ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಸರ್ಕಾರ ಸಿದ್ಧವೆಂದ ಸಚಿವ ಈಶ್ವರಪ್ಪ
ಕಳೆದ ಮೇ-ಜೂನ್ ತಿಂಗಳಲ್ಲಿ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸಿದ್ಧತೆ ನಡೆಸಿತ್ತು. ಆದರೆ, ಕೊರೋನಾ ಸೋಂಕು ವ್ಯಾಪಕವಾಗಿ ಹರಡಿದ್ದರಿಂದ ಮತ್ತು ಜನತೆಯ ಆರೋಗ್ಯದ ಹಿತದೃಷ್ಟಿಯಿಂದ ಚುನಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಆಯೋಗ ಸೂಚನೆ ಕೊಟ್ಟ ಕೂಡಲೇ ಚುನಾವಣೆ ನಡೆಸಲಾಗುವುದು ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
ಬೆಂಗಳೂರು(ಆ.20): ರಾಜ್ಯದ ಗ್ರಾಮ ಪಂಚಾಯತಿಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದ್ದು, ರಾಜ್ಯ ಚುನಾವಣಾ ಆಯೋಗ ಸೂಚನೆ ಕೊಟ್ಟಕೂಡಲೇ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಚುನಾವಣಾ ಆಯೋಗವು ಈಗಾಗಲೇ ಮೀಸಲಾತಿ ಪಟ್ಟಿ ಪ್ರಕಟ ಮಾಡಿದೆ. ಗೆಜೆಟ್ ನೋಟಿಫಿಕೇಷನ್ ಸಹ ಆಗಿದೆ. ಚುನಾವಣಾ ಆಯೋಗದ ಸೂಚನೆಗಾಗಿ ಕಾಯುತ್ತಿದ್ದೇವೆ. ಆಯೋಗ ಸೂಚನೆ ಕೊಟ್ಟ ಕೂಡಲೇ ಚುನಾವಣೆ ನಡೆಸಲಾಗುವುದು ಎಂದು ಹೇಳಿದರು.
ಗ್ರಾಪಂ ಚುನಾವಣೆ: ಮತದಾರ ಪಟ್ಟಿ ಸಿದ್ಧತೆಗೆ ಆಯೋಗ ಸೂಚನೆ
ಕಳೆದ ಮೇ-ಜೂನ್ ತಿಂಗಳಲ್ಲಿ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸಿದ್ಧತೆ ನಡೆಸಿತ್ತು. ಆದರೆ, ಕೊರೋನಾ ಸೋಂಕು ವ್ಯಾಪಕವಾಗಿ ಹರಡಿದ್ದರಿಂದ ಮತ್ತು ಜನತೆಯ ಆರೋಗ್ಯದ ಹಿತದೃಷ್ಟಿಯಿಂದ ಚುನಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಕೊರೋನಾ ಸೋಂಕು ನಿಯಂತ್ರಣ ಕಾರ್ಯದಲ್ಲಿ ಅಧಿಕಾರಿಗಳು ತಲ್ಲೀನವಾಗಿರುವುದರಿಂದ ಅವರನ್ನು ಸಹ ಚುನಾವಣೆ ಕಾರ್ಯಕ್ಕೆ ಬಳಸಿಕೊಳ್ಳಲು ಕಷ್ಟವಾಗಿದೆ. ಕೊರೋನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದಂತೆ ಚುನಾವಣೆ ನಡೆಸಲು ಆಯೋಗ ಸಿದ್ಧತೆ ನಡೆಸುತ್ತಿದೆ. ಶೀಘ್ರದಲ್ಲಿಯೇ ಚುನಾವಣೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.