ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬೀಳುವ ಮುನ್ನಾದಿನ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ನಗರದ ಲಕ್ಷ್ಮೇ ವೆಂಕಟೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಿದರು.
ಬೆಂಗಳೂರು (ಮೇ13) : ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬೀಳುವ ಮುನ್ನಾದಿನ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ನಗರದ ಲಕ್ಷ್ಮೇ ವೆಂಕಟೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಿದರು.
ಶುಕ್ರವಾರ ಜೆ.ಪಿ.ನಗರದಲ್ಲಿನ ದೇವಾಲಯಕ್ಕೆ ತೆರಳಿ ಪೂಜೆ ನಡೆಸಿದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರತಿ ವರ್ಷ ನನ್ನ ಆರೋಗ್ಯಕ್ಕೆ ಪೂಜೆ ನೆರವೇರಿಸಲಾಗುತ್ತದೆ. ಕಳೆದ ಐದು ವರ್ಷಗಳಿಂದ ಲಕ್ಷ್ಮೇ ನರಸಿಂಹ, ಯೋಗಾನರಸಿಂಹ, ವೆಂಕಟೇಶ್ವರನಿಗೆ ತಪ್ಪದೇ ಪೂಜೆ ನಡೆಸಲಾಗುತ್ತದೆ ಎಂದರು ಹೇಳಿದರು.
Karnataka assembly election: ಜೆಡಿಎಸ್ ಶಾಸಕರ ಹಿಡಿದಿಡಲು ಗೌಡ, ಎಚ್‌ಡಿಕೆ ತಂತ್ರ!
ಈ ಇಳಿವಯಸ್ಸಿನಲ್ಲಿಯೂ ಏನಾದರೂ ಹೋರಾಟ ಮಾಡಲು ಮತ್ತು ಪ್ರಾದೇಶಿಕ ಪಕ್ಷ ಉಳಿಸಲು ಶ್ರಮ ಹಾಕಲು ಈ ಮಹಾನುಭವ ನೀಡಿದ ಶಕ್ತಿಯೇ ಕಾರಣ. ಹೀಗಾಗಿ ಪೂಜೆ ಮಾಡಲಾಗುತ್ತಿದೆ. ಇದರಲ್ಲಿ ಮತ್ತೇನು ವಿಶೇಷತೆ ಇಲ್ಲ ಎಂದರು.
ಜೆಡಿಎಸ್ ಶಾಸಕರ ಹಿಡಿದಿಡುವ ಹೊಣೆ ಜಿಟಿಡಿಗೆ
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ಸಾಧ್ಯತೆ ಇದೆ ಎಂದು ಸಮೀಕ್ಷೆಗಳ ವರದಿ ಬರುತ್ತಿದ್ದಂತೆ ತಮ್ಮ ಪಕ್ಷದವರನ್ನು ರಾಷ್ಟ್ರೀಯ ಪಕ್ಷಗಳು ಹೈಜಾಕ್ ಮಾಡಬಹುದು ಎಂಬ ಭೀತಿಯಿಂದ ಜೆಡಿಎಸ್ ತನ್ನವರನ್ನು ಹಿಡಿದಿಟ್ಟುಕೊಳ್ಳಲು ಕಾರ್ಯತಂತ್ರ ರೂಪಿಸಲು ಮುಂದಾಗಿದೆ.
ಈ ಸಂಬಂಧ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ರಾಜಕೀಯ ರಣತಂತ್ರ ರೂಪಿಸಲು ಕಾರ್ಯಪ್ರವೃತ್ತರಾಗಿದ್ದಾರೆ. ಶನಿವಾರ ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಶಾಸಕ ಜಿ.ಟಿ.ದೇವೇಗೌಡ ಅವರೊಂದಿಗೆ ಸುಮಾರು ಒಂದು ತಾಸಿಗಿಂತ ಹೆಚ್ಚು ಕಾಲ ಸಮಾಲೋಚನೆ ನಡೆಸಿದರು. ಹಳೇ ಮೈಸೂರು ಭಾಗ ಜೆಡಿಎಸ್‌ನ ಭದ್ರಕೋಟೆ ಎನ್ನಿಸಿಕೊಂಡಿದೆ. ಈ ಭಾಗದಲ್ಲಿ ಜೆಡಿಎಸ್‌ನಿಂದ ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರು ಆಯ್ಕೆಯಾಗಿ ಬರುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಇವರನ್ನು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರ ರಚಿಸಲು ಸೆಳೆಯುವ ಸಾಧ್ಯತೆ ಇದೆ. ಹೀಗಾಗಿ ಹಳೇ ಮೈಸೂರು ಭಾಗದಲ್ಲಿ ಗೆದ್ದು ಬರುವ ಶಾಸಕರನ್ನು ಹಿಡಿದಿಟ್ಟುಕೊಳ್ಳುವಂತೆ ದೇವೇಗೌಡ ಅವರು ಜಿ.ಟಿ.ದೇವೇಗೌಡ ಅವರಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಈ ನಡುವೆ, ಪಕ್ಷದ ಮುಂದಾಳತ್ವದಲ್ಲಿ ಸರ್ಕಾರ ರಚನೆಯಾದರೆ, ಜೆಡಿಎಸ್ ಪ್ರಬಲವಾಗಿರುವ ಹಳೇ ಮೈಸೂರು ಭಾಗದಲ್ಲಿ ಯಾವ ರೀತಿ ಸ್ಥಾನಮಾನಗಳನ್ನು ಹಂಚಿಕೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆಯೂ ಮಾತುಕತೆ ನಡೆಸಲಾಗಿದೆ ಎನ್ನಲಾಗಿದೆ. ಶನಿವಾರ ಫಲಿತಾಂಶ ಪ್ರಕಟವಾಗಲಿದ್ದು, ನಂತರ ಮುಂದಿನ ನಡೆಯ ಬಗ್ಗೆ ಯಾವ ತೀರ್ಮಾನ ಕೈಗೊಳ್ಳಬೇಕು ಎಂಬುದರ ಕುರಿತು ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ. ಸುಮಾರು ಒಂದು ತಾಸಿಗಿಂತ ಹೆಚ್ಚು ಸಮಯ ಸಮಾಲೋಚನೆ ನಡೆಸಿದ ಬಳಿಕ ಜಿ.ಟಿ.ದೇವೇಗೌಡ ತೆರಳಿದರು.
ಕುಮಾರಸ್ವಾಮಿಗೆ ಪಂಚರತ್ನ ಯೋಜನೆ ಬಲ: ದೇವೇಗೌಡ
ಇದೇ ವೇಳೆ ಶನಿವಾರ ರಾಜ್ಯದ 224 ಕ್ಷೇತ್ರಗಳ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ನಗರದ ಜೆ.ಪಿ.ನಗರದ ತಿರುಮಲಗಿರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
