Asianet Suvarna News Asianet Suvarna News

ಆ್ಯಂಬಿಡೆಂಟ್‌ ಹೂಡಿಕೆದಾರರ ಹಣ ವಾಪಸ್‌ ಮಾಡಲು ಹೊಸ ಪ್ಲಾನ್!

ಸಾರ್ವಜನಿಕರಿಂದ ನೂರಾರು ಕೋಟಿ ಹಣ ಹೂಡಿಕೆ ಮಾಡಿ ವಂಚಿಸಿರುವ ಆ್ಯಂಬಿಡೆಂಟ್‌ ಕಂಪನಿಯ ಆಸ್ತಿ ಜಪ್ತಿ ಮಾಡಿ ಸಾರ್ವಜನಿಕರ ಹಣ ಹಿಂದಿರುಗಿಸುವ ಸಂಬಂಧ ಸರ್ಕಾರ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.

govt has decided to return the money of investors by Confiscating the ambident property
Author
Bangalore, First Published Nov 21, 2018, 8:08 AM IST

ಬೆಂಗಳೂರು[ನ.21]: ಸಾರ್ವಜನಿಕರಿಂದ ನೂರಾರು ಕೋಟಿ ಹಣ ಹೂಡಿಕೆ ಮಾಡಿ ವಂಚಿಸಿರುವ ಆ್ಯಂಬಿಡೆಂಟ್‌ ಕಂಪನಿಯ ಆಸ್ತಿ ಜಪ್ತಿ ಮಾಡಿ ಸಾರ್ವಜನಿಕರ ಹಣ ಹಿಂದಿರುಗಿಸುವ ಸಂಬಂಧ ಸರ್ಕಾರ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.

ಸಾರ್ವಜನಿಕರಿಂದ ಹಣ ಹೂಡಿಕೆ ಮಾಡಿಸಿಕೊಂಡು ವಂಚಿಸಿರುವ ಕಾರಣದಿಂದ ಹೂಡಿಕೆದಾರರ ಹಿತ ಕಾಪಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ‘ಹಣಕಾಸು ಸಂಸ್ಥೆಗಳಲ್ಲಿ ಹಣ ಹೂಡಿಕೆ ಮಾಡಿದ ಹೂಡಿಕೆದಾರರ ಹಿತರಕ್ಷಣೆ ಕಾಯ್ದೆ ಸೆಕ್ಷನ್‌ 5’ರ ಅಡಿಯಲ್ಲಿ ಸರ್ಕಾರ ತನ್ನ ಅಧಿಕಾರವನ್ನು ಚಲಾಯಿಸಲು ನಿರ್ಧರಿಸಿದೆ. ಇದಕ್ಕಾಗಿ ಉತ್ತರ ಉಪ ವಿಭಾಗದ ಉಪವಿಭಾಗಾಧಿಕಾರಿಯನ್ನು ಈ ಕಾಯ್ದೆಯ ಸಮರ್ಪಕ ಜಾರಿಗೆ ನಿಯುಕ್ತಿಗೊಳಿಸಲಾಗಿದೆ.

ಆ್ಯಂಬಿಡೆಂಟ್‌ ಮಾರ್ಕೆಟಿಂಗ್‌ ಕಂಪನಿಯ ಹಾಗೂ ಕಂಪನಿ ಪಾಲುದಾರರು, ನಿರ್ದೇಶಕರು, ವ್ಯವಸ್ಥಾಪಕರು, ಪ್ರೊಮೋಟರ್‌ಗಳು ಮತ್ತು ಮ್ಯಾನೇಜರ್‌ಗಳು ಸೇರಿದಂತೆ ಈ ಕಾಯ್ದೆಯ ಸೆಕ್ಷನ್‌ 3(2) ರ ಅಡಿಯಲ್ಲಿ ಕಂಪನಿ ಜತೆಗೆ ವ್ಯವಹರಿಸಿರುವ ಇತರರ ಚರ ಮತ್ತು ಸ್ಥಿರ ಆಸ್ತಿಗಳನ್ನು ಜಪ್ತಿ ಮಾಡಿಕೊಂಡು ಸಾರ್ವಜನಿಕರ ಹಣವನ್ನು ಹಿಂದಿರುಗಿಸುವ ಹೊಣೆ ಈ ಉಪವಿಭಾಗಾಧಿಕಾರಿಯ ಮೇಲಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆ್ಯಂಬಿಡೆಂಟ್‌ ಕಂಪನಿಯ ಜತೆ ವ್ಯವಹಾರ ಇಟ್ಟುಕೊಂಡು ಆಸ್ತಿಪಾಸ್ತಿ ಮಾಡಿರುವವರ ಮತ್ತು ರಿಯಲ್‌ ಎಸ್ಟೇಟ್‌ ವ್ಯವಹಾರದ ನೆಪದಲ್ಲಿ ಕಂಪನಿಯಿಂದ ಹಣ ಪಡೆದಿರುವವರ ಬಗ್ಗೆ 080-22210076 ಹಾಗೂ 9916505331, 9480331096 ದೂರವಾಣಿ ಸಂಖ್ಯೆಗೆ ಮಾಹಿತಿ ನೀಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

Close

Follow Us:
Download App:
  • android
  • ios