ಕೋವಿಡ್‌ ಮೂರನೇ ಅಲೆಯು ಮಕ್ಕಳ ಮೇಲೆ ಪರಿಣಾಮ ಮಕ್ಕಳ ಆರೋಗ್ಯ ಸದೃಢತೆಗಾಗಿ ಜೂ. 25ರಿಂದ ಮೂರು ತಿಂಗಳ ಕಾಲ ರಾಜ್ಯಾದ್ಯಂತ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆ   ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ

ಹಾವೇರಿ (ಜೂ.09): ಕೋವಿಡ್‌ ಮೂರನೇ ಅಲೆಯು ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಸದೃಢತೆಗಾಗಿ ಜೂ. 25ರಿಂದ ಮೂರು ತಿಂಗಳ ಕಾಲ ರಾಜ್ಯಾದ್ಯಂತ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಗುಡ್ ನ್ಯೂಸ್ : ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆಯಲ್ಲಿ ಭಾರೀ ಇಳಿಕೆ .

ಕೋವಿಡ್‌ 2ನೇ ಅಲೆಯು ಜೂನ್‌ ತಿಂಗಳಲ್ಲಿ ಕಡಿಮೆಯಾಗುವುದಾಗಿ ತಜ್ಞರ ಅಭಿಪ್ರಾಯಗಳು ವ್ಯಕ್ತವಾಗಿದೆ. 3ನೇ ಅಲೆಯು ಆರಂಭವಾಗುವ ಮುನ್ನ ಮಕ್ಕಳ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಮಕ್ಕಳ ಆರೋಗ್ಯ ಸದೃಢತೆಗೆ ಆದ್ಯತೆ ನೀಡಲಾಗುವುದು ಎಂದಿದ್ದಾರೆ.

 ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆ, ರೋಗ ನಿರೋಧಕ ಶಕ್ತಿಯನ್ನು ಮಕ್ಕಳಲ್ಲಿ ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona