Asianet Suvarna News Asianet Suvarna News

ರಾಜ್ಯದ ದೇವಸ್ಥಾನಗಳಲ್ಲಿ ಹಿರಿಯ ನಾಗರೀಕರಿಗೆ ಶೀಘ್ರ ದೇವರ ದರ್ಶನ ಭಾಗ್ಯ!

ರಾಜ್ಯ ಸರ್ಕಾರವು ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ ನೀಡಿದ್ದು, ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡುವ ‘ಎ’ ಮತ್ತು ‘ಬಿ’ ವರ್ಗದ ದೇವಾಲಯಗಳಲ್ಲಿ 65 ವರ್ಷ ಮೇಲ್ಪಟ್ಟವರಿಗೆ ನೇರವಾಗಿ ದೇವರ ದರ್ಶನ ಸೌಲಭ್ಯ ಒದಗಿಸುವ ಬಗ್ಗೆ ಸುತ್ತೋಲೆ ಹೊರಡಿಸಿದೆ. 

govt orders direct god darshan facility for senior citizens in karnataka state temples gvd
Author
First Published Jun 22, 2023, 9:08 AM IST

ಬೆಂಗಳೂರು (ಜೂ.22): ರಾಜ್ಯ ಸರ್ಕಾರವು ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ ನೀಡಿದ್ದು, ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡುವ ‘ಎ’ ಮತ್ತು ‘ಬಿ’ ವರ್ಗದ ದೇವಾಲಯಗಳಲ್ಲಿ 65 ವರ್ಷ ಮೇಲ್ಪಟ್ಟವರಿಗೆ ನೇರವಾಗಿ ದೇವರ ದರ್ಶನ ಸೌಲಭ್ಯ ಒದಗಿಸುವ ಬಗ್ಗೆ ಸುತ್ತೋಲೆ ಹೊರಡಿಸಿದೆ. ಈ ದೇವಾಲಯಗಳಲ್ಲಿ 65 ವರ್ಷ ಮೇಲ್ಪಟ್ಟ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವುದಕ್ಕೆ ವಿನಾಯಿತಿ ನೀಡಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯ, ನಿಮಿಷಾಂಬ, ಸವದತ್ತಿ ರೇಣುಕಾ ಯಲ್ಲಮ್ಮ, ದೊಡ್ಡಗಣಪತಿ, ಕದ್ರಿ, ಕಟೀಲು, ಬಿಳಿಗಿರಿರಂಗನಾಥ ಸ್ವಾಮಿ ಸೇರಿದಂತೆ 200ಕ್ಕೂ ಹೆಚ್ಚು ದೇವಾಲಯಗಳು ‘ಎ’ ವರ್ಗದ ದೇವಾಲಯಗಳ ಪಟ್ಟಿಗೆ ಬರಲಿವೆ. ಇನ್ನು, ಧರ್ಮರಾಯಸ್ವಾಮಿ, ಗವಿ ಗಂಗಾಧರೇಶ್ವರ, ಕೋಲಾರಮ್ಮ ಸೇರಿದಂತೆ 100ಕ್ಕೂ ಹೆಚ್ಚು ‘ಬಿ’ ವರ್ಗದ ದೇವಾಲಯಗಳ ಪಟ್ಟಿಗೆ ಬರಲಿವೆ. ಇಂತಹ ದೇವಾಲಯಗಳಲ್ಲಿ ಹಿರಿಯ ನಾಗರಿಕರು ನೇರವಾಗಿ ದೇವರ ದರ್ಶನ ಪಡೆದುಕೊಳ್ಳಬಹುದಾಗಿದೆ.

ಬೆಂಗಳೂರಿನಲ್ಲಿ ಮತ್ತೆ 3 'ನಮ್ಮ ಮೆಟ್ರೋ' ಮಾರ್ಗ: ಸರ್ಕಾರಕ್ಕೆ ಪ್ರಸ್ತಾವ

ಇತ್ತೀಚೆಗಿನ ದಿನದಲ್ಲಿ ಇಲಾಖೆಯ ವ್ಯಾಪ್ತಿಗೊಳಪಡುವ ದೇವಾಲಯಗಳಿಗೆ ಆಗಮಿಸುತ್ತಿರುವ ಭಕ್ತಾದಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, ಹಿರಿಯ ನಾಗರಿಕರಿಗೆ ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತುಕೊಳ್ಳಲು ಕಷ್ಟಕರವಾಗಿರುವುದರಿಂದ ಹಿರಿಯ ನಾಗರಿಕರಿಗೆ ಪ್ರತ್ಯೇಕ ಶೀಘ್ರ ದರ್ಶನಕ್ಕೆ ಅಗತ್ಯ ವ್ಯವಸ್ಥೆ ಮಾಡಲು ಸುತ್ತೋಲೆಯಲ್ಲಿ ಸೂಚನೆ ನೀಡಲಾಗಿದೆ.

ಶಕ್ತಿ ಯೋಜನೆ: ಬಿಎಂಟಿಸಿ ಬಸ್‌ನಲ್ಲಿ ಎಂಡಿ ಜಿ.ಸತ್ಯವತಿ ರೌಂಡ್ಸ್‌

ಹಿರಿಯ ನಾಗರಿಕರು ಅವರ ವಯಸ್ಸಿನ ದಾಖಲೆ/ ಆಧಾರ್‌ ಕಾರ್ಡ್‌ ತೋರಿಸಿದರೆ ಶೀಘ್ರ ದರ್ಶನವಕ್ಕೆ ಅನುಕೂಲವಾಗುವಂತೆ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ದೇವಾಲಯಗಳಲ್ಲಿ ಸ್ಥಳಾವಕಾಶ ಇದ್ದಲ್ಲಿ ಹಿರಿಯ ನಾಗರಿಕರಿಗೆ ಪ್ರತ್ಯೇಕ ಸ್ಥಳ ಕಾಯ್ದಿರಿಸಬೇಕು. ದೇವಾಲಯಗಳಲ್ಲಿ ಹಿರಿಯ ನಾಗರಿಕರ ಸಹಾಯ ಕೇಂದ್ರವನ್ನು ಸ್ಥಾಪಿಸಿ ಹಿರಿಯ ನಾಗರಿಕರಿಗೆ ಸಹಕರಿಸಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು. ಸಹಾಯ ಕೇಂದ್ರಕ್ಕೆ ಜವಾಬ್ದಾರಿಯುತ ಸಿಬ್ಬಂದಿಯನ್ನು ನಿಯೋಜಿಸಿ ಹಿರಿಯ ನಾಗರಿಕರಿಗೆ ತ್ವರಿತ ದರ್ಶನ ಏರ್ಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ.

Follow Us:
Download App:
  • android
  • ios