ಬೆಂಗಳೂರು(ಜು.13): ರೋಗ ನಿರೋಧಕ ಶಕ್ತಿ ವರ್ಧಕ ಕಿಟ್ (Immunity Booster) ಮತ್ತು ಸ್ಯಾನಿಟೈಸರ್ ಪ್ರತಿ ಮನೆ ಮನೆಗೂ ಸರ್ಕಾರ ಒದಗಿಸಬೇಕೆಂದು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಒತ್ತಾಯಿಸಿದ್ದಾರೆ.

ಕೊರೋನಾ ವ್ಯಾಪಕ‌ ಹೆಚ್ಚಳ ಹಿನ್ನೆಲೆಯಲ್ಲಿ ವಿಟಮಿನ್ ಸಿ ಔಷಧಿ ಹಾಗೂ ಆಯುಷ್ ಸಚಿವಾಲಯ ದೃಢೀಕರಿಸಿದ ರೋಗ ನಿರೋಧಕ ಶಕ್ತಿ ವರ್ಧಕ ಕಿಟ್ (Immunity Booster) ಮತ್ತು ಸ್ಯಾನಿಟೈಸರ್ ಪ್ರತಿ ಮನೆ ಮನೆಗೂ ಸರ್ಕಾರ ಒದಗಿಸಲಿ ಎಂದು ಎಚ್‌ಡಿಕೆ ಟ್ವೀಟ್ ಮಾಡಿದ್ದಾರೆ.

ಬೆಂಗ್ಳೂರು ಲಾಕ್‌ಡೌನ್‌ಗೆ ಸಲಹೆ ಕೊಟ್ಟಿದ್ದ ಕುಮಾರಸ್ವಾಮಿಯಿಂದ ಮತ್ತೊಂದು ಕಿವಿ ಮಾತು..!

ಹಾಗೆಯೇ ಈ ಆರೋಗ್ಯ ಕಿಟ್ ಗಳು ಪ್ರತಿ ಮೆಡಿಕಲ್ ಹಾಗೂ ಇತರ ಅಂಗಡಿಗಳಲ್ಲಿ ಮಾರಾಟಕ್ಕೂ ದೊರೆಯಲಿ. ಇದಲ್ಲದೆ ರೋಗ ಲಕ್ಷಣ ಕಂಡು ಬಂದವರಿಗೂ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ತ ಔಷಧಿಗಳನ್ನು ಪೂರೈಸಬೇಕು. ಆಗ ಮಾತ್ರ ಕರ್ನಾಟಕ ಕೊರೋನ‌ ನಿಯಂತ್ರಣ ಮಾಡಲು ಸಾಧ್ಯ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮುಂದುವರಿದಿದ್ದು, ಮಾಜಿ ಸಿಎಂ ಎಚ್‌ಡಿಕೆ ಟ್ವೀಟ್ ಮೂಲಕ ಸಿಎಂಗೆ ಸಲಹೆಗಳನ್ನು ನೀಡುತ್ತಾ ಬಂದಿದ್ದಾರೆ. ಈ ಹಿಂದೆ ರಾಜ್ಯ ಲಾಕ್‌ಡೌನ್ ಮಾಡುವುದಕ್ಕೂ ಒತ್ತಾಯಿಸಿದ್ದರು.