Asianet Suvarna News Asianet Suvarna News

ಉತ್ತರ ಕರ್ನಾಟಕದಲ್ಲಿ 3 ದಿನ ಬಿಸಿ ಗಾಳಿ ಅಪಾಯ..!

ಬೆಳಿಗ್ಗೆ 11.30ರಿಂದ ಮಧ್ಯಾಹ್ನ 3.30ರವರೆಗೆ ಹೊರಗೆ ಓಡಾಡಬೇಡಿ| ಯಾದಗಿರಿಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಗರಿಷ್ಠ ಉಷ್ಣಾಂಶ 42.1 ಡಿಗ್ರಿ ಸೆಲ್ಸಿಯಸ್‌ ದಾಖಲು| ಮುಂದಿನ ಎರಡು ದಿನಗಳ ಕಾಲ ಕರಾವಳಿ ಮತ್ತು ದಕ್ಷಿಣ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ತುಂತುರು ಮಳೆಯಾಗುವ ಸಾಧ್ಯತೆ|

Heatwaves in Next Three Days in North Karnataka Region
Author
Bengaluru, First Published May 22, 2020, 2:38 PM IST

ಬೆಂಗಳೂರು(ಮೇ.22): ‘ಅಂಫಾನ್‌’ ಚಂಡಮಾರುತದ ಪ್ರಭಾವ ಕಡಿಮೆಯಾಗುತ್ತಿದಂತೆ ಉತ್ತರ ಕರ್ನಾಟಕದ ಭಾಗದ ನಾಲ್ಕು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಬಿಸಿಗಾಳಿ ಭೀತಿ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿದ್ದ ‘ಅಂಫಾನ್‌’ ಚಂಡಮಾರುತದ ಪ್ರಭಾವ ಕಡಿಮೆಯಾಗುತ್ತಿದ್ದಂತೆ ಉತ್ತರ ಕರ್ನಾಟಕದ ಭಾಗದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಿದ್ದು, ಮುಂದಿನ ಮೂರು ದಿನ ಬೀದರ್‌, ಕಲಬುರಗಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

2100ರ ವೇಳೆಗೆ 1.2 ಶತಕೋಟಿ ಜನರನ್ನು ಕಾಡುತ್ತದಂತೆ #HeatStress

ಈ ಮೂರು ದಿನಗರಿಷ್ಠ ಉಷ್ಣಾಂಶದ ಪ್ರಮಾಣ 41 ಡಿಗ್ರಿ ಸೆಲ್ಸಿಯಸ್‌ನಿಂದ 43 ಡಿಗ್ರಿ ಸೆಲ್ಸಿಯಸ್‌ ಇರುವ ಸಾಧ್ಯತೆ ಇದೆ. ಹಾಗಾಗಿ, ಸಾರ್ವಜನಿಕರು ಮತ್ತು ರೈತರು ಬೆಳಗ್ಗೆ 11.30 ರಿಂದ ಮಧ್ಯಾಹ್ನ 3.30ರ ವರೆಗೆ ಹೊರಗೆ ಓಡಾಡುವುದನ್ನು ಕಡಿಮೆ ಮಾಡಿ. ಸಾಧ್ಯವಾದಷ್ಟು ಮನೆಯಲ್ಲಿಯೇ ಇರುವಂತೆ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಗುರುವಾರ ಯಾದಗಿರಿಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಗರಿಷ್ಠ ಉಷ್ಣಾಂಶ 42.1 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗಿದೆ. ಮುಂದಿನ ಎರಡು ದಿನಗಳ ಕಾಲ ಕರಾವಳಿ ಮತ್ತು ದಕ್ಷಿಣ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಮೇ 24ರ ನಂತರ ದಕ್ಷಿಣ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಎರಡು ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
 

Follow Us:
Download App:
  • android
  • ios