Asianet Suvarna News Asianet Suvarna News

Hijab Row ಹಿಜಾಬ್ ವಿವಾದ, ಮಹತ್ವದ ಸೂಚನೆ ಕೊಟ್ಟ ಕರ್ನಾಟಕ ಶಿಕ್ಷಣ ಇಲಾಖೆ

* ಉಡುಪಿ ಜಿಲ್ಲೆಯಲ್ಲಿ ತಾರಕಕ್ಕೇರಿದ ಹಿಜಾಬ್ ವಿವಾದ
* ಮಹತ್ವದ ಸೂಚನೆ ಕೊಟ್ಟ ಕರ್ನಾಟಕ ಶಿಕ್ಷಣ ಇಲಾಖೆ
*  ಹಿಜಾಬ್  ಕೇಸರಿ ಶಾಲು ಧರಿಸಿ ಶಾಲಾ ಕಾಲೇಜುಗಳಿಗೆ ಬರಲು ಯಾರಿಗೂ ಅವಕಾಶ ಇಲ್ಲ

govt decides not to allow hijab and saffron shawls in schools colleges Says bc nagesh rbj
Author
Bengaluru, First Published Feb 4, 2022, 4:07 PM IST

ಬೆಂಗಳೂರು, (ಫೆ.04): ಉಡುಪಿ (Udupi) ಜಿಲ್ಲೆಯಲ್ಲಿ ಹಿಜಾಬ್ (Hijab) ಧರಿಸೋ ವಿವಾದ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆ ಮಹತ್ವದ ಸೂಚಚನೆ ಹೊರಡಿಸಿದೆ.

ಕರ್ನಾಟಕದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿಯೂ ಸಮವಸ್ತ್ರ ಸಂಹಿತೆಯನ್ನೇ ಪಾಲಿಸಬೇಕು. ಹಿಜಾಬ್ ಅಥವಾ ಕೇಸರಿ ಶಾಲು (Saffron Shawl) ಧರಿಸಿ ಶಾಲಾ ಕಾಲೇಜುಗಳಿಗೆ ಬರಲು ಯಾರಿಗೂ ಅವಕಾಶ ನೀಡುವುದಿಲ್ಲ. ಈ ಕುರಿತು ಕರ್ನಾಟಕ ಶಿಕ್ಷಣ ಕಾಯ್ದೆಯ ಅನ್ವಯ ಸುತ್ತೋಲೆ ಪ್ರಕಟಿಸಿದ್ದೇವೆ ಎಂದು ಶಿಕ್ಷಣ ಸಚಿವ  ಬಿ.ಸಿ.ನಾಗೇಶ್ (BC Nagesh) ಸ್ಪಷ್ಟಪಡಿಸಿದ್ದಾರೆ. 

Hijab Controversy 'ಕಾಲೇಜಿ​​​ನಲ್ಲಿ ಹಿಜಾಬ್ ಧರಿಸುವವರಿಗೆ TC ಕೊಟ್ಟು, ಒದ್ದು ಮನೆಗೆ ಕಳಿಸಿ'

ಹೈಕೋರ್ಟ್​ ತೀರ್ಪು ಬರುವವರೆಗೆ ಸಂಹಿತೆ ಪಾಲಿಸಬೇಕು. ಹಿಜಾಬ್ ಗೊಂದಲ ಶೀಘ್ರ ಪರಿಹಾರವಾಗಬೇಕು. ಮಕ್ಕಳ ಭವಿಷ್ಯಕ್ಕೆ ಇದರಿಂದ ತೊಡಕಾಗಬಾರದು. ಹೈಕೋರ್ಟ್ ಅಂತಿಮ ಆದೇಶಕ್ಕೆ ನಾವೆಲ್ಲರೂ ಬದ್ಧರಾಗಬೇಕಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ಗೊಂದಲಕ್ಕೆ ಆಸ್ಪದ ನೀಡದೇ ಯಥಾಸ್ಥಿತಿ ಕಾಪಾಡಬೇಕು ಎಂದು ವಕ್ಫ್​ ಬೋರ್ಡ್ ಅಧ್ಯಕ್ಷ ಶಫಿ ಸಅದಿ ಹೇಳಿದರು.

ಉಡುಪಿ ಜಿಲ್ಲೆಯಲ್ಲಿ ಹಿಜಾಬ್ ಧರಿಸೋ ವಿವಾದ ತಾರಕಕ್ಕೇರಿದ್ದು, ಈ ಮೊದಲು 6 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿನ ಒಳಗೆ ಬರೋದಕ್ಕೆ ಯತ್ನಿಸಿದಂತ ಸಂದರ್ಭದಲ್ಲಿ, ಅವರಿಗೆ ಅವಕಾಶ ಮಾಡಿಕೊಟ್ಟಿರಲಿಲ್ಲ. ಇಂದು 20 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ, ಪೋಷಕರೊಂದಿಗೆ ಆಗಮಿಸಿದ್ದಾರೆ. ಈ ಮೂಲಕ ಹಿಜಾಬ್ ವಿವಾದ ತಾರಕಕ್ಕೇರುವಂತೆ ಆಗಿದೆ.

ಇತ್ತೀಚಿಗೆ 6 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದರು. ಇಂದು 20 ವಿದ್ಯಾರ್ಥಿನಿಯರು ಕಾಲೇಜಿಗೆ ಹಿಜಾಬ್ ಧರಿಸಿ ಆಗಮಿಸಿದ್ದಾರೆ. ಅವರನ್ನು ಕಾಲೇಜಿನ ಗೇಟ್ ಬಳಿಯಲ್ಲೇ ತಡೆದಂತ ಪ್ರಾಂಶುಪಾಲರು, ಉಪನ್ಯಾಸಕರು, ಹಿಜಾಬ್ ಧರಿಸಿ ಬಂದ್ರೇ ಒಳಗೆ ಬಿಡೋದಿಲ್ಲ ಎಂದು ನಿರಾಕರಿಸಲಾಗಿದೆ. 

ಹಿಜಾಬ್ ಧರಿಸಿ ಬಂದಂತ ವಿದ್ಯಾರ್ಥಿನಿಯರ ಜೊತೆಗೆ ಪೋಷಕರು ಆಗಮಿಸಿದ್ದು, ಕಾಲೇಜಿಗೆ ಹಿಜಾಬ್ ಧರಿಸಿ ಪ್ರವೇಶಿಸೋದಕ್ಕೆ ಅವಕಾಶ ನೀಡಬೇಕು ಅಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಆದ್ರೆ ಮಧ್ಯಪ್ರವೇಶಿಸಿದಂತೆ ಪೊಲೀಸ್ ಅಧಿಕಾರಿ ಹಿಜಾಬ್ ಧರಿಸಿ ಬಂದಂತ ವಿದ್ಯಾರ್ಥಿಗಳಿಗೆ ಕಾಲೇಜಿಗೆ ಪ್ರವೇಶವಿಲ್ಲ ಎಂದು ಮನವೊಲಿಕೆಯ ಪ್ರಯತ್ನ ನಡೆಸಿದ್ದಾರೆ.

ಹೈಕೋರ್ಟ್‌ನಲ್ಲಿ ಹಿಜಾಬ್ 
ಉಡುಪಿಯ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನಲ್ಲಿ ಮುಸ್ಲಿಮ್‌ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಕಾಲೇಜಿಗೆ ಹಾಜರಾಗುವುದಕ್ಕೆ ಅಡ್ಡಿ ಪಡಿಸಿದ ಘಟನೆ ಈಗ ಕೋರ್ಟ್ ಮೇಟ್ಟಿಲೇರಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಗುರುವಾರ ನೋಟಿಸ್‌ ಜಾರಿ ಮಾಡಿದೆ. ಉಡುಪಿ ಶಾಸಕ ರಘುಪತಿ ಭಟ್‌ ಅವರು ಕಾನೂನುಬಾಹಿರವಾಗಿ ಕಾಲೇಜಿನ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆಕ್ಷೇಪಿಸಲಾಗಿದ್ದು, ಈ ಪ್ರಕರಣದಲ್ಲಿ ಪ್ರತಿವಾದಿಯನ್ನಾಗಿಸಲಾಗಿದೆ.

ವಿದ್ಯಾರ್ಥಿನಿಯರಾದ ಆಯೇಷಾ ಹಜೀರಾ ಅಲ್ಮಾಸ್‌, ರೇಶಮ್ ಫಾರೂಕ್‌, ಅಲಿಯಾ ಅಸ್ಸಾದಿ, ಶಫಾ, ಶಮೀಮ್‌, ಮುಸ್ಕಾನ್‌ ಜೈನಬ್‌ ಅವರನ್ನು ಅವರ ತಾಯಂದಿರುವ ಪ್ರತಿನಿಧಿಸಿದ್ದು, ವಕೀಲ ಮೊಹಮ್ಮದ್‌ ತಾಹೀರ್‌ ಅವರ ಮೂಲಕ ಸಲ್ಲಿಸಿರುವ ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ನೇತೃತ್ವದ ಏಕಸದಸ್ಯ ಪೀಠವು ನಡೆಸಿ, ಈ ಬಗ್ಗೆ ವಿವರಣೆ ನೀಡುವಂತೆ ಸರ್ಕಾರಕ್ಕೆ ಸೂಚಿಸಿದೆ.

ಉಡುಪಿ ಶಾಸಕ ರಘುಪತಿ ಭಟ್‌ ಅವರಲ್ಲದೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು, ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜಿನ ಉಪ ನಿರ್ದೇಶಕರು, ಉಡುಪಿ ಜಿಲ್ಲಾಧಿಕಾರಿ, ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರು ಪ್ರತಿವಾದಿಗಳನ್ನಾಗಿಸಿ ನ್ಯಾಯಾಲಯವು ನೋಟಿಸ್‌ ಜಾರಿ ಮಾಡಿ, ಆಕ್ಷೇಪಣೆ ಸಲ್ಲಿಸುವಂತೆ ಆದೇಶಿಸಿದೆ. ವಿಚಾರಣೆಯನ್ನು ಮಂಗಳವಾರಕ್ಕೆ (ಫೆಬ್ರವರಿ 8) ಮುಂದೂಡಲಾಗಿದೆ.
 

Follow Us:
Download App:
  • android
  • ios