ಬೆಂಗಳೂರು[ಮಾ.20]: ಕೊರೋನಾ ವೈರಸ್ ಭೀತಿ ಹೆಚ್ಚುತ್ತಿರುವಂತೆಯೇ ಭಾರತದಲ್ಲಿ ಸಾವಿನ ಸಂಕ್ಯೆ ಐದಕ್ಕೇರಿದೆ. ಕರ್ನಾಟಕದಲ್ಲಿ ಸೋಂಕು ಬಾಧಿಸತರ ಸಂಖ್ಯೆ 15ಕ್ಕೆ ಏರಿದೆ. ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಎಚ್‌. ಡಿ. ಕುಮಾರಸ್ವಾಮಿ ಲೋನ್ ಮರುಪಾವತಿಗೆ ಜನಸಾಮಾನ್ಯರಿಗೆ ಸಮಯಾವಕಾಶ ಕಲ್ಪಿಸುವಂತೆ ಕೇಳಿದ್ದಾರೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದು, ಈಗಾಗಲೇ ಕೊರೋನಾ ವೈರಸ್ ಹರಡದಂತೆ ನೋಡಿಕೊಳ್ಳಲು ಹಲವು ಕ್ರಮಗಳನ್ನು ಅನುಸರಿಸಲಾಗಿದೆ. ಕೊರೋನಾ ವೖರಸ್ ಭೀತಿ ಹೆಚ್ಚುತ್ತಿರುವಂತೆಯೇ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.

ನಡುಕ ಹುಟ್ಟಿಸಿರುವ ಕೊರೋನಾಗೆ ತಾಯತ ಮಾರಾಟ!

ಕೊರೊನಾ ವೈರಸ್‌ನಿಂದ ಎದುರಾದ ನಿರ್ಬಂಧಗಳಿಂದ ದಿನಗೂಲಿ ನೌಕರರು, ಬೀದಿ ಬದಿ ವ್ಯಾಪಾರಿಗಳು ಹೆಚ್ಚು ಬಾಧಿತರಾಗಿದ್ದಾರೆ. 2 ತಿಂಗಳ ಅವರ ಬದುಕಿಗೆ ನೆರವಾಗುವಂತೆ ಸರ್ಕಾರ ಕಾರ್ಯಕ್ರಮ ರೂಪಿಸಬೇಕು. ಆಟೋ, ಕ್ಯಾಬ್ ಚಾಲಕರ ಬ್ಯಾಂಕ್ ಲೋನ್ ಕಂತು ಪಾವತಿಗೆ 2 ತಿಂಗಳ ವಿನಾಯಿತಿ ಕಲ್ಪಿಸಬೇಕು. ಈ ಮೂಲಕ ಸರ್ಕಾರ ಬಡವರ ಪರ ನಿಲುವು ತಾಳಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ.