ಬೆಂಗಳೂರು (ಅ. 17): ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆ ಕೊಂಚ ಕ್ಷೀಣಿಸಿದೆ. ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಆದರೆ ಮಹಾರಾಷ್ಟ್ರದ ಜಲಾಶಯಗಳಿಂದ ಹರಿದು ಬರುತ್ತಿರುವ ನೀರು ಉತ್ತರ ಕರ್ನಾಟಕ ಭಾಗವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. 

ಕಲಬುರ್ಗಿ, ಯಾದಗಿರಿ, ವಿಜಯಪುರದಲ್ಲಿ ಈಗಾಗಲೇ 200 ಕ್ಕೂ ಹೆಚ್ಚು ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿದೆ. ಮಳೆ ಸಂಬಂಧಿ ಅನಾಹುತಕ್ಕೆ ವೃದ್ದೆ ಸೇರಿ ರಾಜ್ಯದಲ್ಲಿ ಮೂವರು ಬಲಿಯಾಗಿದ್ದಾರೆ. ಯಾವ್ಯಾವ ಭಾಗಗಳಲ್ಲಿ ಏನೇನಾಗಿದೆ ಎಂದು ನೋಡೋಣ ಬನ್ನಿ..!