ಬಲತ್ಕಾರ ಪ್ರಕರಣ ಸಂಬಂಧ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ತಮ್ಮ ಪರ ವಕೀಲರನ್ನು ನೇಮಿಸಿಕೊಳ್ಳಲು ಮತ್ತೊಮ್ಮೆ ಕಾಲಾವಕಾಶ ಕೋರಿದ್ದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಕಾನೂನು ಸೇವಾ ಪ್ರಾಧಿಕಾರದಿಂದಲೇ ಮಹಿಳಾ ವಕೀಲರೊಬ್ಬರನ್ನು ನೇಮಕ ಮಾಡಿದೆ.

ಬೆಂಗಳೂರು (ಏ.30): ಬಲತ್ಕಾರ ಪ್ರಕರಣ ಸಂಬಂಧ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ತಮ್ಮ ಪರ ವಕೀಲರನ್ನು ನೇಮಿಸಿಕೊಳ್ಳಲು ಮತ್ತೊಮ್ಮೆ ಕಾಲಾವಕಾಶ ಕೋರಿದ್ದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಕಾನೂನು ಸೇವಾ ಪ್ರಾಧಿಕಾರದಿಂದಲೇ ಮಹಿಳಾ ವಕೀಲರೊಬ್ಬರನ್ನು ನೇಮಕ ಮಾಡಿದೆ.

ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಾಲಯ, ಪ್ರಜ್ವಲ್‌ ರೇವಣ್ಣ ಕಾಲಾವಕಾಶ ಕೋರುತ್ತಿರುವುದು ಸಾಕ್ಷ್ಯ ವಿಚಾರಣೆ ವಿಳಂಬಕ್ಕೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು. ಕಾನೂನು ಸೇವಾ ಪ್ರಾಧಿಕಾರದಿಂದಲೇ ಮಹಿಳಾ ವಕೀಲರ ನೇಮಕ ಮಾಡಿ, ನಿಗದಿಯಂತೆ ಮೇ 2ರಿಂದ ವಿಚಾರಣೆ ನಡೆಯಲಿದೆ ಎಂದು ತಿಳಿಸಿತು.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪ್ರಕರಣ: ವಿಚಾರಣೆ ಮುಂದೂಡಲು ಒಪ್ಪದ ಕೋರ್ಟ್‌

ಈ ನಡುವೆ, ಮಹಿಳಾ ಜನಪ್ರತಿನಿಧಿ ವಿರುದ್ಧ ಮೇಲಿನ ಪ್ರಕರಣದಿಂದಲೂ ವಕೀಲ ಅರುಣ್‌ ವಕಾಲತ್ತಿನಿಂದ ನಿವೃತ್ತಿ ಹೊಂದಿದ್ದು, ಈ ಪ್ರಕರಣಕ್ಕೂ ಬೇರೆ ವಕೀಲರ ನೇಮಕಕ್ಕೆ ಕಾಲಾವಕಾಶ ನೀಡಬೇಕು ಎಂದು ಪ್ರಜ್ವಲ್‌ ರೇವಣ್ಣ ಮನವಿ ಮಾಡಿದರು. ಮೇ 5ರೊಳಗೆ ವಕೀಲರನ್ನು ನೇಮಕ ಮಾಡಿಕೊಳ್ಳುವಂತೆ ನ್ಯಾಯಾಲಯ ಸೂಚನೆ ನೀಡಿತು.

ಸಾಕ್ಷಿಗಳಿವೆ ಬೇಲ್ ಕೊಡೋಲ್ಲ ಎಂದ ಕೋರ್ಟ್:

 ಮನೆ ಕೆಲಸದಾಕೆ ಮೇಲಿನ ಬಲತ್ಕಾರ ಪ್ರಕರಣದಲ್ಲಿ ಇತರೆ ಆರೋಪಿಗಳ ಮೇಲಿನ ವಿಚಾರಣೆಗೆ ತಡೆ ನೀಡಲಾಗಿದೆ ಎಂಬ ಆಧಾರದಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಲಾಗದು ಎಂದು ಹೈಕೋರ್ಟ್‌ ಸ್ಪಷ್ಟವಾಗಿ ಹೇಳಿತ್ತು. 

ಮನೆ ಕೆಲಸದಾಕೆ ಮೇಲಿನ ಬಲತ್ಕಾರ ಪ್ರಕರಣದಲ್ಲಿ (ಮೊದಲನೇ ಬಲತ್ಕಾರ ಕೇಸ್‌) ಜಾಮೀನು ಕೋರಿ ಪ್ರಜ್ವಲ್‌ ರೇವಣ್ಣ ಎರಡನೇ ಬಾರಿಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರದೀಪ್‌ ಸಿಂಗ್‌ ಯೆರೂರ್‌ ಅವರ ಪೀಠ ಬೇಲ್ ತಿರಸ್ಕರಿಸಿತ್ತು.

 ಪ್ರಕರಣದ ಇತರೆ ಆರೋಪಿಗಳ ವಿರುದ್ಧ ತಡೆಯಾಜ್ಞೆ ಇದ್ದರೂ ಪ್ರಜ್ವಲ್‌ ವಿರುದ್ಧ ನಂಬಲರ್ಹ ಸಾಕ್ಷಿಗಳಿವೆ. ಇತರೆ ಆರೋಪಿಗಳ ಮೇಲಿನ ವಿಚಾರಣೆಗೆ ತಡೆ ನೀಡಲಾಗಿದೆ ಎಂಬ ಆಧಾರದಲ್ಲಿ ಪ್ರಮುಖ ಆರೋಪಿ ಜಾಮೀನು ಕೋರಲಾಗದು. ವಿಶೇಷವಾದ ಕಾರಣ ಇಲ್ಲದಿದ್ದರೆ ಜಾಮೀನು ನೀಡಲಾಗುತ್ತದೆಯೇ ಎಂದು ಪ್ರಶ್ನಿಸಿತಲ್ಲದೆ ಅರ್ಜಿಗೆ ಸರ್ಕಾರ ಆಕ್ಷೇಪಣೆ ಸಲ್ಲಿಸಬೇಕು ಎಂದು ಸೂಚಿಸಿ ವಿಚಾರಣೆಯನ್ನು ಏ.15ಕ್ಕೆ ಮುಂದೂಡಿತ್ತು.

ಇದನ್ನೂ ಓದಿ:ಒಂಟಿ ಮನೆ ಗುರುತಿಸಿ ಕಳ್ಳತನ, ಡಿಜೆ ಹಳ್ಳಿ ಲೇಡಿ ಗ್ಯಾಂಗ್ ಅರೆಸ್ಟ್, ₹14 ಲಕ್ಷ ಮೌಲ್ಯದ ಚಿನ್ನ ಜಪ್ತಿ

 ಪ್ರಜ್ವಲ್‌ ಜಾಮೀನು ಅರ್ಜಿಯನ್ನು ಕಳೆದ ಅಕ್ಟೋಬರ್‌ನಲ್ಲಿ ಹೈಕೋರ್ಟ್‌ ತಿರಸ್ಕರಿಸಿತ್ತು. ನಂತರ ಸುಪ್ರೀಂ ಕೋರ್ಟ್‌ನಿಂದಲೂ ತಿರಸ್ಕೃತವಾಗಿತ್ತು. ಈಗ ಕಳೆದ ಮಾರ್ಚ್‌ನಲ್ಲಿ ಪ್ರಜ್ವಲ್‌ ಸಲ್ಲಿಸಿದ್ದ ಎರಡನೇ ಜಾಮೀನು ಅರ್ಜಿಯನ್ನು ಅಧೀನ ನ್ಯಾಯಾಲಯ ತಿಸ್ಕರಿಸಿತ್ತು. ಇದರಿಂದ ಹೈಕೋರ್ಟ್‌ಗೆ ಎರಡನೇ ಬಾರಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಬಳಿಕ ವಕೀಲರ ನೇಮಕ ವಿಳಂಬವಾಗುತ್ತಿದೆಯಂತೆ ಹೇಳಿದ್ದರು. ಆದರೆ ಕೋರ್ಟ್ ಇದಕ್ಕೊಪ್ಪದೇ ಮಹಿಳಾ ವಕೀಲರನ್ನು ನೇಮಕ ಮಾಡಿದೆ. ಇದೀಗ ಮುಂದಿನ ವಿಚಾರಣೆ ಬಗ್ಗೆ ಕುತೂಹಲ ಮೂಡಿಸಿದೆ.