Asianet Suvarna News Asianet Suvarna News

ರಾಷ್ಟ್ರಧ್ವಜ ಹಾರಿಸುವ ಬದಲು ಹನುಮ ಧ್ವಜ ಹಾರಿಸಿದ್ದು ಸರಿಯಲ್ಲ: ಸಿಎಂ ಸಿದ್ದರಾಮಯ್ಯ

ರಾಷ್ಟ್ರ ಧ್ಬಜ ಹಾಗೂ ಕನ್ನಡ ಧ್ವಜ ಹಾರಿಸಲು ಅನುಮತಿ ನೀಡಲಾಗಿತ್ತು. ಆದರೆ, ರಾಷ್ಟ್ರ ಧ್ಬಜ ಹಾರಿಸುವ ಬದಲು ಹನುಮ ಧ್ವಜ ಹಾರಿಸಿದ್ದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದರು.

Hanuman  dhwaja removal issue CM Siddaramaiah reaction at chitradurga today rav
Author
First Published Jan 28, 2024, 4:08 PM IST

ಚಿತ್ರದುರ್ಗ/ಮಂಡ್ಯ (ಜ.28) ರಾಷ್ಟ್ರ ಧ್ಬಜ ಹಾರಿಸುವ ಬದಲು ಹನುಮ ಧ್ವಜ ಹಾರಿಸಿದ್ದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.

ಚಿತ್ರದುರ್ಗದ ಎಸ್.ಜೆಎಂ ಶಾಲಾ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದ ಕೆರಗೋಡು ಗ್ರಾಮಮದಲ್ಲಿ ಪೊಲೀಸರು ಹನುಮಧ್ವಜ ಇಳಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದರು.

ಕಾಂಗ್ರೆಸ್‌ನಲ್ಲಿ ಏನು ನಡ್ತೀದೆ? 'ಬಿಜೆಪಿ ಸಂಸದರನ್ನು ಗೆಲ್ಲಿಸಿ' ಎಂದ ಶಾಮನೂರು ಪರ ಎಂಬಿ ಪಾಟೀಲ್ ಬ್ಯಾಟಿಂಗ್!

ಈ ವೇಳೆ ರಾಷ್ಟ್ರ ಧ್ಬಜ ಹಾಗೂ ಕನ್ನಡ ಧ್ವಜ ಹಾರಿಸಲು ಅನುಮತಿ ನೀಡಲಾಗಿತ್ತು. ಆದರೆ, ರಾಷ್ಟ್ರ ಧ್ಬಜ ಹಾರಿಸುವ ಬದಲು ಹನುಮ ಧ್ವಜ ಹಾರಿಸಿದ್ದು ಸರಿಯಲ್ಲ ಎಂದು ಅಸಮಾಧಾನ ಹೊರಹಾಕಿದರು.

ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆನಪಿಗಾಗಿ ತಾಲೂಕಿನ ಕೆರಗೋಡು ಗ್ರಾಮದ 108 ಅಡಿ ಎತ್ತರದ ಧ್ವಜಸ್ಥಂಭದಲ್ಲಿ ಹನುಮ ಧ್ವಜವನ್ನು ಹಾರಿಸಲಾಗಿತ್ತು. ಇದನ್ನು ತೆರವುಗೊಳಿಸಲು ಅಧಿಕಾರಿಗಳು ಮುಂದಾದಾಗ ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದು, ಈ ವೇಳೆ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಐಟಿ ಇಡಿ ದಾಳಿಗೆ ಹೆದರಿ ಜಗದೀಶ ಶೆಟ್ಟರ್ ಬಿಜೆಪಿಗೆ ಸೇರಿದ್ರಾ? ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಹೇಳಿದ್ದೇನು?

ನಂತರ ಅಧಿಕಾರಿಗಳು ಸ್ಥಳದಲ್ಲಿ  144 ಸೆಕ್ಷನ್​ ಜಾರಿ ಮಾಡಿದರು. ಆದರೂ ಕೂಡ ಪ್ರತಿಭಟನೆ ಮುಂದುವರೆಸಿದ  ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು.

ಹನುಮಧ್ವಜ ವಿಚಾರದಲ್ಲಿ ವಿರೋಧ ಪಕ್ಷಗಳು ರಾಜಕೀಯ:

ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಧ್ವಜ ತೆರವು ಮಾಡಿರುವ ಸಂಬಂಧ ವಿರೋಧಪಕ್ಷಗಳು ರಾಜಕೀಯ ಮಾಡುತ್ತಿವೆ.  ಭಾರತ ದೇಶದ ಧ್ವಜ ಹಾರಿಸುವುದು ಬಿಟ್ಟು  ಭಗವಾಧ್ವಜ ಹಾರಿಸಿದ್ದು ಏಕೆ ಎಂದು ಅವರೇ ಹೇಳಲಿ.. ರಾಷ್ಟ್ರಧ್ವಜ ಹಾರಿಸಬೇಕಾದ ಧ್ವಜಸ್ತಂಭದಲ್ಲಿ ಬೇರೆ ಧ್ವಜ ಹಾರಿಸಲು ನಿಯಮಾನುಸಾರ ಅವಕಾಶ ಇಲ್ಲ ಎಂದರು. ಇದೇ ವೇಳೆ ಲೋಕಸಭಾ ಚುನಾವಣೆಯಲ್ಲಿ 15- 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಬಿಜೆಪಿಯವರಂತೆ 28 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಸುಳ್ಳು ಹೇಳುವುದಿಲ್ಲ. ಚುನಾವಣಾ ಸಮೀಕ್ಷೆಯನ್ನು ಮಾಡಿಸಿದ್ದು, ಅದರಂತೆ ಹೇಳುತ್ತಿದ್ದೇನೆ ಎಂದರು.

Follow Us:
Download App:
  • android
  • ios