ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೋಮವಾರ ಮಧ್ಯರಾತ್ರಿ ಕಾಂಬೋಡಿಯಾಕ್ಕೆ ಪ್ರಯಾಣ ಬೆಳೆಸಿದ್ದಾರೆ. ಅವರೊಂದಿಗೆ ಪಕ್ಷದ ಮಾಜಿ ಶಾಸಕರಾದ ಸಾ.ರಾ.ಮಹೇಶ್‌, ಎಂ.ಮಂಜುನಾಥ್‌, ವಿಧಾನ ಪರಿಷತ್‌ ಸದಸ್ಯ ಬೋಜೇಗೌಡ, ಮಾಜಿ ಸದಸ್ಯ ರಮೇಶ್‌ಗೌಡ ಅವರೂ ತೆರಳಿದ್ದಾರೆ. 

ಬೆಂಗಳೂರು (ಆ.8): ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೋಮವಾರ ಮಧ್ಯರಾತ್ರಿ ಕಾಂಬೋಡಿಯಾಕ್ಕೆ ಪ್ರಯಾಣ ಬೆಳೆಸಿದ್ದಾರೆ. ಅವರೊಂದಿಗೆ ಪಕ್ಷದ ಮಾಜಿ ಶಾಸಕರಾದ ಸಾ.ರಾ.ಮಹೇಶ್‌, ಎಂ.ಮಂಜುನಾಥ್‌, ವಿಧಾನ ಪರಿಷತ್‌ ಸದಸ್ಯ ಬೋಜೇಗೌಡ, ಮಾಜಿ ಸದಸ್ಯ ರಮೇಶ್‌ಗೌಡ ಅವರೂ ತೆರಳಿದ್ದಾರೆ. 

ಇಂದು ರಾತ್ರಿ 12 ಗಂಟೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನನಿಲ್ದಾಣದಿಂದ ಕಾಂಬೋಡಿಯಾಕ್ಕೆ ತೆರಳಲಿರುವ ಕುಮಾರಸ್ವಾಮಿ ಇದೇ ತಿಂಗಳ 12ರಂದು ಬೆಂಗಳೂರಿಗೆ ವಾಪಸ್‌ ಆಗಲಿದ್ದಾರೆ. ನಾಲ್ಕು ದಿನಗಳ ಹಿಂದಷ್ಟೇ ತಮ್ಮ ಕುಟುಂಬದ ಸದಸ್ಯರೊಂದಿಗೆ ಹತ್ತು ದಿನಗಳ ಯುರೋಪ್‌ ಪ್ರವಾಸ ಮುಗಿಸಿ ಬಂದಿದ್ದ ಕುಮಾರಸ್ವಾಮಿ(HD kumaraswamy) ಅವರು, ಇದೀಗ ಮತ್ತೆ ವಿದೇಶಕ್ಕೆ ಪ್ರಯಾಣ ಬೆಳೆಸುತ್ತಿರುವುದು ಸಹಜವಾಗಿಯೇ ಕುತೂಹಲ ಮೂಡಿಸಿದೆ. ಆದರೆ ಈ ಬಾರಿ ಕಾಂಬೋಡಿಯಾ ದೇಶದ ವಾಣಿಜ್ಯ ಸಂಸ್ಥೆಯೊಂದರ ಅಧಿಕೃತ ಆಹ್ವಾನದ ಮೇರೆಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಯುರೋಪ್‌ ಪ್ರವಾಸದ ಫೋಟೋ ಹಂಚಿಕೊಂಡ ಮಾಜಿ ಸಿಎಂ ಕುಮಾರಸ್ವಾಮಿ ಕುಟುಂಬ: ಇಲ್ಲಿವೆ ಮಸ್ತ್‌ ಲುಕ್‌

 ಕುಮಾರಸ್ವಾಮಿ ಅವರು ಯುರೋಪ್‌ ಪ್ರವಾಸಕ್ಕೆ ಹೋಗಿದ್ದ ವೇಳೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಸರ್ಕಾರ ಉರುಳಿಸುವ ಷಡ್ಯಂತ್ರ ನಡೆಸಲು ಸಿಂಗಾಪುರಕ್ಕೆ ತೆರಳಿದ್ದಾರೆ ಎಂಬ ಆರೋಪ ಮಾಡಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.