Asianet Suvarna News Asianet Suvarna News

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಎಸ್‌ಐಟಿ ತನಿಖೆಗೆ ಸಿಎಂ ತೀರ್ಮಾನ!

ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ತನಿಖೆ ನಡೆಸಲು ಎಸ್‌ಐಟಿ ತಂಡ ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

Hassan MP Prajwal Revanna sex scanda case CM Siddaramaiah orders special probe rav
Author
First Published Apr 27, 2024, 10:48 PM IST

ಬೆಂಗಳೂರು (ಏ.27): ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ತನಿಖೆ ನಡೆಸಲು ಎಸ್‌ಐಟಿ ತಂಡ ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದ ಹಿನ್ನೆಲೆ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಕೆಲವು ದಿನಗಳಿಂದ ಹಾಸನ ಜಿಲ್ಲೆಯಲ್ಲಿ ಪೆನ್‌ಡ್ರೈವ್ ಮೂಲಕ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಹಿನ್ನೆಲೆ ಎಸ್‌ಐಟಿ ತಂಡ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ಹಿನ್ನೆಲೆ ಸರ್ಕಾರ ವಿಶೇಷ ತಂಡ ರಚನೆ ಮಾಡುವ ಕುರಿತು ತೀರ್ಮಾನ ಕೈಗೊಂಡಿದೆ ಎಂದು ತಿಳಿಸಿದಿದ್ದಾರೆ. ಈ ನಡುವೆ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಹಾಸನ ಪೆನ್‌ಡ್ರೈವ್ ಪ್ರಕರಣ: ಇದರ ಬಗ್ಗೆ ಕುಮಾರಣ್ಣ, ಅಶೋಕಣ್ಣ ಹೇಳಬೇಕು -ಡಿಕೆ ಶಿವಕುಮಾರ 

ಏನಿದು ಘಟನೆ?

ಹಾಸನ ಸಂಸದ ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ಸಾವಿರಾರು ವಿಡಿಯೋಗಳು ಎರಡು ಮೂರು ಪೆನ್‌ಡ್ರೈವ್‌ಗಳಲ್ಲಿ ಹಾಸನ ಜಿಲ್ಲೆಯಾದ್ಯಂತ ಹರಿದಾಡುತ್ತಿವೆ. ಒಂದಲ್ಲ, ಎರಡಲ್ಲ ಸಾವಿರಾರು ವಿಡಿಯೋಗಳಿವೆ ಎಂದು ಹೇಳಲಾಗಿದೆ. ಹಲವು ಮಹಿಳೆಯರೊಂದಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ. ಟ್ವಿಟರ್, ಸೋಷಿಯಲ್ ಮಿಡಿಯಾಗಳ ಮೂಲಕವೂ ವಿಡಿಯೋ ವೈರಲ್ ಆಗುತ್ತಿವೆ. ಆದರೆ ಇದು ಮಾರ್ಫ್ ಮಾಡಲಾದ ವಿಡಿಯೋವಾಗಿದ್ದು ದುರುದ್ದೇಶದಿಂದ ಕಿಡಿಗೇಡಿಗಳು ಹರಿಬಿಟ್ಟಿದ್ದಾರೆಂದು ಪ್ರಜ್ವಲ್ ರೇವಣ್ಣ ಪ್ರತಿಕ್ರಿಯಿಸಿದ್ದರು. ಆದರೆ ಇನ್ನೊಂದೆಡೆ ಇದು ನೈಜ ವಿಡಿಯೋ ಎಂದು ಹೇಳಲಾಗುತ್ತಿದೆ. ಈ ನಡುವೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧುರಿ ಕೂಡ ಸಿಎಂ ಗೆ ಪತ್ರ ಬರೆದು ತನಿಖೆಗೆ ಆಗ್ರಹಿಸಿದ್ದರು. ಹೀಗಾಗಿ ಇದರ ಸತ್ಯಾಸತ್ಯತೆ ತಿಳಿಯಲು ಎಸ್‌ಐಟಿ ತನಿಖೆಗೆ ಮುಂದಾಗಿರುವ ಸಿಎಂ ಸಿದ್ದರಾಮಯ್ಯ. ತನಿಖೆ ಬಳಿಕವಷ್ಟೇ ನಿಜಾಂಶ ಏನೆಂಬುದು ತಿಳಿದುಬರಲಿದೆ

Latest Videos
Follow Us:
Download App:
  • android
  • ios