Asianet Suvarna News Asianet Suvarna News

ಸೋನಿಯಾ ಗಾಂಧಿ,  ರಾಹುಲ್ ಗಾಂಧಿಗೂ ಏಕವಚನ ಪ್ರಯೋಗಿಸುವಿರಾ?: ಗ್ರಾಮೀಣ ಸೊಗಡು ಎಂಬ ಸೋಗಲಾಡಿತನವೇಕೆ?: ಎಚ್‌ಡಿಕೆ ವಾಗ್ದಾಳಿ

ಸಿದ್ದರಾಮಯ್ಯನವರೇ, ನಿನ್ನೆ ದಿನ ಶೋಷಿತರ ಜಾಗೃತಿ ಸಮಾವೇಶದಲ್ಲಿ ನಿಮ್ಮ ಭಾಷಣದಲ್ಲಿ ಭಾವುಕತೆ, ಮುಗ್ಧತೆ  ಇತ್ತೇ? ಸುಳ್ಳು ಹೇಳುವುದಕ್ಕೂ ಸಂಕೋಚ ಬೇಡವೇ? ನಿಮ್ಮ ಭಾಷಣ ದುರಾಹಂಕಾರದ ಪರಮಾವಧಿ ಮತ್ತು ಆ ಸಮಾವೇಶದ ಕರ್ತೃ,ಕರ್ಮ, ಕ್ರಿಯೆ ಎಲ್ಲವೂ ನೀವೇ. ಹೌದೋ ಅಲ್ಲವೋ? ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ

HD Kumaraswamy tweets against CM Siddaramaiah at bengaluru rav
Author
First Published Jan 29, 2024, 11:49 AM IST

ಬೆಂಗಳೂರು (ಜ.29) ಅಂಕೆ ಮೀರಿದ ಭಂಡತನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಅತ್ಯುತ್ತಮ ಉದಾಹರಣೆ. 'ಭಾವುಕನಾಗಿ ಮಾತನಾಡುವ ಭರದಲ್ಲಿ ದೇಶದ ಗೌರವಾನ್ವಿತ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧಿಸಿದೆ' ಎಂದು ನೀವು ಕೊಟ್ಟಿರುವ ಸಮಜಾಯಿಷಿ ಮೊಸಳೆಯನ್ನು ನಾಚಿಸುವಂತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ.

ಶಿವಮೊಗ್ಗದಲ್ಲಿ ನಡೆದ ಶೋಷಿತರ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧಿಸಿ ಅವಮಾನಿಸಿರುವ ಕುರಿತು #ಶಿಷ್ಟಾಚಾರಗೆಟ್ಟಮುಖ್ಯಮಂತ್ರಿ ಎಂಬ ಹ್ಯಾಷ್ ಟ್ಯಾಗ್ ಬಳಸಿ ಸುದೀರ್ಘ ಟ್ವೀಟ್ ಮಾಡಿರುವ ಎಚ್‌ಡಿ ಕುಮಾರಸ್ವಾಮಿ, ಗ್ರಾಮೀಣ ಸೊಗಡಿನ ವ್ಯಕ್ತಿತ್ವ ನನ್ನದು. ನಾನು ಮಾತನಾಡುವುದೇ ಹಾಗೆ ಎಂದು ನೀವು  ಸಮರ್ಥಿಸಿಕೊಳ್ಳುತ್ತಿರಿ. ಸಮರ್ಥನೆಗೂ ಒಂದು ಅಳತೆ, ಗೌರವ ಇರುತ್ತದೆ. ಅದ್ಯಾವುದನ್ನೂ ನೀವು ಲೆಕ್ಕಕ್ಕೇ ಇಟ್ಟಿಲ. 2ನೇ ಸಲ ಸಿಎಂ ಆಗಿ ಎಲ್ಲಾ ರೀತಿಯ ಶಿಷ್ಟಾಚಾರದ ಸುಖ ಅನುಭವಿಸುತ್ತಿದ್ದೀರಿ ಮತ್ತು ಪಾಲಿಸುತ್ತಿದ್ದೀರಿ, ಸರಿ. ಆದರೆ; ಭಾಷೆ ವಿಚಾರದಲ್ಲಿ ನೀವು ಯಾಕೆ ಶಿಷ್ಟಾಚಾರ ಕಲಿತಿಲ್ಲ, ಪಾಲಿಸುತ್ತಿಲ್ಲ? ನಿಮ್ಮ ನಾಯಕರಾದ ಸೋನಿಯಾ ಗಾಂಧಿ,  ರಾಹುಲ್ ಗಾಂಧಿ ಅವರಿಗೆ ಏಕವಚನ ಪ್ರಯೋಗಿಸುವಿರಾ? ಈ ಸೋಗಲಾಡಿತನವನ್ನು ಅರ್ಥ ಮಾಡಿಕೊಳ್ಳದಷ್ಟು ಮುಗ್ಧರೇ ನಮ್ಮ ಜನರು ಎಂದು ಪ್ರಶ್ನಿಸಿದ್ದಾರೆ.

 

ರಾಷ್ಟ್ರಪತಿಗಳನ್ನ ಏಕವಚನದಲ್ಲಿ ಸಂಬೋಧಿಸಿ ಅವಮಾನ; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರ ವಜಾಕ್ಕೆ ಎಚ್‌ಡಿಕೆ ಒತ್ತಾಯ

ಸಿದ್ದರಾಮಯ್ಯನವರೇ, ನಿನ್ನೆ ದಿನ ಶೋಷಿತರ ಜಾಗೃತಿ ಸಮಾವೇಶದಲ್ಲಿ ನಿಮ್ಮ ಭಾಷಣದಲ್ಲಿ ಭಾವುಕತೆ, ಮುಗ್ಧತೆ  ಇತ್ತೇ? ಸುಳ್ಳು ಹೇಳುವುದಕ್ಕೂ ಸಂಕೋಚ ಬೇಡವೇ? ನಿಮ್ಮ ಭಾಷಣ ದುರಾಹಂಕಾರದ ಪರಮಾವಧಿ ಮತ್ತು ಆ ಸಮಾವೇಶದ ಕರ್ತೃ,ಕರ್ಮ, ಕ್ರಿಯೆ ಎಲ್ಲವೂ ನೀವೇ. ಹೌದೋ ಅಲ್ಲವೋ? ದೇಶದ ಅತ್ಯುನ್ನತ ಸ್ಥಾನದಲ್ಲಿರುವ ಗೌರವಾನ್ವಿತ ರಾಷ್ಟ್ರಪತಿಗಳ ಬಗ್ಗೆ, ಅದರಲ್ಲೂ ಮಹಿಳೆಯ ಬಗ್ಗೆ ಏಕವಚನ ಪ್ರಯೋಗಿಸುವಾಗ ಭಾವುಕತೆಯಲ್ಲಿ ನಿಮ್ಮ ವಿವೇಕ ಸತ್ತು ಹೋಗಿತ್ತಾ? ಎರಡು ಬಾರಿ ಸಿಎಂ ಆದವರು, ಡಿಸಿಎಂ, ಹಣಕಾಸು ಸಚಿವರೂ ಆಗಿದ್ದವರು.. ವಕೀಲರೂ, ಸ್ವಯಂಘೋಷಿತ ಸಂವಿಧಾನ ತಜ್ಞರೂ ಆಗಿರುವ ನಿಮ್ಮಂತಹ ಪಂಡಿತರೇ ಭಾವುಕತೆಯಿಂದ ಬಾಯಿ ತಪ್ಪಿದರೆ ಹೇಗೆ? ಇನ್ನು ಆ ನಿಮ್ಮ ಭಾಷಣ! ಅದನ್ನು ಭಾಷಣ ಎನ್ನಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ಭಾಷಣ ನಿಮ್ಮ ಹೃದಯದಲ್ಲಿ ತುಂಬಿದ್ದ ಅಸಹನೆಯ ನಂಜು. ಅನ್ಯಜಾತಿಗಳ ಮೇಲೆ ಮಡುಗಟ್ಟಿದ ದ್ವೇಷ. ಜಾತಿ-ಧರ್ಮಗಳ ನಡುವೆ ಬೆಂಕಿ ಇಡಲು ನೀವು ಕಕ್ಕಿದ ಕಾರ್ಕೋಟಕ ವಿಷಜ್ವಾಲೆ. ಜಾತಿ ವ್ಯವಸ್ಥೆ ಇರುವರೆಗೆ ಇಂಥ ಸಮಾವೇಶಗಳು ನಡೆಯಬೇಕು ಎನ್ನುತ್ತೀರಿ! ಅಂದರೆ ಕಾರ್ಕೋಟಕ ವಿಷಜ್ವಾಲೆ ನಿರಂತರ  ಎಂದಾಯಿತು! ನಿರಂತರವಾಗಿ ಅಧಿಕಾರದಲ್ಲಿ ಸುಖಿಸಿದ ನೀವು ಶೋಷಿತ ವರ್ಗಕ್ಕೆ ಮಾಡಿದ್ದೇನು? ಮೀಸಲಾತಿ ಬಗ್ಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದೇನು? ಅವರ ನಿಲುವು ಏನಾಗಿತ್ತು? ಸಂವಿಧಾನವೇ ನನ್ನ ಧರ್ಮಗ್ರಂಥ ಎನ್ನುವ ನೀವು, ಇಷ್ಟು ಬೇಗ ಸಂವಿಧಾನ ಬರೆದವರ ಮಾತನ್ನೇ ಮರೆತರೆ ಹೇಗೆ? 14 ಬಜೆಟ್ ಮಂಡಿಸಿದ ಅಪರ ವಿತ್ತವಿಶಾರದರಾದ ತಮಗೆ ಮರೆವೇ? ಇನ್ನೆಷ್ಟು ವರ್ಷ ಸುಳ್ಳುಗಳನ್ನೇ ಹೇಳಿ ಸತ್ಯವನ್ನು ಸಾಗ ಹಾಕುತ್ತೀರಿ? ನನ್ನಂತೆಯೇ ಶೋಷಿತ ಸಮಾಜದಿಂದ ಬಂದವರು, ಅವರ ಬಗ್ಗೆ ಅಪಾರ ಗೌರವವಿದೆ. ಅವರನ್ನು ಏಕವಚನದಲ್ಲಿ‌ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದೀರಿ. ವಿಷಾದ ವ್ಯಕ್ತಪಡಿಸುವ ಸೌಜನ್ಯ ತೋರಿಸಿದ್ದೀರಿ, ಸಂತೋಷ. ಆದರೆ; ನಿಮ್ಮ ನಂಜಿನ ವಿಷ ರಾಜ್ಯವನ್ನೆಲ್ಲಾ, ದೇಶವನ್ನೆಲ್ಲಾ ವ್ಯಾಪಿಸುತ್ತಿದೆ. ಇದಕ್ಕೆ ಏನಂತೀರಿ? ಇದಕ್ಕೆ ಉತ್ತರಿಸುವಿರಾ ಎಂದು ಪ್ರಶ್ನಿಸಿರುವ ಎಚ್ ಡಿಕುಮಾರಸ್ವಾಮಿ

ರಾಷ್ಟ್ರಧ್ವಜ ಹಾರಿಸುವ ಬದಲು ಹನುಮ ಧ್ವಜ ಹಾರಿಸಿದ್ದು ಸರಿಯಲ್ಲ: ಸಿಎಂ ಸಿದ್ದರಾಮಯ್ಯ

ಈ ಹಿಂದೆಯೂ ಸಿದ್ದರಾಮಯ್ಯನವರು ಏಕವಚನದಲ್ಲಿ ಪದಪ್ರಯೋಗ ಮಾಡಿದ ಅನೇಕ ಘಟನೆಗಳಿವೆ. ಆಗಲೂ ನಾನು ಗ್ರಾಮೀಣಭಾಗದವನು ಏಕವಚನ ಸಹಜ ಎಂದು ಸಮಜಾಯಿಷಿ ನೀಡಿದ್ದಾರೆ ಆದರೆ ಅದೇ ಏಕವಚನ ಪ್ರಯೋಗ ಕಾಂಗ್ರೆಸ್ ಹೈಕಮಾಂಡ್ ನಾಯಕರ ಮೇಲೆ ಏಕೆ ಬಾಯ್ತಪ್ಪಿನಿಂದ ಬರುತ್ತಿಲ್ಲ ಎಂದು ನೆಟ್ಟಿಗರು ಸಹ ಪ್ರಶ್ನಿಸಿದ್ದಾರೆ.

Follow Us:
Download App:
  • android
  • ios