ಪಠ್ಯಪುಸ್ತಕ ಪರಿಷ್ಕರಣೆ ವಾಪಸ್ ಪಡೆದು ಹಳೆಯ ಪಠ್ಯವನ್ನೇ ಮುಂದುವರೆಸಬೇಕು ಎಂದು ಆಗ್ರಹಿಸಿ ಶನಿವಾರ ಹಲವು ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರು (ಜೂ.18): ಪಠ್ಯಪುಸ್ತಕ ಪರಿಷ್ಕರಣೆ ವಾಪಸ್ ಪಡೆದು ಹಳೆಯ ಪಠ್ಯವನ್ನೇ ಮುಂದುವರೆಸಬೇಕು ಎಂದು ಆಗ್ರಹಿಸಿ ಶನಿವಾರ ಹಲವು ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತಿತರ ಗಣ್ಯರು ಪಾಲ್ಗೊಳ್ಳುತ್ತಿದ್ದು ಹಳೆಯ ಪಠ್ಯವನ್ನೇ ಮುಂದುವರೆಸಬೇಕು ಎಂದು ಆಗ್ರಹಿಸಲಿದ್ದಾರೆ. ಪರಿಷ್ಕೃತ ಪಠ್ಯ ಪುಸ್ತಕದಲ್ಲಿ ನಾಡು-ನುಡಿಗೆ ಅಪಮಾನ ಮಾಡಲಾಗಿದ್ದು ತಕ್ಷಣವೇ ಹಳೆಯ ಪಠ್ಯವನ್ನೇ ಮುಂದುವರೆಸಬೇಕು. ಇಷ್ಟೆಲ್ಲಾ ಗೊಂದಲ ಸೃಷ್ಟಿಯಾಗಲು ಕಾರಣರಾದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಸಾವಿರಾರು ಪ್ರತಿಭಟನಾಕಾರರು ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನಾ ರಾರಯಲಿ ನಡೆಸಲಿದ್ದಾರೆ.
ಪ್ರತಿಭಟನೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಈಗಾಗಲೇ ಬೆಂಬಲ ವ್ಯಕ್ತಪಡಿಸಿದ್ದು, ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಧಾನ ಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ರಾಜಕೀಯ ನಾಯಕರೂ ಪ್ರತಿಭಟನೆಗೆ ನೈತಿಕ ಬೆಂಬಲ ಸೂಚಿಸಿದ್ದಾರೆ. ವಿಶ್ವಮಾನವ ಕ್ರಾಂತಿಕಾರಿ ಕುವೆಂಪು ಹೋರಾಟ ಸಮಿತಿಯಿಂದ ಪ್ರತಿಭಟನೆ ಆಯೋಜಿಸಿದ್ದು ನಾಡಿನ ಹಲವು ಭಾಗದಿಂದ ಆಗಮಿಸುವ ಚಿಂತಕರು, ಸಾಹಿತಿಗಳು, ಜನಪರ ಹೋರಾಟಗಾರರು ಪಾಲ್ಗೊಳ್ಳಲಿದ್ದಾರೆ. ದಲಿತ ಸಂಘಟನೆ, ಕಾರ್ಮಿಕ ಸಂಘಟನೆ, ವಿದ್ಯಾರ್ಥಿ ಸಂಘಟನೆ , ಸ್ವಾಮೀಜಿಗಳು, ರಾಜ್ಯ ಒಕ್ಕಲಿಗರ ಸಂಘ, ಒಕ್ಕಲಿಗ ನೌಕರರ ಸಂಘ, ಕನ್ನಡಪರ ಹೋರಾಟಗಾರರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.
ರಾಷ್ಟ್ರಪತಿ ಚುನಾವಣೆಗೆ ದೇವೇಗೌಡ್ರು ಸ್ಪರ್ಧಿಸುತ್ತಾರಾ? ಎಲ್ಲಾ ಗೊಂದಲಗಳಿಗೆ HDK ತೆರೆ
ಯಾವುದೇ ಕಾರಣಕ್ಕೂ ಪರಿಷ್ಕೃತ ಪಠ್ಯ ಪುಸ್ತಕಕ್ಕೆ ಅವಕಾಶ ನೀಡಬಾರದು. ಹಳೆಯ ಪಠ್ಯ ಪುಸ್ತಕಗಳನ್ನೇ ಮುಂದುವರೆಸಬೇಕು. ಶಿಕ್ಷಣ ವ್ಯವಸ್ಥೆಯಲ್ಲಿ ಗೊಂದಲ ಉಂಟಾಗಲು ಕಾರಣರಾದ ಶಿಕ್ಷಣ ಸಚಿವ ನಾಗೇಶ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಶನಿವಾರ ಬೆಳಿಗ್ಗೆ 11 ರಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಸಭೆ ಆಯೋಜಿಸಿದ್ದು ಹಲವು ಮುಖಂಡರು ಮಾತನಾಡಲಿದ್ದಾರೆ. ಬಳಿಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು.
ರಾಷ್ಟ್ರಪತಿ ಅಭ್ಯರ್ಥಿಯಾಗಿ ಎಚ್. ಡಿ ದೇವೇಗೌಡ?: ದೀದೀ ಸಭೆಯಲ್ಲಿ ಭಾಗಿ!
ಕರವೇ ಪ್ರತಿಭಟನೆ: ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಕನ್ನಡ ವಿರೋಧಿ ನೀತಿ ಖಂಡಿಸಿ ಹಾಗೂ ನಾಡ ದ್ರೋಹಿಗಳ ಬಂಧಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‌ಶೆಟ್ಟಿಬಣ) ಜಿಲ್ಲಾ ಘಟಕವು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಇತ್ತೀಚಿಗೆ ರಾಜ್ಯ ಸರ್ಕಾರ ಪಠ್ಯ ಪುಸ್ತಕ ಪರಿಷ್ಕರಣೆಗಾಗಿ ಸಮಿತಿ ರಚನೆ, ಮಾಡಿ ಅದರ ನೇತೃತ್ವವನ್ನು ರೋಹಿತ್ ಚಕ್ರತೀರ್ಥ ರವರಿಗೆ ವಹಿಸಿತ್ತು. ಶಾಲಾ ಮಕ್ಕಳಿಗೆ ನಾಡು ನುಡಿಗಾಗಿ ದುಡಿದವರ, ಮಡಿದವರ, ಹಿರಿಮೆಯ, ವ್ಯಾಸ್ತವ ಸಂಗತಿಗಳನ್ನು ತಿಳಿಸಿಕೊಡಬೇಕಾಗಿತ್ತು. ದುರಂತವೆಂದರೆ ಈಗಾಗಲೇ ತಮ್ಮ ನಡೆ ನುಡಿಯಲ್ಲಿ ಕನ್ನಡ ವಿರೋಧಿತನವನ್ನೇ ಮೈಗೂಡಿಸಿಕೊಂಡ ವ್ಯಕ್ತಿಗೆ ನೇತೃತ್ವವನ್ನು ನೀಡುವ ಮೂಲಕ ರಾಜ್ಯ ಸರ್ಕಾರ ಎಡುವಿತು ಎಂದರು.
