ ಓಡಾಟ!

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ನಂತರ, ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಬುಲೆಟ್ ಪ್ರೂಫ್ ಕಾರನ್ನು ಬಳಸಲಾರಂಭಿಸಿದ್ದಾರೆ.  

Governor Thawar Chand gehlot using Bulletproof Car after prosecution against CM siddaramaiah gow
Author
First Published Aug 21, 2024, 1:23 PM IST | Last Updated Aug 21, 2024, 1:28 PM IST

ಬೆಂಗಳೂರು (ಆ.21): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ  ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯಪಾಲರಿಗೆ ಆತಂಕ ಶುರುವಾಗಿರುವಂತಿದೆ. ಈ ಹಿನ್ನೆಲೆಯಲ್ಲಿ ಬುಲೆಟ್ ಪ್ರೂಫ್ ಕಾರನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಬಳಸುತ್ತಿದ್ದಾರೆ.

ಪ್ರಾಸಿಕ್ಯೂಷನ್‌ಗೆ  ಅನುಮತಿ ನೀಡಿದ ಮೇಲೆ ರಾಜ್ಯದಾದ್ಯಂತ ಕಾಂಗ್ರೆಸ್ ಬೆಂಬಲಿಗರು, ಸಿದ್ದರಾಮಯ್ಯ ಅಭಿಮಾನಿಗಳೂ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯಾದ್ಯಂತ ಪ್ರತಿಭಟನೆಗಳು ಕೂಡ ನಡೆದಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಈಗ ಎಚ್ಚೆತ್ತುಕೊಂಡು ಬುಲೆಟ್ ಪ್ರೂಫ್ ಕಾರು ಉಪಯೋಗಿಸುತ್ತಿದ್ದಾರೆ.

 

ಸಿಬಿಐಗೆ ಸ್ಫೋಟಕ ಮಾಹಿತಿ! ಆ ರಾತ್ರಿ ಕೊಲ್ಕತ್ತಾ ವೈದ್ಯೆ ಸೆಮಿನಾರ್ ಹಾಲ್‌ನಲ್ಲಿ ಮಲಗಿದ್ದೇಕೆ?

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ  ಅನುಮತಿ ನೀಡಿದ ಮೇಲೆ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು, ಸಚಿವ ಸಂಪುಟದ ಮಂತ್ರಿಗಳು, ಶಾಸಕರ ಆಕ್ರೋಶ ತೀವ್ರವಾಗಿದೆ. ಹೀಗಾಗಿ ರಾಜ್ಯಪಾಲರು ಎಚ್ಚರಿಕೆಯಿಂದ ಇದ್ದಾರೆ. ಈ ಹಿಂದೆ ಬುಲೆಟ್ ಪ್ರೂಫ್ ಕಾರು ಇದ್ದರೂ ಅದನ್ನು ಬಳಕೆ ಮಾಡದೆ ಸಾಮಾನ್ಯ ಕಾರಿನಲ್ಲೇ ಓಡಾಡುತ್ತಿದ್ದರು. ಆದರೆ ಈಗ ಪ್ರಾಸಿಕ್ಯೂಷನ್‌ಗೆ  ಅನುಮತಿ ನೀಡಿದ ಮೇಲೆ ತೀವ್ರ ವಿರೋಧ ವ್ಯಕ್ತವಾಗಿದೆ. ಹೀಗಾಗಿ ಸುರಕ್ಷತೆ ದೃಷ್ಟಿಯಿಂದ ಬುಲೆಟ್ ಪ್ರೂಫ್ ಕಾರು ಬಳಸುತ್ತಿದ್ದಾರೆ.

ಮಳೆಯೇ ಇಲ್ಲದಿದ್ದರೂ ಮೃತ್ಯುಂಜಯ ನದಿಯಲ್ಲಿ ಪ್ರವಾಹದ ರೌದ್ರ ನರ್ತನ! ಚಾರ್ಮಾಡಿ ಘಾಟ್ ಕುಸಿತವಾಯ್ತೆ?

Latest Videos
Follow Us:
Download App:
  • android
  • ios