ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ನೇತೃತ್ವದ ನೂತನ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರು[ಡಿ.16]: ಸೋಮವಾರ ಮಧ್ಯಪ್ರದೇಶದಲ್ಲಿ ಬಹುಕಾಲದ ನಂತರ ಅಸ್ತಿತ್ವಕ್ಕೆ ಬರುತ್ತಿರುವ ಕಾಂಗ್ರೆಸ್‌ ನೇತೃತ್ವದ ನೂತನ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸೋಮವಾರ ಮಧ್ಯಪ್ರದೇಶ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕುಮಾರಸ್ವಾಮಿ ಅವರು ಭಾಗವಹಿಸಲಿದ್ದಾರೆ. ಸೋಮವಾರ ಬೆಳಗ್ಗೆ ವಿಶೇಷ ವಿಮಾನದಲ್ಲಿ ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ ಜೊತೆ ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ನಡೆಸುತ್ತಿರುವ ಜೆಡಿಎಸ್‌ ನಾಯಕರು ಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯನ್ನು ರಾಷ್ಟ್ರಮಟ್ಟದಲ್ಲೂ ಕಾಂಗ್ರೆಸ್‌ ಜೊತೆಗೆ ಎದುರಿಸಲು ನಿರ್ಧರಿಸಿದ್ದಾರೆ. ಹೀಗಾಗಿ, ಮೈತ್ರಿ ಗಟ್ಟಿಗೊಳಿಸುವ ಸಂಬಂಧ ಕುಮಾರಸ್ವಾಮಿ ಅವರು ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬರುವ ಸನ್ನಿವೇಶದಲ್ಲಿ ಉಪಸ್ಥಿತರಿರಲು ಮುಂದಾಗಿದ್ದಾರೆ.