ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ 5 ವರ್ಷಗಳ ಕಾಲ ಸಿಎಂ ಆಗಿ ಮುಂದುವರಿಯಬೇಕೋ ಬೇಡ್ವೋ ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಬೆಂಗಳೂರು (ಸೆ. 18): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ 5 ವರ್ಷಗಳ ಕಾಲ ಸಿಎಂ ಆಗಿ ಮುಂದುವರಿಯಬೇಕೋ ಬೇಡ್ವೋ ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಈಜೀಪುರದಲ್ಲಿ ಈ ಸಂಬಂಧ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ ನಡುವೆ ಪೈಪೋಟಿ ನಡೆದಿದೆ. ಇಬ್ಬರ ನಡುವೆ ಅಧಿಕಾರ ಹಂಚಿಕೆಯಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿರುವುದು ನೋಡಿದ್ದೇನೆ. ಆದರೆ ನಾಯಕರ ಮಧ್ಯೆ ಅಂತಹ ಯಾವುದೇ ಅಧಿಕಾರ ಹಂಚಿಕೆ, ಅಸಮಾಧಾನ, ಭಿನ್ನಾಭಿಪ್ರಾಯ ಇಲ್ಲ ಎಂದರು.
ಸಿದ್ದರಾಮಯ್ಯ ಜನಪರ ಕೆಲಸ ಮಾಡುತ್ತಿದ್ದಾರೆ. ಒಳ್ಳೆಯ ಆಡಳಿತ ನೀಡುತ್ತಿದ್ದಾರೆ. ನಾವೆಲ್ಲರೂ ಸಿದ್ದರಾಮಯ್ಯನವರ ಜೊತೆಗಿದ್ದೇವೆ. ಅದ್ಯಾಗೂ ಸಿಎಂ ಐದು ವರ್ಷ ಮುಂದುವರಿಯಬೇಕೋ, ಬದಲಾವಣೆ ಮಾಡಬೇಕೋ ಎಂಬ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಜನರಿಗೆ ಆರೋಗ್ಯ ಸೇವೆ ನೀಡಲು ಬದ್ದ: ಸಚಿವ ದಿನೇಶ್ ಗುಂಡೂರಾವ್
ಸಿದ್ದರಾಮಯ್ಯ-ಡಿಕೆ ಶಿವಕುಮಾರ ನಡುವೆ ಮುಖ್ಯಮಂತ್ರಿ ಸ್ಥಾನದ ವಿಚಾರಕ್ಕೆ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಮುಸುಕಿನ ಗುದ್ದಾಟ ನಡೆದಿದೆ. ಕೆಲವರು ಸಿದ್ದರಾಮಯ್ಯರೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಯಾವುದೇ ಅಧಿಕಾರ ಹಂಚಿಕೆ ಇಲ್ಲ ಎಂದರೆ ಇನ್ನು ಕೆಲವರು ಕೆಲವರು ಎರಡೂವರೆ ವರ್ಷದಲ್ಲಿ ಸಿಎಂ ಅಧಿಕಾರದಿಂದ ಕೆಳಗಿಳಿಯುತ್ತಾರೆ ಎಂದು ಪರೋಕ್ಷವಾಗಿ ಹೇಳಿಕೆ ನೀಡುತ್ತಿದ್ದಾರೆ. ಆದರೆ ನಿಜಕ್ಕೂ ಕಾಂಗ್ರೆಸ್ ಪಾಳಯದೊಳಗೆ ಸಿಎಂ ಬದಲಾವಣೆ ಕೂಗು ಎದ್ದಿದೆಯಾ? ವಿರೋಧಿಗಳ ಸೃಷ್ಟಿಯಾ ಮುಂಬರುವ ಲೋಕಸಭಾ ಚುನಾವಣೆ ಬಳಿಕ ಗೊತ್ತಾಗಲಿದೆ.
ಸಿಎಂ ವಿರುದ್ಧ ಮಾತನಾಡಿದರೆ ನಿಮ್ಮ ವ್ಯಕ್ತಿತ್ವಕ್ಕೆ ಹಾನಿ: ಹರಿಪ್ರಸಾದ್‌ಗೆ ಸಚಿವ ದಿನೇಶ್ ಸಲಹೆ
