Asianet Suvarna News Asianet Suvarna News

ಕನ್ನಡ ಕಟುಕುರ ಕೈಯಲ್ಲಿ ಸಿಕ್ಕಿಕೊಂಡಿದೆ: ದೇಶ ಮೊದಲು ಎನ್ನುವರಿಗೆ ತಿವಿದ ಎಚ್‌ಡಿಕೆ

* ರಾಜ್ಯದಲ್ಲಿ ಮತ್ತೊಮ್ಮೆ ಕೇಂದ್ರ ಸಚಿವರು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಕನ್ನಡ ಮಾಯ
* ಮಾಡ್ಯೂಲರ್ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಕನ್ನಡ ಬಳಕೆ ಇಲ್ಲ
* ಬಿಜೆಪಿ ವಿರುದ್ಧ ಕಿಡಿಕಾರಿದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ

HD Kumaraswamy Hits out at BJP Govt Over kannada not used in hospital inaugurate function rbj
Author
Bengaluru, First Published Oct 11, 2021, 4:41 PM IST

ಬೆಂಗಳೂರು, (ಅ.11): ರಾಜ್ಯದಲ್ಲಿ ಮತ್ತೊಮ್ಮೆ ಕೇಂದ್ರ ಸಚಿವರು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಕನ್ನಡ (Kannada) ಮಾಯವಾಗಿದೆ. ನಗರದ ರಾಜೀವ್ ಗಾಂಧಿ ಆಸ್ಪತ್ರೆ (Rajeev Gandhi Hospital) ಆವರಣದಲ್ಲಿ ನಡೆದ ಮಾಡ್ಯೂಲರ್ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಕನ್ನಡ ಬಳಕೆಯನ್ನೇ ಇಲ್ಲ. ಇದು ಸಾಕಷ್ಟು ಟೀಕೆಗಳಿಗೆ ಕಾರಣವಾಗಿದೆ.

ಇನ್ನು ಈ ಬಗ್ಗೆ ಮಾಜಿ ಮುಖ್ಯಂತ್ರಿ ಕುಮಾರಸ್ವಾಮಿ ಸಾಮಾಜಿಕ ಜಾಲತಾಣಗಳ (Social Media) ಮೂಲಕ ಪ್ರತಿಕ್ರಿಯಿಸಿದ್ದು, ಕನ್ನಡ ಕಟುಕುರ ಕೈಯಲ್ಲಿ ಸಿಕ್ಕಿಕೊಂಡಿದೆ ಎಂದು  ಕಟುವಾಗಿ ಟೀಕಿಸಿದ್ದಾರೆ. 

ಆರೋಗ್ಯ ಇಲಾಖೆ ಕಾರ್ಯಕ್ರಮದಲ್ಲಿ ಕನ್ನಡ ಮಾಯ

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ(ನಿಮ್ಹಾನ್ಸ್​) 25ನೇ ಘಟಿಕೋತ್ಸವದಲ್ಲಿ ಹಿಂದಿಗೆ ಅಗ್ರಸ್ಥಾನ, ಇಂಗ್ಲೀಷ್​ಗೆ ದ್ವಿತೀಯ ಸ್ಥಾನ, ಕನ್ನಡಕ್ಕೆ ಮೂರನೇ ಸ್ಥಾನ, ಅಯ್ಯೋ. ಕನ್ನಡ ಕುಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ ಎನ್ನುವುದಕ್ಕೆ ಇದಕ್ಕಿಂತ ನಿರ್ದೇಶನ ಇನ್ನೊಂದಿಲ್ಲ ಎಂದು ಕುಟುಕಿದ್ದಾರೆ.

ವೇದಿಕೆಯ ಮೇಲೆ ರಾಜ್ಯದ ಮುಖ್ಯಮಂತ್ರಿ, ಒಬ್ಬ ಸಚಿವರು, ಇಬ್ಬರು ಸಂಸದರು ಇದ್ದರು. ಸಾವಿರಾರು ವರ್ಷಗಳ ಘನ ಇತಿಹಾಸವುಳ್ಳ ಅಭಿಜಾತ ಭಾಷೆ ಕನ್ನಡವನ್ನು 3ನೇ ಸ್ಥಾನಕ್ಕಿಳಿಸಿದ್ದ ಆ ವೇದಿಕೆಯ ಮೇಲೆ ಕೂರಲು ಅವರಿಗೆ ಮನಸಾದರೂ ಹೇಗೆ ಬಂತು? ಈ ಮೂವರ ಕನ್ನಡಾಭಿಮಾನ ಶೂನ್ಯತೆಗೆ ನನ್ನ ಧಿಕ್ಕಾರ ಎಂದಿದ್ದಾರೆ.

ಕೆಂಗೇರಿ ಮೆಟ್ರೋ ಆರಂಭ: ವೇದಿಕೆಯಲ್ಲಿ ಕನ್ನಡವೇ ಮಾಯ!

ರಾಷ್ಟ್ರೀಯ ಪಕ್ಷಗಳ ದಾದಾಗಿರಿ ದಿನೇದಿನೆ ಹೆಚ್ಚುತ್ತಿದೆ. ನಮ್ಮ ನಾಡು-ನುಡಿಯ ಮೇಲೆ ದಿಲ್ಲಿ ರಾಜಕಾರಣ ನಡೆಸುತ್ತಿರುವ ಆಕ್ರಮಣ ಸ್ವಾತಂತ್ರ್ಯಕ್ಕೂ ಮುನ್ನ ವಿದೇಶಿ ಆಕ್ರಮಣಕಾರರು ನಡೆಸಿದ ದಾಳಿಗಿಂತ ಹೇಯವಾಗಿದೆ.  ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ? ಕನ್ನಡವನ್ನು ಕರ್ನಾಟದಿಂದಲೇ ಮೂಲೆಗುಂಪು ಮಾಡಬೇಕು ಎಂಬುದು ಬಿಜೆಪಿಯ ಹಿಡನ್ ಅಜೆಂಡಾವೇ? ಎಂದು ಪ್ರಶ್ನಿಸಿದ್ದಾರೆ.

ಕನ್ನಡಕ್ಕೆ ಆಗುತ್ತಿರುವ ಅನ್ಯಾಯಗಳು ಒಂದೆರಡಲ್ಲ. ಕೇಂದ್ರ ಪರೀಕ್ಷೆಯಲ್ಲಿ ಅನ್ಯಾಯ, ನೇಮಕಾತಿಯಲ್ಲಿ ನಮ್ಮವರ ಕಡೆಗಣನೆ. ಒಕ್ಕೂಟ ವ್ಯವಸ್ಥೆಯಲ್ಲಿ ಪರಕೀಯರಂತೆ ಎರಡನೇ ದರ್ಜೆ ಪ್ರಜೆಗಳಾಗಿ ನಾವು ಕೊಳೆಯಬೇಕಾ? ಸ್ವಾಭಿಮಾನಿ ಕನ್ನಡಿರೆಲ್ಲರೂ ಸಿಡಿದೇಳೋಣ. ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಕರೆ ಕೊಟ್ಟಿದ್ದಾರೆ. 

ಮೆಟ್ರೋ ಮಾರ್ಗ ಉದ್ಘಾಟನೆಯಲ್ಲಿ ಕನ್ನಡ ಕಡೆಗಣನೆ, ಕೊನೆಗೂ ಕ್ಷಮೆಯಾಚನೆ

Follow Us:
Download App:
  • android
  • ios