ಹೊರ ರಾಜ್ಯಗಳಿಂದ ಬರುವ ಹಾಲಿನ ಗುಣಮಟ್ಟವನ್ನು ಗಡಿಯಲ್ಲಿಯೇ ಪರೀಕ್ಷಿಸಲಾಗುತ್ತಿದ್ದು, ಕಲಬೆರಕೆ ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ಯು.ಟಿ.ಖಾದರ್‌ ಎಚ್ಚರಿಸಿದ್ದಾರೆ. ಜೊತೆಗೆ, ಕಬಾಬ್‌ನಂತಹ ಆಹಾರ ಪದಾರ್ಥಗಳಲ್ಲಿ ವಿಷಕಾರಿ ಬಣ್ಣ ಬಳಸದಂತೆ ಎಚ್ಚರಿಸಿದರು.

ಬೆಂಗಳೂರು (ಜೂ.21): ಹೊರ ರಾಜ್ಯಗಳಿಂದ ಬರುವ ಹಾಲಿನ ಗುಣಮಟ್ಟದ ಬಗ್ಗೆ ಸಂಶಯ ಬಂದ ಹಿನ್ನೆಲೆಯಲ್ಲಿ ಗಡಿ ಭಾಗಗಳಲ್ಲೇ ಹಾಲಿನ ಗುಣಮಟ್ಟ ಪರೀಕ್ಷಿಸಲಾಗುತ್ತಿದೆ. ಕಲಬೆರಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್‌ ಎಚ್ಚರಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಖಾಸಗಿ ಕಂಪನಿಗಳ ಹಾಲಿನಲ್ಲಿ ಕಲಬೆರಕೆ ಮಾಡಲಾಗುತ್ತಿದ್ದು, ಆರೋಗ್ಯಕ್ಕೆ ಹಾನಿಕಾರಕ ಅಂಶಗಳು ಇವೆ ಎಂಬ ಆರೋಪ ವ್ಯಕ್ತವಾದ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಂದ ಬರುವ ಹಾಲನ್ನು ಗಡಿ ಭಾಗಗಳಲ್ಲೇ ತಪಾಸಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಸಾಕಷ್ಟು ನಂದಿನಿ ಹಾಲು ಲಭ್ಯವಿದ್ದರೂ ಕೆಲವರು ತಮಿಳುನಾಡಿನ ಕೃಷ್ಣಗಿರಿ ಮತ್ತಿತರ ಭಾಗಗಳಿಂದ ಹಾಲು ತರಿಸುತ್ತಿದ್ದಾರೆ. ಹೀಗಾಗಿ ಗುಣಮಟ್ಟ ಪರೀಕ್ಷಿಸುವುದು ನಮ್ಮ ಕರ್ತವ್ಯ ಎಂದು ತಿಳಿಸಿದರು.

ಜನೌಷಧಿ ಕೇಂದ್ರಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿಲ್ಲ. ಔಷಧಿಗಳು ಗುಣಮಟ್ಟ ಹೊಂದಿವೆಯೇ ಎಂದು ಪರಿಶೀಲಿಸಿದ್ದಾರೆ. ಜನೌಷಧಿ ಹೆಸರಲ್ಲಿ ಯಾವ್ಯಾವುದೋ ಔಷಧಿ ನೀಡಿದರೆ ಸಹಿಸುವುದಿಲ್ಲ. ಎಲ್ಲ ಸರಿ ಇದ್ದರೆ ಜನೌಷಧಿ ಕೇಂದ್ರದವರು ಆತಂಕಪಡಬೇಕಾಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.--

‘ಕಬಾಬ್‌ನಲ್ಲಿ ವಿಷಕಾರಿ ಕಲರ್‌ ಬಳಸಿದರೆ ಕ್ರಮ’

ಕಬಾಬ್‌, ಶವರ್ಮಾ, ಗೋಬಿ ಸೇರಿ ಯಾವುದೇ ಆಹಾರ ಪದಾರ್ಥಗಳಿಗೆ ವಿಷಕಾರಿ ಬಣ್ಣ ಬಳಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಹೋಟೆಲ್‌ನವರು ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಕಲರ್‌ಗಳನ್ನು ಬಳಸಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಯು.ಟಿ.ಖಾದರ್‌ ತಿಳಿಸಿದರು.