ಮೂರು ದಿನಗಳಿಂದ ನಿರಂತರವಾಗಿ ಉಡುಪಿ, ಉತ್ತರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶದಲ್ಲಿ ರಾಜ್ಯದ ಅತಿ ಹೆಚ್ಚು ಗರಿಷ್ಠ ಉಷ್ಣಾಂಶ ದಾಖಲಾಗುತ್ತಿದ್ದು, ಹೀಗಾಗಿ, ಕಳೆದ ಗುರುವಾರ ಮತ್ತು ಶುಕ್ರವಾರ ಉಷ್ಣ ಅಲೆಯ ಎಚ್ಚರಿಕೆ ನೀಡಲಾಗಿತ್ತು. ಇದೀಗ ಈ ಎಚ್ಚರಿಕೆಯನ್ನು ಶನಿವಾರಕ್ಕೂ ವಿಸ್ತರಣೆ ಮಾಡಲಾಗಿದೆ.

ಬೆಂಗಳೂರು(ಮಾ.11): ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಮುಂದುವರೆದಿದ್ದು, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಸೀಮಿತ ಸ್ಥಳಗಳಿಗೆ ನೀಡಲಾದ ಉಷ್ಣ ಅಲೆಯ ಎಚ್ಚರಿಕೆಯನ್ನು ಶನಿವಾರಕ್ಕೆ ವಿಸ್ತರಿಸಲಾಗಿದೆ.

ಮೂರು ದಿನಗಳಿಂದ ನಿರಂತರವಾಗಿ ಉಡುಪಿ, ಉತ್ತರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶದಲ್ಲಿ ರಾಜ್ಯದ ಅತಿ ಹೆಚ್ಚು ಗರಿಷ್ಠ ಉಷ್ಣಾಂಶ ದಾಖಲಾಗುತ್ತಿದ್ದು, ಹೀಗಾಗಿ, ಕಳೆದ ಗುರುವಾರ ಮತ್ತು ಶುಕ್ರವಾರ ಉಷ್ಣ ಅಲೆಯ ಎಚ್ಚರಿಕೆ ನೀಡಲಾಗಿತ್ತು. ಇದೀಗ ಈ ಎಚ್ಚರಿಕೆಯನ್ನು ಶನಿವಾರಕ್ಕೂ ವಿಸ್ತರಣೆ ಮಾಡಲಾಗಿದೆ.

Heat wave: ಬಂದಿದೆ ಉಷ್ಣ ಮಾರುತ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಕಳೆದ ಗುರುವಾರ ಉಡುಪಿಯ ಪಣಂಬೂರು ಮತ್ತು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ 37.6 ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ 36.3 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬ್ರಹ್ಮಾವರದಲ್ಲಿ 38.4 ಡಿಗ್ರಿ ಸೆಲ್ಷಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಶುಕ್ರವಾರ ಹೊನ್ನಾವರದಲ್ಲಿ 37.6, ಕಾರವಾರ 36.3 ಹಾಗೂ ಮಂಗಳೂರಿನಲ್ಲಿ 35 ಡಿಗ್ರಿ ಸೆಲ್ಷಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉಳಿದಂತೆ ಕರಾವಳಿ ಜಿಲ್ಲೆಗಳಲ್ಲಿ ಶನಿವಾರ ಸಾಮಾನ್ಯಕ್ಕಿಂತ 4 ರಿಂದ 5 ಡಿಗ್ರಿ ಸೆಲ್ಷಿಯಸ್‌, ಭಾನುವಾರ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಷಿಯಸ್‌ ಗರಿಷ್ಠ ಉಷ್ಣಾಂಶ ಹೆಚ್ಚಾಗಲಿದೆ. ಬಾಗಲಕೋಟೆಯಲ್ಲಿ 12.2 ಡಿಗ್ರಿ ಸೆಲ್ಷಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಒಳನಾಡಿನ ಕೆಲವು ಪ್ರದೇಶದಲ್ಲಿ ಮುಂದಿನ 48 ಗಂಟೆಯ ಅವಧಿಯಲ್ಲಿ ಮೇಲ್ಮೈಗಾಳಿಯು 30 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.