ಜೆಡಿಎಸ್‌ ಕಾರ‍್ಯಕರ್ತರಿಗೆ ಪೊಲೀಸರ ಕಿರುಕುಳ ಸಹಿಸುವುದಿಲ್ಲ: ಎಚ್‌ಡಿಕೆ

ಜೆಡಿಎಸ್‌ ಕಾರ್ಯಕರ್ತರು, ಮುಖಂಡರು ಹಾಗೂ ನಮ್ಮ ಪಕ್ಷಕ್ಕೆ ಸೇರ್ಪಡೆ ಆಗುವವರ ವಿರುದ್ಧ ಪೊಲೀಸರ ದೌರ್ಜನ್ಯ ಮಿತಿಮೀರಿದೆ. ಇದಕ್ಕೆ ಕಡಿವಾಣ ಹಾಕಿಕೊಳ್ಳದಿದ್ದರೆ ಪೊಲೀಸರು ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

Harassment of JDS workers by police I will not tolerate it says HDK bengaluru rav

ಬೆಂಗಳೂರು (ಏ.3): ಜೆಡಿಎಸ್‌ ಕಾರ್ಯಕರ್ತರು, ಮುಖಂಡರು ಹಾಗೂ ನಮ್ಮ ಪಕ್ಷಕ್ಕೆ ಸೇರ್ಪಡೆ ಆಗುವವರ ವಿರುದ್ಧ ಪೊಲೀಸರ ದೌರ್ಜನ್ಯ ಮಿತಿಮೀರಿದೆ. ಇದಕ್ಕೆ ಕಡಿವಾಣ ಹಾಕಿಕೊಳ್ಳದಿದ್ದರೆ ಪೊಲೀಸರು ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ(HD Kumaraswamy) ಎಚ್ಚರಿಕೆ ನೀಡಿದರು.

ಯಲಹಂಕ ನ್ಯೂ ಟೌನ್‌(Yalahanka news town) ಸೇರಿದಂತೆ ಕ್ಷೇತ್ರದ ಹಲವಾರು ಕಡೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಯಲಹಂಕದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರಿಗೆ ಕಿರುಕುಳ ನೀಡುವ ಕೆಲಸ ಆಗುತ್ತಿದೆ. ಅನ್ಯ ಪಕ್ಷಗಳಿಂದ ನಮ್ಮ ಪಕ್ಷಕ್ಕೆ ಸೇರಲು ಬರುವ ಮುಖಂಡರು, ಕಾರ್ಯಕರ್ತರಿಗೆ ಬೆದರಿಕೆ ಹಾಕಲಾಗುತ್ತಿದೆ. ಇದನ್ನು ಸಹಿಸುವ ಪ್ರಶ್ನೆಯೇ ಇಲ್ಲ. ನೀವು ಪ್ರತಿ ತಿಂಗಳು ಸಂಬಳ ಪಡೆಯುವುದು ಜನರ ತೆರಿಗೆ ದುಡ್ಡಿನಿಂದ. ನೀವು ಅವರ ಸೇವೆ ಮಾಡಬೇಕೆ ವಿನಃ ಯಾರೋ ಶಾಸಕ ಹೇಳಿದಕ್ಕೆಲ್ಲ ತಲೆ ಆಡಿಸುವುದಲ್ಲ. ಇನ್ನೂ ಒಂದೇ ತಿಂಗಳು, ಆಗ ಈ ಸರ್ಕಾರ ಇರಲ್ಲ. ಆಗ ನೀವು ಪ್ರಾಯಶ್ಚಿತ್ತ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Bengaluru: ₹3332 ಕೋಟಿ ಆಸ್ತಿ ತೆರಿಗೆ ವಸೂಲಿ ಬಿಬಿಎಂಪಿ ದಾಖಲೆ

ಕಾರ್ಯಕರ್ತರು, ಮುಖಂಡರು ಹೆದರಬೇಕಿಲ್ಲ, ಯಾವುದೇ ಸಂದರ್ಭ ಬಂದರೂ ನೇರವಾಗಿ ನನ್ನನ್ನು ಸಂಪರ್ಕ ಮಾಡಬಹುದು. ನನಗೆ ದ್ವೇಷದ ರಾಜಕಾರಣ ಮಾಡಿ ಗೊತ್ತಿಲ್ಲ. ಎಲ್ಲರೂ ಸುಖ ಶಾಂತಿಯಿಂದ ಇರಬೇಕು ಎಂದು ಬಯಸುವವನು. ಹೀಗಾಗಿ ಎಂತಹ ಆಡಳಿತ ಬೇಕು ಎನ್ನುವುದನ್ನು ಜನರೇ ತೀರ್ಮಾನ ಮಾಡಿಕೊಳ್ಳಬೇಕು ಎಂದು ಹೇಳಿದರು.

ಯೋಜನೆಗಳ ಹೆಸರಿನಲ್ಲಿ ಲೂಟಿ

ಬೆಂಗಳೂರಿನಲ್ಲಿ ಯೋಜನೆಗಳ ಹೆಸರಿನಲ್ಲಿ ಲೂಟಿ ಮಾಡಲಾಗುತ್ತಿದೆ. ಜನರ ತೆರಿಗೆ ಹಣವನ್ನು ಹೊಡೆದುಕೊಳ್ಳುತ್ತಿದ್ದಾರೆ. ಜೆಡಿಎಸ್‌ ಸರಕಾರ ಬಂದರೆ ಇದಕ್ಕೆಲ್ಲಾ ಇತಿಶ್ರೀ ಹಾಡುತ್ತೇನೆ. ರಾಜಧಾನಿ ಬೆಂಗಳೂರಿನಲ್ಲಿ ಬಡವರಿಗೆ ಉಚಿತ ಮನೆ, ಉಚಿತ ಆರೋಗ್ಯ, ಅವರ ಮಕ್ಕಳಿಗೆ ಉಚಿತ ಶಿಕ್ಷಣ ಕೊಡಲಾಗುವುದು. ಸಾಮಾನ್ಯವಾಗಿ ಬಡ ಮಧ್ಯಮ ವರ್ಗದ ಜನರು ಸಾಲ ಮಾಡುವುದೇ ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಮನೆ ಕಟ್ಟುವುದಕ್ಕಾಗಿ. ಮುಂದೆ ಇವರು ಶಾಶ್ವತವಾಗಿ ಸಾಲ ಮಾಡುವುದನ್ನು ತಪ್ಪಿಸುವುದೇ ತಮ್ಮ ಉದ್ದೇಶ ಎಂದರು.

 

ದೇವೇಗೌಡರ ಸಂಧಾನ ವಿಫಲ: ಭವಾನಿ ರೇವಣ್ಣಗೆ ಹಾಸನ ಕ್ಷೇತ್ರದ ಟಿಕೆಟಿಲ್ಲ?

ಕ್ಷೇತ್ರ ಅಭ್ಯರ್ಥಿ ಮುನೇಗೌಡ, ಮಾಜಿ ಶಾಸಕ ಇ.ಕೃಷ್ಣಪ್ಪ, ಪಕ್ಷದ ಯಲಹಂಕ ಕ್ಷೇತ್ರದ ಅಧ್ಯಕ್ಷ ಕೃಷ್ಣಪ್ಪ, ಪಕ್ಷದ ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಪಿ.ರಂಗನಾಥ್‌ ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios