ಕರ್ನಾಟಕದ ಗಡಿಯಲ್ಲಿ ಮರಾಠಿಗರು ಇರುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲು ತಮ್ಮ ಸರ್ಕಾರ ಬೆಂಬಲ ನೀಡುತ್ತದೆ ಎಂದು ಹೇಳಿರುವ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರದ್ದು ಅಪರಿಪಕ್ವ ಹೇಳಿಕೆ, ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಬೆಂಗಳೂರು (ಮೇ.02): ಕರ್ನಾಟಕದ (Karnataka) ಗಡಿಯಲ್ಲಿ ಮರಾಠಿಗರು (Marathi) ಇರುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ (Maharashtra) ಸೇರಿಸಿಕೊಳ್ಳಲು ತಮ್ಮ ಸರ್ಕಾರ ಬೆಂಬಲ ನೀಡುತ್ತದೆ ಎಂದು ಹೇಳಿರುವ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ (Ajit Pawar) ಅವರದ್ದು ಅಪರಿಪಕ್ವ ಹೇಳಿಕೆ, ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ (HD Kumaraswamy) ತಿರುಗೇಟು ನೀಡಿದ್ದಾರೆ. ‘ಅಜಿತ್‌ ಪವಾರ್‌ ಅವರು ಚೀನಾ (China) ಮನಸ್ಥಿತಿಯ ಆಕ್ರಮಣಶೀಲತೆ ಹೊಂದಿದ್ದಾರೆ. 

ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಅವರಿನ್ನೂ ಗಡಿಗಳ ಬಗ್ಗೆ ಮಾತನಾಡುತ್ತಿರುವುದನ್ನು ನೋಡಿದರೆ, ಅವರ ಮಿದುಳು ಹಿಮ್ಮುಖವಾಗಿ ಚಲಿಸುತ್ತಿರಬಹುದು’ ಎಂದು ಟೀಕಿಸಿದ್ದಾರೆ. ಅಜಿತ್‌ ಪವಾರ್‌ ಮತ್ತೊಮ್ಮೆ ಉದ್ಧಟತನ ಮೆರೆದಿದ್ದಾರೆ. ಈ ಹಿಂದೆ ಕರ್ನಾಟಕ ಹಾಗೂ ಕನ್ನಡಿಗರ ಬಗ್ಗೆ ಕೀಳು ಅಭಿರುಚಿಯ ಹೇಳಿಕೆಗಳನ್ನು ನೀಡಿದ್ದರು. ಇದೀಗ ಮತ್ತೆ ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ. ಹಾಗೆ ನೋಡಿದರೆ, ಕನ್ನಡಿಗರೇ ಹೆಚ್ಚಿರುವ ಅನೇಕ ಪ್ರದೇಶಗಳು ಮಹಾರಾಷ್ಟ್ರಕ್ಕೂ ಸೇರ್ಪಡೆಯಾಗಿವೆ ಎಂಬುದನ್ನು ಪವಾರ್‌ ಮರೆಯಬಾರದು ಎಂದರು. ಗಡಿ ಬಗ್ಗೆ ಈಗಲೂ ಮಾತನಾಡುತ್ತಿದ್ದಾರೆ ಎಂದರೆ, ಅವರ ಮಿದುಳು ಹಿಮ್ಮುಖವಾಗಿ ಚಲಿಸುತ್ತಿರಬೇಕಷ್ಟೆ.

ಗುತ್ತಿಗೆದಾರರಿಂದ ಸರ್ಕಾರ ಶೇ.60ರಷ್ಟು ಕಮಿಷನ್‌ ವಸೂಲಿ: ಎಚ್‌.ಡಿ ಕುಮಾರಸ್ವಾಮಿ

ತಮ್ಮ ರಾಜ್ಯದ ಅಭಿವೃದ್ಧಿ ಬಗ್ಗೆ ಅವರಿಗೆ ಕಾಳಜಿ ಇಲ್ಲ. ಗಡಿ ಜನರ ಬಗ್ಗೆ ಕಳಕಳಿಯೂ ಇಲ್ಲ. ಎಂದೋ ಮುಗಿದ ವಿಷಯ ಇಟ್ಟುಕೊಂಡು ‘ರಾಜಕೀಯ ಪ್ರಹಸನ’ ನಡೆಸುತ್ತಿದ್ದಾರಷ್ಟೆ. ‘ಚೀನಾ ಮನಸ್ಥಿತಿಯ ಆಕ್ರಮಣಶೀಲ’ ಮನೋಭಾವದಿಂದ ಹೊರಬರುವುದು ಒಳ್ಳೆಯದು ಎಂದು ಅವರು ಖಾರವಾಗಿ ನುಡಿದಿದ್ದಾರೆ. ಕೇಂದ್ರವು ಇಂಥ ‘ಆಕ್ರಮಣಶೀಲ’ ಮನಸ್ಥಿತಿಯುಳ್ಳವರ ಕಿವಿ ಹಿಂಡಬೇಕು. ಕರ್ನಾಟಕದಲ್ಲಿ ಮರಾಠಿ ಭಾಷಿಕರಿದ್ದಾರೆ. ಅವರ ಒಳಿತಿನ ಬಗ್ಗೆ ಅಜಿತ್‌ ಪವಾರ್‌ ಮಾತನಾಡಲಿ. ಈ ನೆಲದಲ್ಲಿ ನೆಲೆಸಿರುವ ಪ್ರತಿಯೊಬ್ಬರೂ ಕನ್ನಡಿಗರೇ ಎನ್ನುವ ವಿಶಾಲ ಭಾವ ನಮ್ಮದು. ಇದನ್ನು ಪವಾರ್‌ ಅರ್ಥ ಮಾಡಿಕೊಳ್ಳಬೇಕು ಎಂದು ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕದಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬರದಿದ್ದರೆ ಪಕ್ಷ ವಿಸರ್ಜನೆ: 2023ರಲ್ಲಿ ರಾಜ್ಯದಲ್ಲಿ ಜಾತ್ಯತೀತ ಜನತಾದಳ (JDS) ಅಧಿಕಾರಕ್ಕೆ ಬಂದು ರೈತರ ಸಮಸ್ಯೆ ಇತ್ಯರ್ಥ ಮಾಡದಿದ್ದಲ್ಲಿ ಪಕ್ಷವನ್ನು ವಿಸರ್ಜಿಸುತ್ತೇನೆ ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ(HD Kumaraswamy) ಹೇಳಿದರು. ಪಟ್ಟಣದಲ್ಲಿ ನಡೆದ ‘ಜನತಾ ಜಲಧಾರೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬಿಜೆಪಿ-ಕಾಂಗ್ರೆಸ್‌(BJP-Congress) ಪಕ್ಷದವರು ರೈತರ(Farmers), ಜನತೆಯ ಬಗ್ಗೆ ನಿರ್ಲಕ್ಷ್ಯ ಮನೋಭಾವ ಹೊಂದಿದ್ದಾರೆ. ನಮ್ಮ ರಾಜ್ಯಕ್ಕೆ ಸಿಗಬೇಕಾದ ನೀರನ್ನು ಸರಕಾರ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುತ್ತಿಲ್ಲ. 

ನಮ್ಮ ತಾಯಿ ಮೇಲೂ ಆ್ಯಸಿಡ್ ದಾಳಿ ಆಗಿತ್ತು, ಭಾವನಾತ್ಮಕ ಹೇಳಿಕೆ ನೀಡಿದ ಕುಮಾರಸ್ವಾಮಿ!

ತುಂಗಭದ್ರಾ ಡ್ಯಾಂನಲ್ಲಿ ಹೂಳು ತುಂಬಿರುವುದರಿಂದ ಪಕ್ಕದ ಆಂಧ್ರದವರು 30 ಟಿಎಂಸಿ ನಮ್ಮ ನೀರು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ(Karnataka) ಆಡಳಿತ ಮಾಡಿರುವ ಸರಕಾರಗಳ ನಡವಳಿಕೆ ನೋಡಿದರೆ ಇನ್ನೂ 100 ವರ್ಷ ಕಳೆದರೂ ನೀರಾವರಿ(Irrigation) ಸಮಸ್ಯೆ ಬಗೆಹರಿಸುವುದಿಲ್ಲ. ಜೆಡಿಎಸ್‌ ಪಕ್ಷಕ್ಕೆ 5 ವರ್ಷ ಅಧಿಕಾರ ಕೊಟ್ಟು ನೋಡಿ, ಆಡಳಿತದಲ್ಲಿ ಭಾರೀ ಬದಲಾವಣೆ ತರುತ್ತೇವೆ. ಮೈತ್ರಿ ಸರಕಾರದ ಸಂದರ್ಭದಲ್ಲಿ . 25 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದೇನೆ. ನಮಗೆ ಸಂಪೂರ್ಣ ಆಡಳಿತ ಸಿಕ್ಕರೆ ರೈತಪರವಾದ ಸಾಕಷ್ಟುಯೋಜನೆಗಳನ್ನು ಜಾರಿಗೊಳಿಸುವುದರ ಜೊತೆಗೆ, ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುತ್ತೇವೆ ಎಂದು ಭರವಸೆ ನೀಡಿದರು.