Asianet Suvarna News Asianet Suvarna News

36ನೇ ರಾಜ್ಯ ಪತ್ರಕರ್ತರ ಸಮ್ಮೇಳನ: ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯಕಾರ್ಡ್‌, ಬಸ್‌ಪಾಸ್‌: ಬೊಮ್ಮಾಯಿ!

*ಪತ್ರಕರ್ತರ ಸೌಲಭ್ಯಕ್ಕೆ ಬಜೆಟ್‌ನಲ್ಲಿ ಆದ್ಯತೆ: ಬೊಮ್ಮಾಯಿ
*ಕಲಬುರಗಿಯಲ್ಲಿ ಪತ್ರಕರ್ತರ ಸಮ್ಮೇಳನ ಉದ್ಘಾಟನೆ
*ಪತ್ರಿಕೋದ್ಯಮಿಗೆ ಸಮಾಜದಲ್ಲಿ ಮಹತ್ವದ ಸ್ಥಾನ: ಸಿಎಂ

Health Card Bus Pass facilities will be given to Rural Journalists said CM Basavaraj Bommai mnj
Author
Bengaluru, First Published Jan 5, 2022, 12:50 AM IST

ಕಲಬುರಗಿ (ಜ.5): ಗ್ರಾಮೀಣ ಪತ್ರಕರ್ತರಿಗೆ (Journalists) ಆರೋಗ್ಯ ಕಾರ್ಡ್‌, ಬಸ್‌ಪಾಸ್‌ ಸೇರಿದಂತೆ ಇತರ ಸೌಲಭ್ಯಗಳಿಗೆ ಬರುವ ಬಜೆಟ್‌ನಲ್ಲಿ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಭರವಸೆ ನೀಡಿದ್ದಾರೆ. ಕಲಬುರಗಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಇಲ್ಲಿನ ಬಸವರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ ಏರ್ಪಡಿಸಿರುವ 36ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟಿಸಿ ಸಿಎಂ ಮಾತನಾಡಿದರು.  

ಕೋವಿಡ್‌ (Covid 19) ಸಂದರ್ಭದಲ್ಲಿ ಆರೋಗ್ಯ, ಅಂಗನವಾಡಿ, ಆಶಾ, ಪೊಲೀಸ್‌, ಪೌರಕಾರ್ಮಿಕರೊಂದಿಗೆ ಪತ್ರಕರ್ತರು ಕೂಡ ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡಿ ಕಾರ್ಯನಿರ್ವಹಿಸಿದ್ದಾರೆ. ಹಲವಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಬಹುತೇಕ ಕುಟುಂಬದವರಿಗೆ ಈಗಾಗಲೇ ತಲಾ 5 ಲಕ್ಷ ರು. ಪರಿಹಾರ ನೀಡಲಾಗಿದೆ. ಇನ್ನೂ ಬಾಕಿ ಇರುವ ಕುಟುಂಬಕ್ಕೂ ಒದಗಿಸಲಾಗುವುದು ಎಂದು ತಿಳಿಸಿದರು.

ಪತ್ರಿಕೋದ್ಯಮಿಗೆ ಸಮಾಜದಲ್ಲಿ ಮಹತ್ವದ ಸ್ಥಾನ!

ಪತ್ರಕರ್ತರಿಗೆ, ಪತ್ರಿಕೋದ್ಯಮಿಗೆ ಸಮಾಜದಲ್ಲಿ ಮಹತ್ವದ ಸ್ಥಾನವಿದೆ. ಸಣ್ಣ ಪತ್ರಿಕೆಗಳು ಪ್ರಸಾರದಲ್ಲಿ ಕಡಿಮೆ ಸಂಖ್ಯೆ ಹೊಂದಿದ್ದರೂ ಅಲ್ಲಿನ ಸುದ್ದಿ, ಲೇಖನ, ಅಂಕಣಗಳ ಮೌಲ್ಯ ದೊಡ್ಡದು. ಪತ್ರಿಕೆಗಳಿಗೆ ಅಗತ್ಯವಿರುವ ಜಾಹೀರಾತು ನೀಡಲು ಬಜೆಟ್‌ನಲ್ಲಿ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.ವಿಜಯ ಕರ್ನಾಟಕ ಸಂಪಾದಕ ಹರಿಪ್ರಕಾಶ ಕೋಣೆಮನೆ, ವಿಜಯವಾಣಿ ಸಂಪಾದಕ ಕೆ.ಎನ್‌.ಚನ್ನೇಗೌಡ ಪ್ರಾಸ್ತಾವಿಕ ನುಡಿಗಳನ್ನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮುದ್ರಣ ಕಾಗದದ ಮೇಲಿನ ತೆರಿಗೆಯನ್ನು ಮುಂದಿನ ಜಿಎಸ್‌ಟಿ ಸಭೆಯಲ್ಲಿ ರದ್ದು ಮಾಡಬೇಕೆಂದು ಸಿಎಂ ಬೊಮ್ಮಾಯಿ ಗಮನ ಸೆಳೆದರು.

ಇದನ್ನೂ ಓದಿDKS vs Ashwath Narayan ತಮ್ಮೆದುರಲ್ಲೇ ನಡೆದ ಅಶ್ವತ್ಥ್ ನಾರಾಯಣ-ಡಿಕೆ ಸುರೇಶ್ ಗಲಾಟೆ ಬಗ್ಗೆ ಸಿಎಂ ಹೇಳಿದ್ದಿಷ್ಟು

ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಡಾ.ಶರಣಬಸಪ್ಪ ಅಪ್ಪ ಸಾನ್ನಿಧ್ಯ ವಹಿಸಿದ್ದರು. ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನೂರಾಧ, ಸಂಸದರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಕೇಂದ್ರ ಸಚಿವರು, ಸಂಸದರು, ಶಾಸಕರು ವೇದಿಕೆಯಲ್ಲಿದ್ದರು.

ಕಲ್ಯಾಣ ಕರ್ನಾಟಕ ಪ್ರಗತಿಗೆ .3 ಸಾವಿರ ಕೋಟಿ: ಸಿಎಂ

ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಂಡಳಿ ಹಾಗೂ ಕೋಶಕ್ಕೆ ವಾರಾಂತ್ಯದೊಳಗೆ ಪೂರ್ಣ ನೇಮಕಾತಿ ಮಾಡಿ 3000 ಕೋಟಿ ರು.ಗಳ ಕ್ರಿಯಾ ಯೋಜನೆ ತಯಾರಿಸಲಾಗಿದೆ. ಮಾಸಾಂತ್ಯದೊಳಗೆ ಈ ಭಾಗದ ಶಾಸಕರ ಸಭೆ ನಡೆಸಿ ಅಂತಿಮಗೊಳಿಸಲಾಗುವುದು. ಅನುದಾನ ಒದಗಿಸಿ ಒಂದೇ ವರ್ಷದಲ್ಲಿ ಯೋಜನೆಗಳ ಅನುಷ್ಠಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇದನ್ನೂ ಓದಿDharwad: ರಾಜ್ಯದ ವಿಶೇಷ ಸ್ಥಳಗಳ ಪುಸ್ತಕ ಸರಣಿ ಯೋಜನೆ: ಸಿಎಂ ಬೊಮ್ಮಾಯಿ

ಕಲಂ 371 (ಜೆ) ಅನುಷ್ಠಾನದ ಉಸ್ತುವಾರಿ ಕೋಶವನ್ನು ಬೆಂಗಳೂರಿನಿಂದ ಕಲಬುರಗಿಗೆ ಸ್ಥಳಾಂತರಿಸುವ ಪ್ರಕ್ರಿಯೆ ಜಾರಿಯಲ್ಲಿದ್ದು, ಇನ್ನೇನು ವಾರದೊಳಗೆ ಪೂರ್ಣಗೊಳ್ಳಲಿದೆ. ಇದೇ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ರಚನೆ ಮಾಡಲಾಗುವುದು ಎಂದರು. ಇನ್ನು ಸಮ್ಮೇಳನದಲ್ಲಿ ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿ ಕುರಿತು ಚರ್ಚೆ ನಡೆಸಿ ಅವುಗಳ ನಿರ್ಣಯಗಳ ಕರಡನ್ನು ಸರ್ಕಾರಕ್ಕೆ ಕಳುಹಿಸಿಕೊಡಿ. ಅವುಗಳ ಜಾರಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

ವ್ಯಂಗ್ಯಚಿತ್ರ, ವಸ್ತುಪ್ರದರ್ಶನ ಉದ್ಘಾಟನೆ

ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಅವರು ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿದರು. ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ.ಅಜಯ್‌ಸಿಂಗ್‌ ವಸ್ತುಪ್ರದರ್ಶನ, ಸಂಸದ ಡಾ.ಉಮೇಶ ಜಾಧವ ವ್ಯಂಗ್ಯಚಿತ್ರ ಪ್ರದರ್ಶನ ಉದ್ಘಾಟಿಸಿದರು. ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಅಧ್ಯಕ್ಷ , ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅವರು ಕೆಯುಡಬ್ಲುಜೆ 2022ರ ಕ್ಯಾಲೆಂಡರ್‌ ಬಿಡುಗಡೆ ಮಾಡಿದರು. 

ಇದೇ ಸಂದರ್ಭದಲ್ಲಿ ಪತ್ರಿಕಾ ಭವನದ ಮೊದಲ ಮಹಡಿ ಉದ್ಘಾಟನೆ, ಕೋವಿಡ್‌ ಕತೆಗಳು, ಮಾಧ್ಯಮ ಅವಲೋಕನ ಹಾಗೂ ಮಾಧ್ಯಮ ಹೆಜ್ಜೆಗಳು ಕೃತಿಗಳನ್ನು ಮುಖ್ಯಮಂತ್ರಿ ಬಿಡುಗಡೆ ಮಾಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗಳ ಪ್ರದಾನ ಮಾಡಲಾಯಿತು.

Follow Us:
Download App:
  • android
  • ios