ಕರ್ನಾಟಕದಲ್ಲಿ ಮಳೆ ಆರಂಭಗೊಂಡಿದೆ. ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಇದರ ಬೆನ್ನಲ್ಲೇ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದೆ. ಜೂನ್ 11ರ ವರೆಗೆ ಭಾರಿ ಮಳೆಯಾಗಲಿದೆ ಎಂದಿದೆ. 

ಬೆಂಗಳೂರು (ಜೂ.09) ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಭಾರಿ ಮಳೆಯಾಗುತ್ತಿದೆ. ಇದೀಗ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಜೂನ್ 11 ರವರೆಗೆ ಭಾರಿ ಮಳೆಯಾಗಲಿದೆ ಎಂದಿದೆ. ಪ್ರಮುಖವಾಗಿ 5 ಜಿಲ್ಲೆಗಳಲ್ಲಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇದೇ ವೇಳೆ ಕೆಲ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಹಾಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಭಾರಿ ಮಳೆ ಮುನ್ಸೂಚನೆ ಬೆನ್ನಲ್ಲೇ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಜೆಲ್ಲೆಗಳಲ್ಲಿ ಭಾರಿ ಮಳೆಯಿಂದ ಅವಾಂತರಗಳು ಸೃಷ್ಟಿಯಾಗುವ ಸಾಧ್ಯತೆ ಇದೆ. ಪರಿಣಾಮ ಸಾರ್ವಜನಿಕರು ಎಚ್ಚರಿಕೆ ವಹಿಸುವಂತ ಸೂಚಿಸಲಾಗಿದೆ. ಇದೇ ವೇಳೆ ಐದು ಜಿಲ್ಲೆಯ ಜಿಲ್ಲಾಧಿಕಾರಿಗಳು ಕಟ್ಟೆಚ್ಚರವಹಿಸಲು ಸೂಚಿಸಿದ್ದಾರೆ. ಇದೇ ವೇಳೆ ಮಳೆ ಕುರಿತು ಸಭೆ ನಡೆಸಿದ್ದು, ತಾಲೂಕು ಕೇಂದ್ರಗಳಿಗೆ ಸೂಚನೆ ನೀಡಲಾಗಿದೆ.

ಆರೇಂಜ್ ಹಾಗೂ ಯೆಲ್ಲೋ ಅಲರ್ಟ್ ಜಿಲ್ಲೆಗಳು

ಕೊಡಗು, ಹಾಸನ, ಹಾವೇರಿ, ಬೆಳಗಾವಿ, ಧಾರಾವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇತ್ತ ಬೀದರ್, ಕಲ್ಬುರ್ಗಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಬಾಗಲಕೋಟೆ, ದಾವಣಗೆರೆ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಸಾರ್ವಜನಿಕರು ಎಚ್ಚರಿಕೆ ವಹಿಸಿಲು ಜಿಲ್ಲಾಧಿಕಾರಿ ಸೂಚನೆ

ಭಾರತೀಯ ಹವಾಮಾನ ಇಲಾಖೆ, ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂ.10 ಬೆಳಗ್ಗೆ 8.30ರ ವರೆಗೆ ರೆಡ್ ಅಲರ್ಟ್ ಇದ್ದು, ಹೆಚ್ಚಿನ ಮಳೆಯಾಗುವ ಸಾಧ್ಯತೆಯಿರುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ. ಕಾರಣ ಜಿಲ್ಲಾಡಳಿತವು ಜಿಲ್ಲೆಯಲ್ಲಿ ಮುಂಗಾರು ಪೂರ್ವ ಸಿದ್ಧತೆಯನ್ನು ಈಗಾಗಲೇ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆದ ಕೆ.ಲಕ್ಷ್ಮಿಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.