ಪ್ರಜ್ವಲ್ ರೇವಣ್ಣ ಇಂದು ಭಾರತಕ್ಕೆ ಬರುವ ನಿರೀಕ್ಷೆ, ವಿಮಾನ ನಿಲ್ದಾಣದಲ್ಲೇ ಮೊಕ್ಕಾಂ ಹೂಡಿದ ಎಸ್‌ಐಟಿ ತಂಡ
ಎರಡನೇ ಹಂತದ ಚುನಾವಣೆ ಮುಗಿದ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಇಂದು ರಾಜ್ಯಕ್ಕೆ ವಾಪಸ್ ಆಗುವ ನಿರೀಕ್ಷೆಯಿದೆ. ಹೀಗಾಗಿ ವಿಮಾನ ನಿಲ್ದಾಣದಲ್ಲಿ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.
ಬೆಂಗಳೂರು (ಮೇ.7): ಅಶ್ಲೀಲ ವಿಡಿಯೊಗಳು ವೈರಲ್ ಆದ ಬೆನ್ನಲ್ಲೇ ವಿದೇಶಕ್ಕೆ ತೆರಳಿರುವ ಸಂಸದ ಪ್ರಜ್ವಲ್ ರೇವಣ್ಣ ಇಂದು ರಾಜ್ಯಕ್ಕೆ ವಾಪಸ್ ಆಗುವ ನಿರೀಕ್ಷೆಯಿದೆ. ಅತ್ಯಾಚಾರ ಹಾಗೂ ಬೆದರಿಕೆ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಎಸ್‌ಐಟಿ ಲುಕ್ ಔಟ್ ನೋಟೀಸ್ ಜೊತೆಗೆ ಬ್ಲೂಕಾರ್ನರ್ ನೋಟಿಸ್ ಜಾರಿ ಮಾಡಲಾಗಿದೆ. ಆದರೂ ಪ್ರಜ್ವಲ್ ಭಾರತಕ್ಕೆ ಬಂದಿಲ್ಲ.
ಇಂದು ಅಥವಾ ನಾಳೆ ಪ್ರಜ್ವಲ್ ಬರ್ತಾರೆ ಎಂದು ಜೆಡಿಎಸ್ ನಾಯಕರು ನಾಯಕರು ಹೇಳಿಕೆ ನೀಡಿದ್ದರು. ಆದರೆ ಕಳೆದ ಏಪ್ರಿಲ್ 26 ರಂದು ಬೆಂಗಳೂರಿಂದ ವಿದೇಶಕ್ಕೆ ಹಾರಿರುವ ಪ್ರಜ್ವಲ್ ರೇವಣ್ಣ ಇಷ್ಟು ದಿನವಾದರೂ ಪತ್ತೆ ಇಲ್ಲ. ಈಗಾಗಲೇ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥ ಮಹಿಳೆಯ ಅಪಹರಣ ಮಾಡಿದ ಕೇಸ್ ಗೆ ಸಂಬಂಧಿಸಿ ತಂದೆ ಹೆಚ್ ಡಿ ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸಿದೆ. ಇದರ ಬೆನ್ನಲ್ಲೇ ಪ್ರಜ್ವಲ್ ವಿದೇಶದಿಂದ ರಾಜ್ಯಕ್ಕೆ ಮರಳಲಿದ್ದಾರೆ ಎಂಬ ವದಂತಿ ದಟ್ಟವಾಗಿ ಹಬ್ಬಿತ್ತು.
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ದೇವೇಗೌಡ, ಎಚ್‌ಡಿಕೆ ತಿರುಚಿದ ಫೋಟೋ, ವಿಡಿಯೋ ಪ್ರಸಾರಕ್ಕೆ ತಡೆ
ಆದರೆ, ಮಂಗಳವಾರ ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಮತದಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂಬ ಲೆಕ್ಕಾಚಾರದಲ್ಲಿ ಪ್ರಜ್ವಲ್ ತಮ್ಮ ಪ್ರಯಾಣವನ್ನು ಮುಂದಕ್ಕೆ ಹಾಕಿಕೊಂಡಿದ್ದಾರೆ. ಮಂಗಳವಾರ ಚುನಾವಣೆ ಮುಗಿದ ಬಳಿಕ ರಾಜ್ಯಕ್ಕೆ ವಾಪಸ್ ಆಗಬಹುದು ಎನ್ನಲಾಗುತ್ತಿದೆ. ಮತದಾನದ ಬಳಿಕ ಪ್ರಜ್ವಲ್ ರನ್ನ ಎಸ್ಐಟಿ ವಶಕ್ಕೆ ಪಡೆದ್ರು ರಾಜಕೀಯವಾಗಿ ಏನು ಎಫೆಕ್ಟ್ ಆಗಲ್ಲ. ರಾಜಕೀಯ ಲೆಕ್ಕಾಚಾರದ ಮೇಲೆ ಇಂದು ವಿದೇಶದಿಂದ ಆಗಮಿಸುವ ಸಾಧ್ಯತೆ ಇದೆ.
ಪ್ರಜ್ವಲ್ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪದಡಿ ಪ್ರತ್ಯೇಕವಾಗಿ ಎರಡು ಎಫ್‌ಐಆರ್ ದಾಖಲಾಗಿವೆ. ಪ್ರಜ್ವಲ್ ಇದ್ದಾರೆ ಎನ್ನಲಾದ ಅಶ್ಲೀಲ ವಿಡಿಯೋ ಸಂಬಂಧ ಎಸ್‌ಐಟಿ ತನಿಖೆ ಕೈಗೊಂಡಿದ್ದು, ಎರಡು ಬಾರಿ ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ಗೆ ನೋಟಿಸ್ ನೀಡಿತ್ತು. ಆದರೆ, ಪ್ರಜ್ವಲ್ ವಿದೇಶದಲ್ಲಿ ಇರುವುದರಿಂದ ಗೈರು ಹಾಜರಾಗಿದ್ದಾರೆ. ಇದರ ಬೆನ್ನಲ್ಲೇ ಎಸ್ಐಟಿ ಲುಕೌಟ್ ನೋಟಿಸ್ ಹಾಗೂ ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸಿದೆ.
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ತನಿಖೆ ಹಾದಿ ತಪ್ಪಿಸಲು ಕುತಂತ್ರ, ಸಿದ್ದು, ಡಿಕೆಶಿ
ಏರ್‌ಪೋರ್ಟ್‌ನಲ್ಲಿ ಎಸ್ಐಟಿ ಟೀಂ ಮೊಕ್ಕಾಂ: ಇನ್ನು ಪ್ರಜ್ವಲ್ ರೇವಣ್ಣ ತಂದೆಯ ಬಂಧನದ ಬಳಿಕ ವಿದೇಶದಿಂದ ರಾಜ್ಯಕ್ಕೆ ವಾಪಾಸಾಗುವ ನಿರೀಕ್ಷೆಯಲ್ಲಿ ಎಸ್‌ಐಟಿ ಅಧಿಕಾರಿಗಳ ತಂಡ ಕಳೆದ ಎರಡು ದಿನಗಳಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀಡುಬಿಟ್ಟಿದೆ. ವಿದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ ವಹಿಸಿದೆ. ಅಂತೆಯೆ ಗೋವಾ, ಚೆನ್ನೈ, ಕೊಚ್ಚಿನ್ ಸೇರಿದಂತೆ ನೆರೆಯ ರಾಜ್ಯಗಳ ವಿಮಾನ ನಿಲ್ದಾಣದ ವಲಸೆ ಅಧಿಕಾರಿಗಳಿಗೂ ಆರೋಪಿ ಪ್ರಜ್ವಲ್ ಬಗ್ಗೆ ಮಾಹಿತಿ ನೀಡಿದೆ. ಪ್ರಜ್ವಲ್ ಯಾವಾಗ ವಾಪಾಸ್ ಆದರೂ ಎಸ್‌ಐಟಿ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲೇ ವಶಕ್ಕೆ ಪಡೆಯಲಿದ್ದಾರೆ.