Asianet Suvarna News Asianet Suvarna News

Big News: ಗೃಹಲಕ್ಷ್ಮಿ ಯೋಜನೆಯ 2000 ಹಣ ಎಷ್ಟು ಜನರಿಗೆ ಹೋಗಿಲ್ಲ, ಕಾರಣವೇನು? ಸಮಗ್ರ ಮಾಹಿತಿ ಇಲ್ಲಿದೆ

ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ (ಪ್ರತಿ ಮನೆ ಯಜಮಾನಿಗೆ 2000 ರೂ. ಹಣ) ಅಡಿ ಈವರೆಗೆ 9,44,155 ಅರ್ಜಿದಾರರಿಗೆ ಹಣ ಹೋಗಿಲ್ಲ.

Gruhalakshmi scheme many people have not received money Here is comprehensive information sat
Author
First Published Oct 9, 2023, 3:51 PM IST

ಬೆಂಗಳೂರು (ಅ.09): ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣ ಹೆಚ್ಚಿಸಲು ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಅಡಿ ಈವರೆಗೆ 9,44,155 ಅರ್ಜಿದಾರರಿಗೆ ಹಣ ಹೋಗಿಲ್ಲ. ಇದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಸೂಕ್ತ ಕಾರಣಗಳನ್ನು ನೀಡಿದ್ದಾರೆ. 

3082 ಅರ್ಜಿದಾರರು ಮರಣ ಹೊಂದಿದ್ದರಿಂದ ಅವರನ್ನು ಅನರ್ಹಗೊಳಿಸಲಾಗಿದೆ. 1,59,356 ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ.  ಫಲಾನುಭವಿಗಳ ಆಧಾರ್ ಹಾಗೂ ಬ್ಯಾಂಕ್ ಖಾತೆ ಹೆಸರಿನಲ್ಲಿ ವ್ಯತ್ಯಾಸವಾಗಿದ್ದು ಅವುಗಳನ್ನು ಸರಿಪಡಿಸುವ ಕಾರ್ಯ ನಡೆದಿದೆ. 5,96,268 ಫಲಾನುಭವಿಗಳ ಖಾತೆಯೊಂದಿಗೆ ಆಧಾರ್ ಜೋಡಣೆಯಾಗಿಲ್ಲ. 2,17,536 ಫಲಾನುಭವಿಗಳ ಬ್ಯಾಂಕ್ ಖಾತೆಯನ್ನು ಆಧಾರ್ ನೊಂದಿಗೆ ಯಶಸ್ವಿಯಾಗಿ ಜೋಡಿಸಲಾಗಿದೆ. ಉಳಿದ ಫಲಾನುಭವಿಗಳಿಗೂ ಸಿಡಿಪಿಒ ಮಾಹಿತಿ ನೀಡಿ ಆಧಾರ್ ಫೀಡ್ ಮಾಡಿಸಲು ಕ್ರಮ ವಹಿಸಲಾಗಿದೆ. 

ಬೆಂಗಳೂರಿಗೆ ಗುಡ್‌ ನ್ಯೂಸ್‌: ಆಸ್ತಿ ತೆರಿಗೆ ಹೆಚ್ಚಳ ಮಾಡೊಲ್ಲವೆಂದು ಭರವಸೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್

1,75,683 ಫಲಾನುಭವಿಗಳ ಹೆಸರು ಮತ್ತು ವಿಳಾಸ ವ್ಯತ್ಯಾಸವಾಗಿದೆ. ಬ್ಯಾಂಕ್ ಗಳ ಮೂಲಕ ಫಲಾನುಭವಿಗಳ ಇ-ಕೆವೈಸಿ ಮಾಡಿಸಲು ಇಲಾಖೆ ಕ್ರಮ ವಹಿಸಿದೆ. 9,766 ಇಂದೀಕರಿಸಿದ ದತ್ತಾಂಶದಿಂದಾಗಿ ಉಂಟಾದ ವಿಳಂಬವನ್ನು ಸೇವಾಸಿಂಧು ವತಿಯಿಂದ ಪುನರ್ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಕಳೆದ ಬಿಡುಗಡೆಗೊಳಿಸಲಾಗಿದೆ. 1.8 ಕೋಟಿ ಅರ್ಹ ಫಲಾನುಭವಿಗಳಿಗೆ 2169 ಕೋಟಿ ರೂ. ಅನುದಾನವನ್ನು ಸರಕಾರ ಬಿಡುಗಡೆಗೊಳಿಸಿತ್ತು. ಸೆಪ್ಟಂಬರ್ ತಿಂಗಳಲ್ಲಿ 1.14 ಲಕ್ಷ ಫಲಾನುಭವಿಗಳಿಗೆ 2280 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲಾಗಿದೆ. 

ಅಕ್ಟೋಬರ್ 4ರವರೆಗೆ 93 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗೆ ತಲಾ 2 ಸಾವಿರ ರೂ. ಯಶಸ್ವಿಯಾಗಿ ವರ್ಗಾಯಿಸಲಾಗಿದೆ. 5.5 ಲಕ್ಷ ಫಲಾನುಭವಿಗಳ ಮಾಹಿತಿ ಪರಿಶೀಲಿಸಿ ಡಿಬಿಟಿ ಮೂಲಕ ಹಣ ಪಾವತಿಸಲು ಕ್ರಮ ಕೈಗೊಂಡಿರುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದ್ದಾರೆ.

ನಿಜವಾಗುತ್ತಾ ಕೋಡಿಶ್ರೀ ಭವಿಷ್ಯ? ಜಗತ್ತಿನಲ್ಲಿ ಕಣ್ಮರೆಯಾಗಲಿರುವ ದೇಶ ಇಸ್ರೇಲ್‌ ಅಥವಾ ಪ್ಯಾಲೆಸ್ತೇನ್‌?

 

Follow Us:
Download App:
  • android
  • ios