'ಚೆಲ್ಲಾಟ ನಿಲ್ಲಿಸಿ, ಬೆಂಗಳೂರಿಗರು ಬದುಕುಳಿಯಲು 20 ದಿನ ಲಾಕ್‌ಡೌನ್ ಘೋಷಿಸಿ'
ದಿನೇ ದಿನೇ ಹೆಚ್ಚಾಗುತ್ತಿದೆ ಕೊರೋನಾ ಅಟ್ಟಹಾಸ| ಬೆಂಗಳೂರಿನ ನಾಲ್ಕು ವಾರ್ಡ್‌ಗಳು ಸೀಲ್‌ಡೌನ್| ಸೀಲ್‌ಡೌನ್ ಬೇಡ ಬೆಂಗಳೂರಿನಾದ್ಯಂತ ಇಪ್ಪತ್ತು ದಿನ ಲಾಕ್‌ಡೌನ್ ಘೋಷಿಸಿ ಎಂದ ಮಾಜಿ ಸಿಎಂ
ಬೆಂಗಳೂರು(ಜೂ.23): ರಾಜ್ಯಾದ್ಯಂತ ಅದರಲ್ಲೂ ಬೆಂಗಳೂರಿನಲ್ಲಿ ಕರೋನಾ ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ ಹೀಗಿರುವಾಗ ರಾಜ್ಯ ಸರ್ಕಾರ ನಾಲ್ಕು ವಾರ್ಡ್‌ಗಳನ್ನು ಸೀಲ್‌ಡೌನ್ ಮಾಡಿದೆ. ಆದರೀಗ ಸರ್ಕಾರದ ಈ ನಡೆಗೆ ವಿರೋಧ ವ್ಯಕ್ತವಾಗಿದ್ದು, ಬೆಂಗಳೂರಿಗರು ಬದುಕುಳಿಯಬೇಕಾದರೆ 20 ದಿನ ಲಾಕ್‌ಡೌನ್ ಘೋಷಿಸುವಂತೆ ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಹೌದು ಈ ಸಂಬಂಧ ಪೋಸ್ಟ್ ಮಾಡಿರುವ ಎಚ್‌ಡಿಕೆ ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್ ಡೌನ್ ಲಾಕ್ ಡೌನ್ ಮಾಡಿದರೆ ಪ್ರಯೋಜನವಿಲ್ಲ. ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಟ 20 ದಿನ ಸಂಪೂರ್ಣ ಲಾಕ್ ಡೌನ್ ಮಾಡಿ. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ. ಜನರ ಆರೋಗ್ಯಕ್ಕಿಂತ ಆರ್ಥಿಕತೆ ಮುಖ್ಯವಲ್ಲ.
"
19,400 ಮಂದಿಗೆ ಸೋಂಕು, 503 ಸೋಂಕಿತರು ಸಾವು!
ಬಡವರು, ಕಾರ್ಮಿಕರಿಗೆ ಕೂಡಲೇ ಪಡಿತರ ವಿತರಿಸಿ. ರಾಜ್ಯದ 50 ಲಕ್ಷ ಮಂದಿ ಶ್ರಮಿಕ ವರ್ಗಕ್ಕೆ ತಲಾ ಐದು ಸಾವಿರ ರೂಪಾಯಿ ಪರಿಹಾರ ನೀಡಬೇಕು. ಚಾಲಕರು, ನೇಕಾರರು, ಮಡಿವಾಳರು ಸೇರಿದಂತೆ ವಿವಿಧ ವರ್ಗಕ್ಕೆ ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿರುವ ಪರಿಹಾರ ದಕ್ಕಿಲ್ಲ.
ಬರೀ ಪ್ಯಾಕೇಜ್ ಘೋಷಣೆ ಮಾಡಿದರೆ ಸಾಲದು. ಅದರ ಅನುಷ್ಠಾನಕ್ಕೆ ತಕ್ಷಣ ಕಾರ್ಯೋನ್ಮುಖವಾಗಬೇಕು. ಪ್ಯಾಕೇಜ್ ಘೋಷಣೆ ಮಾಡಿ ಸರ್ಕಾರ ಅಂಗೈಯಲ್ಲಿ ಅರಮನೆ ತೋರಿಸಬಾರದು.' ಎಂದು ಬರೆದಿದ್ದಾರೆ.
ಸದ್ಯ ಕೊರೋನಾ ನಿಯಂತ್ರಿಸಲು ಸರ್ಕಾರ ಕೂಡಾ ಎಲ್ಲಾ ರೀತಿಯ ಪ್ರಯತ್ನ ಮುಂದುವರೆಸಿದೆ. ಹೀಗಿರುವಾಗ ಮಾಜಿ ಸಿಎಂ ಈ ಸಲಹೆಯನ್ನು ಅನುಸರಿಸುತ್ತಾ? ಅಥವಾ ಬೇರೆ ಯಾವುದಾದರೂ ಕ್ರಮ ಕೈಗೊಳ್ಳುತ್ತಾ ಕಾದು ನೊಡಬೇಕು.