Asianet Suvarna News Asianet Suvarna News

ಮಂತ್ರಾಲಯದ ಸುಬುಧೇಂದ್ರ ತೀರ್ಥರಿಗೆ ಗೌರವ ಡಾಕ್ಟರೇಟ್

ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರಿಗೆ ಗುಲ್ಬರ್ಗ ವಿಶ್ವವಿದ್ಯಾಲಯ ಈ ಸಾಲಿನ ಗೌರವ ಡಾಕ್ಟರೇಟ್ ನೀಡಲು ಮುಂದಾಗಿದೆ.

Gulbarga VV  honorary doctorate to mantralaya-sri-subudendra-teerta-swamiji rbj
Author
Bengaluru, First Published Nov 18, 2020, 4:27 PM IST

ರಾಯಚೂರು, (ನ.18): ಗುಲಬರ್ಗಾ ವಿಶ್ವವಿದ್ಯಾಲಯದಿಂದ ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಅವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾಗಿದೆ.

ಸುಬುಧೇಂದ್ರ ತೀರ್ಥರ ಸಾಮಾಜಿಕ ಸೇವೆ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೆ ನೀಡಿದ ಅಪಾರ ಸೇವೆ ಪರಿಗಣಿಸಿ ಡಾಕ್ಟರೇಟ್ ಗೆ ಆಯ್ಕೆ ಮಾಡಲಾಗಿದೆ.

ಮಂತ್ರಾಲಯ ರಾಘವೇಂದ್ರ ಸ್ವಾಮಿ ಪವಾಡ; 'ಇಂದು ರಾಯರಿಗೆ ನನ್ನ ಮಾತು ಕೇಳಿಸಿದ ಸತ್ಯಘಟನೆ'!

ಶ್ರೀಗಳಿಗೆ ಡಾಕ್ಟರೇಟ್ ನೀಡುವಂತೆ ಸಿಂಡಿಕೇಟ್ ಸದಸ್ಯ ಡಾ. ಶರಣಬಸಪ್ಪ ಜೋಳದಹೆಡಗಿ ಅವರು ಕಳೆದ ಫೆಬ್ರುವರಿಯಲ್ಲಿ ಕುಲಪತಿಗೆ ಮನವಿ ಸಲ್ಲಿಸಿದ್ದರು. ವಿಶ್ವವಿದ್ಯಾಲಯದಿಂದ ಮಂತ್ರಾಲಯ ಶ್ರೀಗಳ ಹೆಸರು ಶಿಫಾರಸು ಮಾಡಿ ಸರ್ಕಾರಕ್ಕೆ ಕಳುಹಿಸಿರುವುದನ್ನು ರಾಜ್ಯಪಾಲರು ಅನುಮೋದಿಸಿದ್ದಾರೆ.

ಈ ಬಗ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರತಿಭಾ ಡಿ.ಹಬ್ಬು ಅವರು ವಿಶ್ವವಿದ್ಯಾಲಯಕ್ಕೆ ನವೆಂಬರ್ 11 ರಂದು ಪತ್ರ ರವಾನಿಸಿದ್ದು, ಇದೇ ನವೆಂಬರ್ 20 ರಂದು ನಡೆಯುವ 38ನೇ ಘಟಿಕೋತ್ಸವ ಸಮಾರಂಭದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ

Follow Us:
Download App:
  • android
  • ios