ಬೆಂಗಳೂರು [ನ.05]: ಪುತ್ರ ನಿಖಿಲ್‌ ಕುಮಾರಸ್ವಾಮಿ ಹೊಸ ಸಿನಿಮಾ ಪ್ರಾಜೆಕ್ಟ್ ಕಾರಣ ನೀಡಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಲಂಡನ್‌ಗೆ ತೆರಳಿದ್ದಾರೆ.

ಸೋಮವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಪ್ರಯಾಣಿಸಿದರು. ನಾಲ್ಕು ದಿನಗಳ ಕಾಲ ಪುತ್ರನ ಸಿನಿಮಾ ಪ್ರಾಜೆಕ್ಟ್ಗೆ ಸಂಬಂಧಿಸಿದಂತೆ ಕಾರ್ಯ ನಿರ್ವಹಿಸಲಿದ್ದಾರೆ. ಸಿನಿಮಾ ಪ್ರಾಜೆಕ್ಟ್ ಕೆಲಸ ಮುಗಿಸಿ ನ.8ರಂದು ಬೆಂಗಳೂರಿಗೆ ಹಿಂತಿರುಗಲಿದ್ದಾರೆ.

HDK ಸರ್ಕಾರ ಉಳಿಸಿಕೊಳ್ಳಲು ಸ್ವಾಮೀಜಿಗಳ ಫೋನ್ ಟ್ಯಾಪ್ ಮಾಡಿಸಿದ್ದರು’..

ಈ ನಡುವೆ ಜೆಡಿಎಸ್‌ನ ವಿಧಾನಪರಿಷತ್‌ ಸದಸ್ಯರು ಪಕ್ಷದ ವರಿಷ್ಠರ ನಡೆಯ ಬಗ್ಗೆ ಅಸಮಾಧಾನಗೊಂಡಿದ್ದಾರೆ. ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಸಮ್ಮುಖದಲ್ಲಿಯೇ ಪರಿಷತ್‌ ಸದಸ್ಯರ ಮುಖಾಮುಖಿ ಚರ್ಚೆ ನಡೆಸಲು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಮುಂದಾಗಿದ್ದರು. ಆದರೆ, ಕುಮಾರಸ್ವಾಮಿ ಲಂಡನ್‌ಗೆ ಪ್ರಯಾಣಿಸಿರುವುದರಿಂದ ಅವರು ಹಿಂತಿರುಗಿದ ಬಳಿಕ ಸಭೆ ನಡೆಸುವ ಸಾಧ್ಯತೆ ಇದೆ.