ರಾಷ್ಟ್ರಪತಿಗಳನ್ನು ಸಂಬೋಧಿಸುವ ವೇಳೆ ಮುಖ್ಯಮಂತ್ರಿಗಳು ಅವರನ್ನು ಏಕವಚನದಲ್ಲಿ ಸಂಬೋಧಿಸಿದ್ದಾರೆ. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಬೇಕೆಂದು ಎಚ್‌ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಬೆಂಗಳೂರು (ಜ.28): ಚಿತ್ರದುರ್ಗದಲ್ಲಿ ಭಾನುವಾರ ನಡೆದ ಶೋಷಿತರ ಜಾಗೃತಿ ​​ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡುವ ವೇಳೆ ಸಮಾಜದಲ್ಲಿ ಹಿಂದಿನಿಂದಲೂ ಶೋಷಣೆ ನಡೆಯುತ್ತಲೇ ಇದೆ, ಇದಕ್ಕೆ ಜಾತಿ ವ್ಯವಸ್ಥೆಯೇ ಕಾರಣ. ಈ ಜಾತಿ ವ್ಯವಸ್ಥೆಯಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಎಂದು ಹೇಳುತ್ತಾ ಕೇಂದ್ರ ಬಿಜೆಪಿ ಸರ್ಕಾರ ರಾಷ್ಟ್ರಪತಿ ಶ್ರೀಮತಿ ದ್ರೌಪತಿ ಮುರ್ಮು ಅವರಿಗೆ ಅವಮಾನ ಮಾಡಿದ್ದಾರೆಂದು ಆರೋಪಿಸಲಾಗಿದೆ.

Add Asianetnews Kannada as a Preferred SourcegooglePreferred

ರಾಷ್ಟ್ರಪತಿಗಳನ್ನು ಸಂಬೋಧಿಸುವ ವೇಳೆ ಮುಖ್ಯಮಂತ್ರಿಗಳು ಅವರನ್ನು ಏಕವಚನದಲ್ಲಿ ಸಂಬೋಧಿಸಿದ್ದಾರೆ. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

ರಾಷ್ಟ್ರಧ್ವಜ ಹಾರಿಸುವ ಬದಲು ಹನುಮ ಧ್ವಜ ಹಾರಿಸಿದ್ದು ಸರಿಯಲ್ಲ: ಸಿಎಂ ಸಿದ್ದರಾಮಯ್ಯ

ಮಾತೆತ್ತಿದರೆ ಸಂವಿಧಾನ, ಪ್ರಜಾಪ್ರಭುತ್ವ, ವಕೀಲಿಕೆ ನಮ್ಮಪ್ಪನ ಮನೆ ಆಸ್ತಿ ಎಂದು ಜಾಗಟೆ ಹೊಡೆಯುವ ಸಿದ್ದರಾಮಯ್ಯನವರು ಮಾನ, ಮರ್ಯಾದೆ, ಮಹಿಳೆಯರ ಮೇಲೆ ಗೌರವ ಏನಾದರೂ ಇಟ್ಟುಕೊಂಡಿದ್ದರೆ, ಈ ಕ್ಷಣದಲ್ಲಿಯೇ ಸಿಎಂ ಕುರ್ಚಿಯನ್ನು ಖಾಲಿ ಮಾಡಬೇಕು.

ಕುರಿ ಕಾಯುವವನ ಮಗ ಸಿಎಂ ಆದ ಅಂತಾರೆ ; ನಾನು 5 ಗ್ಯಾರಂಟಿ ಘೋಷಿಸಿದ್ದು ತಪ್ಪೇ? : ಸಿಎಂ ಸಿದ್ದರಾಮಯ್ಯ

ನಿನ್ನೆಯ ದಿನ ಚಾಮರಾಜನಗರದಲ್ಲಿ ಸಿದ್ದರಾಮಯ್ಯನವರ ಸುಪುತ್ರ ಯತೀಂದ್ರರವರು ಭಾಷಣ ಮಾಡುತ್ತಿದ್ದಾಗ ಯಾರೋ ಒಬ್ಬರು ಏಕವಚನದಲ್ಲಿ ಪ್ರಶ್ನಿಸಿದರೆಂಬ ಕಾರಣಕ್ಕೆ ಪೊಲೀಸರು ಆತನನ್ನು ಅಟ್ಟಾಡಿಸಿಕೊಂಡು ಹೋಗಿ ಬಂಧಿಸಿ ದರದರನೇ ಎಳೆದುಕೊಂಡು ಹೋದರು. ಹಾಗಿದ್ದರೆ, ರಾಷ್ಟ್ರಪತಿಗಳನ್ನೇ ಏಕವಚನದಲ್ಲಿ ಸಂಬೋಧಿಸಿದ ಈ ಮುಖ್ಯಮಂತ್ರಿಗೇನು ಶಿಕ್ಷೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.