ಕುಟುಂಬದ ಆರೋಗ್ಯಕ್ಕಾಗಿ ತಿರುಮಲಗಿರಿ ವೆಂಕಟೇಶ್ವರಸ್ವಾಮಿ ದೇವಸ್ಥಾನದಲ್ಲಿ ಎಚ್‌ಡಿಕೆ 2 ತಾಸು ಹೋಮ
ಶ್ರಾವಣ ಮಾಸದ ಕೊನೆಯ ಶನಿವಾರ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜೆ.ಪಿ.ನಗರದಲ್ಲಿನ ತಿರುಮಲಗಿರಿ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ತೆರಳಿ ಪೂಜೆ ನೆರವೇರಿಸಿದರು.

ಬೆಂಗಳೂರು (ಸೆ.10) : ಶ್ರಾವಣ ಮಾಸದ ಕೊನೆಯ ಶನಿವಾರ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜೆ.ಪಿ.ನಗರದಲ್ಲಿನ ತಿರುಮಲಗಿರಿ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ತೆರಳಿ ಪೂಜೆ ನೆರವೇರಿಸಿದರು.
ಅನಾರೋಗ್ಯಕ್ಕೆ ಒಳಗಾಗಿದ್ದ ಕುಮಾರಸ್ವಾಮಿ(HD Kumaraswamy) ಇದೀಗ ಚೇತರಿಸಿಕೊಂಡು ವಿಶ್ರಾಂತಿಯಲ್ಲಿದ್ದಾರೆ. ಆರೋಗ್ಯದಲ್ಲಿ ಸಾಕಷ್ಟುಸುಧಾರಣೆ ಕಂಡ ಹಿನ್ನೆಲೆಯಲ್ಲಿ ಬೆಳಗ್ಗೆ ದೇವಾಲಯಕ್ಕೆ (Tirumalagiri venkateshwar swamy temple)ಭೇಟಿಯಿತ್ತರು. ಸುಮಾರು ಎರಡು ತಾಸುಗಳ ಕಾಲ ಹೋಮ-ಹವನ ನೆರವೇರಿಸಲಾಯಿತು.
ಬಿಜೆಪಿ-ಜೆಡಿಎಸ್ ಮೈತ್ರಿ: ಕ್ಷೇತ್ರ ಹಂಚಿಕೆ ಚರ್ಚೆ ಇನ್ನೂ ಆಗಿಲ್ಲ, ಕುಮಾರಸ್ವಾಮಿ
ಪೂಜಾ ಕಾರ್ಯದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ತಂದೆಯವರ ಆರೋಗ್ಯ ವೃದ್ಧಿಗಾಗಿ ಪೂಜೆ ಸಲ್ಲಿಸಿದ್ದೇನೆ. ನಮ್ಮ ಕುಟುಂಬದಲ್ಲಿ ಇತ್ತೀಚೆಗೆ ನಡೆದ ಬೆಳವಣಿಗೆ, ಆರೋಗ್ಯ ವೃದ್ಧಿಗಾಗಿ ಪೂಜೆ ಸಲ್ಲಿಸಲಾಗಿದೆ. ಹಿಂದೂಧರ್ಮದ ಸಂಪ್ರದಾಯದಂತೆ ಧಾರ್ಮಿಕ ಪೂಜೆ ನೆರವೇರಿಸಿದ್ದೇನೆ’ ಎಂದರು.
‘ನಾನು ಆರೋಗ್ಯದ ಸಮಸ್ಯೆಯಿಂದ ರಾಜಕೀಯ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ. ಮನೆಯಲ್ಲಿಯೇ ನಮ್ಮ ಪಕ್ಷದ ನಾಯಕರ ಜತೆ ಚರ್ಚೆ ನಡೆಸಿದ್ದೇನೆ. ಭಾನುವಾರ ಸಮಾವೇಶ ಇರುವ ಕಾರಣ ಅದರ ಸಿದ್ದತೆ ಕುರಿತು ಸಮಾಲೋಚನೆ ನಡೆಸಿದ್ದೇನೆ’ ಎಂದರು.
ಗೌಡ, ಎಚ್‌ಡಿಕೆ ಸಿದ್ಧಾಂತ ಎಲ್ಲಿ ಹೋಯ್ತು?: ಡಿ.ಕೆ.ಶಿವಕುಮಾರ್