ಸಚಿವ ಮಹದೇವಪ್ಪಗೆ ಶೂ ಹಾಕಿದ ಗನ್‌ಮ್ಯಾನ್‌: ವಿವಾದ

ವೈಯಕ್ತಿಕವಾಗಿ ವ್ಯಕ್ತಿ ಗೌರವ ಮತ್ತು ಘನತೆಯಲ್ಲಿ ನಂಬಿಕೆ ಇಟ್ಟಿರುವ ನನಗೆ ಒಬ್ಬರಿಂದ ಶೂ ಹಾಕಿಸಿಕೊಳ್ಳಬೇಕೆಂಬ ದರ್ಪದ ಇರಾದೆ ಇಲ್ಲ. ಆದರೆ ಹಿಂದೆ ಹಿಪ್ ಜಾಯಿಂಟ್ ನೀ ತೊಂದರೆಗೆ ಸಿಲುಕಿ ಶಸ್ತ್ರಚಿಕಿತ್ಸೆಗೆ ಒಳಗಾದ ವೇಳೆ ಬಾಗುವುದು ಕಷ್ಟವಾಗಿದ್ದರಿಂದ ನಮ್ಮ ಆತ್ಮೀಯ ವಲಯದಿಂದ ಸಹಾಯ ಪಡೆದಿದ್ದೇನೆ: ಸಚಿವ ಡಾ.ಎಚ್.ಸಿ. ಮಹದೇವಪ್ಪ 

Gunman who Put Shoes on Minister HC Mahadevappa in Dharwad grg

ಮೈಸೂರು(ನ.09): ಧಾರವಾಡಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಂಗ ರಕ್ಷಕರು ಶೂ ಹಾಕಿದ್ದಾರೆಂಬ ಸಂಗತಿಯು ವಿವಾದದ ಸ್ವರೂಪ ಪಡೆದಿರುವುದು ದುರದೃಷ್ಟಕರ ಬೆಳವಣಿಗೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ.

ವೈಯಕ್ತಿಕವಾಗಿ ವ್ಯಕ್ತಿ ಗೌರವ ಮತ್ತು ಘನತೆಯಲ್ಲಿ ನಂಬಿಕೆ ಇಟ್ಟಿರುವ ನನಗೆ ಒಬ್ಬರಿಂದ ಶೂ ಹಾಕಿಸಿಕೊಳ್ಳಬೇಕೆಂಬ ದರ್ಪದ ಇರಾದೆ ಇಲ್ಲ. ಆದರೆ ಹಿಂದೆ ಹಿಪ್ ಜಾಯಿಂಟ್ ನೀ ತೊಂದರೆಗೆ ಸಿಲುಕಿ ಶಸ್ತ್ರಚಿಕಿತ್ಸೆಗೆ ಒಳಗಾದ ವೇಳೆ ಬಾಗುವುದು ಕಷ್ಟವಾಗಿದ್ದರಿಂದ ನಮ್ಮ ಆತ್ಮೀಯ ವಲಯದಿಂದ ಸಹಾಯ ಪಡೆದಿದ್ದೇನೆ. ಇನ್ನು ಬಹು ವರ್ಷಗಳ ಕಾಲ ನನ್ನೊಡನೆಯೇ ಒಂದು ಕುಟುಂಬದಂತೆ ಇರುವ ನಮ್ಮ ಕೆಲ ಸಿಬ್ಬಂದಿ ಬಳಿ ಕಾಲಿನ ಸಮಸ್ಯೆಯ ಹಿನ್ನೆಲೆಯಲ್ಲಿ ಪಡೆದುಕೊಂಡಿರುವ ಈ ಸಹಾಯಕ್ಕೆ ಮಾನವೀಯ ನೆಲೆ ಇದ್ದು ಅನಗತ್ಯವಾಗಿ ಇದಕ್ಕೆ ಅಂಹಕಾರ, ಅಧಿಕಾರದ ಅಮಲು ಎಂಬ ಶಬ್ದಗಳನ್ನು ಬಳಸುವುದು ಸರಿಯಾದ ಕ್ರಮವಲ್ಲ ಎಂದು ಅವರು ತಿಳಿಸಿದ್ದಾರೆ.

ಸಿದ್ದರಾಮಯ್ಯಗೆ ಸುಳ್ಳು ಹೇಳುವುದರಲ್ಲಿ ನೊಬೆಲ್ ಪ್ರಶಸ್ತಿ ನೀಡಬೇಕು: ಕೆ.ಎಸ್.ಈಶ್ವರಪ್ಪ

ಇನ್ನು ನನ್ನನ್ನು ಬಲ್ಲ ಎಲ್ಲರಿಗೂ ವ್ಯಕ್ತಿ ಗೌರವಕ್ಕೆ ಸಂಬಂಧಿಸಿದ ನನ್ನ ನಿಲುವುಗಳ ಬಗ್ಗೆ ಚೆನ್ನಾಗಿಯೇ ತಿಳಿದಿರುವ ಕಾರಣ ಈ ಬಗ್ಗೆ ಸ್ವಯಂ ವಿವರಣೆ ಕೊಡುವುದಾಗಲಿ ಇಲ್ಲವೇ ಸ್ವ ಮರುಕ ಪಡುವುದಾಗಲೀ ನಾನು ಮಾಡುವುದಿಲ್ಲ. ಮೂಲತಃ ಸಂವಿಧಾನದ ಆಶಯಗಳ ಪ್ರಕಾರವೇ ಬದುಕುವ ನನಗೆ ಸಮಾನತೆ, ವ್ಯಕ್ತಿ ಗೌರವ, ಪ್ರೀತಿ ವಿಶ್ವಾಸ ಹೊರತುಪಡಿಸಿ ಇತರೆ ಸಂಗತಿಗಳಲ್ಲಿ ಆಸಕ್ತಿ ಇಲ್ಲ ಎಂದು ಅವರು ತಿಳಿಸಿದ್ದಾರೆ.

ದೈಹಿಕ ತೊಂದರೆಗಾಗಿ ಪಡೆದ ಸಹಾಯವನ್ನು ಸಂಕುಚಿತ ಮನಸ್ಸಿನಿಂದ ನೋಡಬಾರದು ಎಂದು ಮಾಧ್ಯಮ ಮಿತ್ರರಲ್ಲಿ ನಾನು ಮನವಿ ಮಾಡುತ್ತೇನೆ. ಇನ್ನು ಅಗತ್ಯ ಸಹಾಯಕ್ಕಾಗಿ ನನ್ನ ಅಂಗರಕ್ಷಕನಿಗೆ ನನ್ನ ಧನ್ಯವಾದ ಎಂದು ಅವರು ಹೇಳಿದ್ದಾರೆ.

Latest Videos
Follow Us:
Download App:
  • android
  • ios