HD Deve Gowda health update: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಳಿ ಮತ್ತು ಜ್ವರದಿಂದ ಬಳಲುತ್ತಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ.
ಬೆಂಗಳೂರು (ಅ.8): ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಮವಾರ ರಾತ್ರಿ ಚಳಿ, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾ.ಸುದರ್ಶನ್ ಬಲ್ಲಾಳ್ ಅವರ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗಿದೆ. ಆಸ್ಪತ್ರೆಯ ತೀವ್ರಾ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದ್ದು, ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಬುಧವಾರ ವಾರ್ಡ್‌ಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಹೋರಾಟದಲ್ಲೇ ಜೀವ ಸವೆಸಿದ ದೇವೇಗೌಡರಿಗೆ ಈ ವಯಸ್ಸಿನಲ್ಲೂ ಇದೆಂಥಾ ನೋವು?
ತಂದೆ ದೇವೇಗೌಡರು ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಮಂಗಳವಾರ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಎಚ್.ಡಿ.ದೇವೇಗೌಡರ ಆರೋಗ್ಯದ ಬಗ್ಗೆ ಯಾರೂ ಕೂಡ ಆತಂಕಪಡುವ ಅಗತ್ಯವಿಲ್ಲ. ಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಮಾಜಿ ಪ್ರಧಾನಿ ದೇವೇಗೌಡರ ಹೆಸರಲ್ಲಿ ತುಂಡು ಆಸ್ತಿಯಿಲ್ಲ, ಸ್ವಂತ ಮನೆಯೂ ಇಲ್ಲ; ಹೆಚ್.ಡಿ. ಕುಮಾರಸ್ವಾಮಿ
