Karnataka Rain: ಮುಂದಿನ 24 ಘಂಟೆ ರಾಜ್ಯಾದ್ಯಂತ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಮುಂದಿನ 24 ಘಂಟೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ಕ್ರಮವಹಿಸುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು (ಆ.30): ರಾಜ್ಯಾದ್ಯಂತ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಭಾರಿ ಮಳೆಯಾಗಲಿದ್ದು, ಒಂದೆರಡು ಕಡೆ ಗುಡುಗು, ಮಿಂಚಿನ ಸಾಧ್ಯತೆ ಇದೆ. ಮುಂದಿನ 24 ಘಂಟೆಗಳು ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಕಲಬುರ್ಗಿ, ಯಾದಗಿರಿ ಮಳೆಯಾಗಲಿದೆ.
ಹಾವೇರಿ: ನಿರಂತರ ಮಳೆ, ಮೂರು ದಿನಗಳಲ್ಲಿ 670 ಮನೆ ಹಾನಿ
ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಎಲ್ಲಾ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನ ಗದಗ, ಹಾವೇರಿ, ರಾಯಚೂರು ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಎಲ್ಲ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಹಿಸುವಂತೆ ಹವಾಮಾನ ಇಲಾಖೆ ತಿಳಿಸಿದೆ.
ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ: ರಾಜ್ಯಾದ್ಯಂತ ಭಾರೀ ಮಳೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆ ಕರಾವಳಿ ಪ್ರದೇಶದಲ್ಲಿ ಅನಾಹುತ ತಪ್ಪಿಸಲು ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಿದೆ. ಕೆಲವಡೆ ಗುಡುಗು, ಮಿಂಚು ಬಿರುಗಾಳಿ ಸಹಿತ ಮಳೆಯಾಗಲಿದ್ದು, ಯಾವುದೇ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಎಲ್ಲ ಜಿಲ್ಲೆಗಳಿಗೆ ಮುನ್ಸೂಚನೆ ನೀಡಲಾಗಿದೆ. ಮಳೆನೀರು ಸಂಗ್ರಹಿಸಿ ಕುಡಿಯೋ ಅಭ್ಯಾಸ ಆರೋಗ್ಯಕ್ಕೆ ಒಳ್ಳೆಯದಾ?