ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ಖಾಸಗಿ ಶಾಲಾ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ. ಈ ಘಟನೆ ಆರೋಗ್ಯ ತಜ್ಞರಲ್ಲಿ ಚಿಂತೆ ಮೂಡಿಸಿದೆ.

ದಾವಣಗೆರೆ (ಜುಲೈ16): ರಾಜ್ಯಾದ್ಯಂತ ಹೃದಯಾಘಾತ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿರುವ ಬೆನ್ನಲ್ಲೇ, ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದುರ್ಗಿಗುಡಿಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. 

ಹೊನ್ನಾಳಿಯ ಖಾಸಗಿ ಶಾಲೆಯ ದೈಹಿಕ ಶಿಕ್ಷಕ ರವಿಕುಮಾರ್ (42) ಅವರು ಶಾಲಾ ಆವರಣದಲ್ಲಿ ಸಂಜೆ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಕಳೆದ ಒಂದು ತಿಂಗಳಲ್ಲಿ ರಾಜ್ಯದಲ್ಲಿ ನೂರಾರು ಜನರು, ಯುವಕರು ಮತ್ತು ಮಕ್ಕಳು ಸೇರಿದಂತೆ ಹೃದಯಾಘಾತಕ್ಕೆ ಬಲಿಯಾಗಿದ್ದು, ಈ ಘಟನೆಗಳು ಆತಂಕಕಾರಿ ವಾತಾವರಣ ಸೃಷ್ಟಿಸಿವೆ. ಹಾಸನ, ಮೈಸೂರು, ಬಾಗಲಕೋಟೆ, ರಾಯಚೂರು ಸೇರಿದಂತೆ ಇದೀಗ ದಾವಣಗೆರೆಯಲ್ಲೂ ಹೃದಯಾಘಾತದಿಂದ ಸಾವಿನ ಪ್ರಮಾಣ ಹೆಚ್ಚುತ್ತಿರುವುದು ಆರೋಗ್ಯ ತಜ್ಞರಲ್ಲಿ ಗಂಭೀರ ಚಿಂತೆ ಮೂಡಿಸಿದೆ.