ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ ಗಡಿಯಾರ ಸರ್ಕಾರಿ ಶಾಲೆಯ ಬಳಿ ಗುಡ್ಡ ಕುಸಿತ ಉಂಟಾಗಿದ್ದು, ಅಪಾಯಕಾರಿ ಸನ್ನಿವೇಶ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ.

ಬಂಟ್ವಾಳ (ಜು.4):  ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ ಗಡಿಯಾರ ಸರ್ಕಾರಿ ಶಾಲೆಯ ಬಳಿ ಗುಡ್ಡ ಕುಸಿತ ಉಂಟಾಗಿದ್ದು, ಅಪಾಯಕಾರಿ ಸನ್ನಿವೇಶ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ.

ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಗಡಿಯಾರ ಎಂಬಲ್ಲಿನ ಸರ್ಕಾರಿ ಶಾಲೆಯ ಕಟ್ಟಡ ಅಪಾಯಕಾರಿ ಸನ್ನಿವೇಶದಲ್ಲಿದ್ದು, ಊರಿನ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಬಿ.ಸಿ.ರೋಡು - ಅಡ್ಡಹೊಳೆ ಚತುಷ್ಪತ ಹೆದ್ದಾರಿ ಕಾಮಗಾರಿ ನಡೆಯುವ ವೇಳೆ ಶಾಲೆಯ ಕಟ್ಟಡದ ಬದಿವರೆಗೆ ಅಗೆಯಲಾಗಿತ್ತು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆಯಲ್ಲಿ ಮಣ್ಣು ಅಗೆದ ಪರಿಣಾಮವಾಗಿ ಇದೀಗ ಗುಡ್ಡಕುಸಿತ ಕಂಡಿದೆ. ಗುಡ್ಡ ಕುಸಿತದಿಂದಾಗಿ ಶಾಲೆಯ ಬಳಿ ನಿರ್ಮಿಸಲಾಗಿರುವ ವಿದ್ಯುತ್‌ ಸ್ಥಾವರ ಘಟಕವು ಅಪಾಯಕಾರಿ ಸ್ಥಿತಿಯಲ್ಲಿದ್ದು, ಕುಸಿಯುವ ಭೀತಿ ಉಂಟಾಗಿದೆ.

ಮೂವರು ಶಿಕ್ಷಕಿಯರ ಜಗಳಕ್ಕೆ ಹೆದರಿ ಶಾಲೆ ತ್ಯಜಿಸಿದ 37 ವಿದ್ಯಾರ್ಥಿಗಳು!

ಸದ್ಯ ಹೆದ್ದಾರಿ ಇಲಾಖೆಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸೋಮವಾರ ಶಾಲೆಗೆ ರಜೆ ಘೋಷಿಸಲಾಗಿತ್ತು.

* ಅಧಿಕಾರಿಗಳ ಭೇಟಿ, ಪರಿಶೀಲನೆ

ಅಪಾಯದ ಹಂತದಲ್ಲಿರುವ ಗಡಿಯಾರ ಸರ್ಕಾರಿ ಶಾಲೆ ಹಾಗೂ ವಿದ್ಯುತ್‌ ಟವರ್‌ ಸ್ಥಳಕ್ಕೆ ಅಧಿಕಾರಿಗಳು ಮತ್ತು ಗುತ್ತಿಗೆ ವಹಿಸಿಕೊಂಡ ಕಂಪನಿ ಪ್ರಮುಖರು ಭೇಟಿ ನೀಡಿ, ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ಭರವಸೆ ನೀಡಿದ್ದಾರೆ. ಸ್ಥಳಕ್ಕೆ ತಹಸೀಲ್ದಾರ್‌ ಬಿ.ಎಸ್‌. ಕೂಡಲಗಿ, ಬಿ.ಇ.ಒ. ಜ್ಞಾನೇಶ್‌ ಹಾಗೂ ಗುತ್ತಿಗೆ ವಹಿಸಿಕೊಂಡ ಕೆ.ಎನ್‌.ಆರ್‌.ಸಿ. ಕಂಪನಿಯ ಪ್ರಮುಖರು ಶಾಲೆಗೆ ಭೇಟಿ ನೀಡಿದರು.

ಸ್ಥಳದಲ್ಲಿ ಗುಡ್ಡ ಜರಿತದಿಂದ ಮುಂದೆ ಸಂಭವಿಸಬಹುದಾದ ಅಪಾಯದ ಬಗ್ಗೆ ಮಾಹಿತಿ ಪಡೆದ ಬಳಿಕ ಶಾಲಾ ಮುಖ್ಯೋಪಾಧ್ಯಾಯ ಸದಾನಂದ ಟಿ.ಎಂ. ಮತ್ತು ಗ್ರಾಮಸ್ಥರ ಜೊತೆ ಅಧಿಕಾರಿಗಳು ಮಾತುಕತೆ ನಡೆಸಿ ಸಮಸ್ಯೆ ಪರಿಹಾರ ಕಂಡುಕೊಳ್ಳುವ ತೀರ್ಮಾನ ತೆಗೆದುಕೊಂಡರು.

ಮಂಗಳೂರು: ಮಳೆಗೆ ಗುಡ್ಡ ಕುಸಿದು ಓರ್ವ ಸಾವು, ಮೂವರ ರಕ್ಷಣೆ

ಕಾಮಗಾರಿ ಆರಂಭಿಸುವಂತೆ ಸೂಚನೆ ನೀಡಿದಲ್ಲದೆ, ತಡೆಗೋಡೆ ನಿರ್ಮಿಸಿಕೊಡುವ ಬಗ್ಗೆ ಲಿಖಿತವಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.