Asianet Suvarna News Asianet Suvarna News

ಮಂಡ್ಯದಿಂದ ಎಂಪಿಗೆ ಸ್ಪರ್ಧಿಸಲು ಎಚ್ಡಿಕೆ, ನಿಖಿಲ್‌ಗೆ ಆಹ್ವಾನ: ಪುಟ್ಟರಾಜು

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಥವಾ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವಂತೆ ಆಹ್ವಾನಿಸಿದ್ದೇವೆ. ಪಕ್ಷ ಅಂತಿಮವಾಗಿ ಏನು ನಿರ್ಧಾರ ಮಾಡುತ್ತದೋ ಅದಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು.

HD Kumaraswamy Nikhil invited to contest MP from Mandya says CS Puttaraju rav
Author
First Published Jan 24, 2024, 6:23 AM IST

 ಮಂಡ್ಯ (ಜ.24) : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಥವಾ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವಂತೆ ಆಹ್ವಾನಿಸಿದ್ದೇವೆ. ಪಕ್ಷ ಅಂತಿಮವಾಗಿ ಏನು ನಿರ್ಧಾರ ಮಾಡುತ್ತದೋ ಅದಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು.

ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯಾರೆಂಬುದು ಇನ್ನೂ ತೀರ್ಮಾನ ಆಗಿಲ್ಲ. ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ನಿರ್ಧಾರವಾಗಿದೆಯೇ ವಿನಃ ಅದರ ರೂಪು-ರೇಷೆಗಳು, ಕ್ಷೇತ್ರ ಹಂಚಿಕೆ ವಿಚಾರಗಳು ಅಂತಿಮವಾಗಿಲ್ಲ. ಈ ವಿಚಾರವಾಗಿ ಪಕ್ಷದ ವರಿಷ್ಠರು ಮಾಡುವ ತೀರ್ಮಾನವೇ ಅಂತಿಮ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

 

ನನ್ನ ಸ್ಪರ್ಧೆ ಸದ್ಯಕ್ಕೆ ಸಸ್ಪೆನ್ಸ್‌: ಸುಮಲತಾ

ಕಳೆದ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋತಿದ್ದರು. ಮತ್ತೊಮ್ಮೆ ಅವರನ್ನು ಮಂಡ್ಯದಿಂದ ಕಣಕ್ಕಿಳಿಸುವಂತೆ ಕೋರಿದ್ದೇವೆ. ಅಂದಿನ ರಾಜಕೀಯ ಪರಿಸ್ಥಿತಿಯೇ ಬೇರೆ. ಪ್ರಸ್ತುತ ಜಿಲ್ಲೆಯಲ್ಲಿರುವ ರಾಜಕೀಯ ಸನ್ನಿವೇಶವೇ ಬೇರೆ. ಒಮ್ಮೆ ನಿಖಿಲ್ ಸ್ಪರ್ಧೆ ಬೇಡ ಎಂದಾದರೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಾಯ ಮಾಡುತ್ತಿದ್ದೇವೆ. ವರಿಷ್ಠರು ಏನು ನಿರ್ಧಾರ ಮಾಡುವರೋ ನೋಡಬೇಕು ಎಂದರು.

ದಾವಣಗೆರೆ ಲೋಕಸಭಾ ಟಿಕೆಟ್ ಯಾರಿಗೆ? ಸತತ 4 ಸಲ ಗೆದ್ದಿರುವ ಸಿದ್ದೇಶ್ವರ ಮತ್ತೆ ಸ್ಪರ್ಧೆ?

Follow Us:
Download App:
  • android
  • ios