Asianet Suvarna News Asianet Suvarna News

ವರುಣನ ಅಬ್ಬರಕ್ಕೆ ಕಂಗೆಟ್ಟ ಕರಾವಳಿ, ಮಲೆನಾಡು: ಇನ್ನೂ 5 ದಿನ ಗಾಳಿ ಸಹಿತ ಭಾರೀ ಮಳೆ

ಉತ್ತರ ಕನ್ನಡದ ಐದು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಂದು ತಾಲೂಕಿಗೆ ಸೋಮ ವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸ ಲಾಗಿದ್ದು, ಇದೀಗ ಮತ್ತೆ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳು ಹಾಗೂ ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಹೊನ್ನಾವರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ.

heavy rain in coastal and malenadu in karnataka grg
Author
First Published Jul 9, 2024, 5:09 AM IST | Last Updated Jul 9, 2024, 8:46 AM IST

ಬೆಂಗಳೂರು(ಜು.09): ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾನುವಾರ ರಾತ್ರಿಯಿಂದೀಚೆಗೆ ಭರ್ಜರಿ ಮಳೆ ಯಾಗಿದ್ದು, ಪ್ರವಾಹದ ಆತಂಕ ಹೆಚ್ಚಾಗಿದೆ. ಉತ್ತರ ಕನ್ನಡದಲ್ಲಿ ತಗ್ಗುಪ್ರದೇಶಗಳಿಗೆ ನೀರು ನುಗ್ಗಿ ಹತ್ತಾರು ಮನೆಗಳಿಗೆ ನೀರು ನುಗ್ಗಿದ್ದರೆ, ಕೃತಕ ಪ್ರವಾಹದಿಂದಾಗಿ ಉಡುಪಿ ನಗರದ 110ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಎರಡೂ ಜಿಲ್ಲೆಗಳಲ್ಲಿ ಪ್ರವಾಹಪೀಡಿತ ಸ್ಥಳದ 100ಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಸ್ಥಳ ಹಾಗೂ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.

ಉತ್ತರ ಕನ್ನಡದ ಐದು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಂದು ತಾಲೂಕಿಗೆ ಸೋಮ ವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸ ಲಾಗಿದ್ದು, ಇದೀಗ ಮತ್ತೆ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳು ಹಾಗೂ ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಹೊನ್ನಾವರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ.

ಮಲೆನಾಡಲ್ಲಿ ಮಳೆ ಅಬ್ಬರ; ಅಪಾಯಮಟ್ಟದಲ್ಲಿ ನದಿಗಳು!

ಕರಾವಳಿ ಜಿಲ್ಲೆಗಳಲ್ಲಿ ಮಳೆಯಬ್ಬರ ಮುಂದುವರಿದಿದ್ದು, ತಗ್ಗು ಪ್ರದೇಶಗಳ ಹಾಗೂ ನದಿ ತೀರದ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಉಡುಪಿ ಜಿಲ್ಲೆ ಯಲ್ಲಿ ಭಾನುವಾರ ರಾತ್ರಿಯಿಂದೀಚೆಗೆ 24 ಗಂಟೆ ಅವಧಿಯಲ್ಲಿ ಸುಮಾರು 200 ಮಿ.ಮೀ. ಮಳೆಯಾಗಿದ್ದು, ನೂರಾರು ಎಕ್ರೆ ಕೃಷಿ ಭೂಮಿ ಹಾಗೂ 110ಕ್ಕೂ ಅಧಿಕ ಮನೆಗಳು ಜಲಾವೃತಗೊಂಡಿವೆ. ಉಡುಪಿ ನಗರದ ಹಲವು ತಗ್ಗುಪ್ರದೇಶಗಳನಿವಾಸಿಗಳಂತೂಕೃತಕ ನೆರೆಯಿಂದ ಪರದಾಡುವಂತಾಗಿದೆ.

ಉಡುಪಿಯ ಕೇಂದ್ರ ಬಿಂದು ಕೃಷ್ಣ ಮಠದ ಪಾರ್ಕಿಂಗ್ ಏರಿಯಾಕ್ಕೆ ಇಂದ್ರಾಣಿ ಹೊಳೆ ನೀರು ಉಕ್ಕಿ ಪ್ರವಾಸಿ ಗರು ವಾಹನ ನಿಲ್ಲಿಸಲು ಪರದಾಡು ವಂತಾಯಿತು. ಜತೆಗೆ ಸಮೀಪದ ಬೈಲಕರೆ,ಮಠದಬೆಟ್ಟು,ಗುಂಡಿಬೈಲು, ಪಾಡಿಗಾರು, ಕರಂಬಳ್ಳಿ, ಬನ್ನಂಜೆ ಪ್ರದೇಶಗಳಲ್ಲಿ ನೂರಾರು ಮನೆಗಳು ಜಲಾವೃತಗೊಂಡಿದ್ದವು. ಅಗ್ನಿಶಾಮಕ ದಳದ ಸಿಬ್ಬಂದಿ, ದೋಣಿಗಳೊಂದಿಗೆ ರಾತ್ರಿಯೇ ಇಲ್ಲಿ ಬೀಡು ಬಿಟ್ಟಿದ್ದು, ಮಠದಬೆಟ್ಟುವಿನಹತ್ತಾರು ಆಸಹಾಯಕ ಮನೆಗಳಸದಸ್ಯ ರನ್ನು ಸ್ಥಳಾಂತರಗೊಳಿಸಿ ದರು. ಇನ್ನು ಪಾಡಿಗಾರು ಪ್ರದೇಶದ ಸುಮಾರು 30 ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಜನರು ರಾತ್ರಿಯಿಡೀ ಆತಂಕ ದಿಂದ ಕಳೆಯುವಂತಾಯಿತು.

60 ಮಂದಿ ಸ್ಥಳಾಂತರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಡ ತೋಕಾ ಗ್ರಾಮದ ಗುಡ್ಡಕಟ್ಟು ಮಜಿರೆಯಲ್ಲಿ ನೀರಿನ ಹರಿವು ಜಾಸ್ತಿ ಆಗಿದ್ದು, ಇಲ್ಲಿನ ನೆರೆಪೀಡಿತ ಪ್ರದೇಶದಲ್ಲಿನ 60 ಜನರನ್ನು ಎನ್‌ಡಿಆರ್‌ಎಫ್ ತಂಡ ಬೋಟ್ ಮೂಲಕ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿದೆ. ಹೊನ್ನಾವರ ತಾಲೂಕಿನಲ್ಲಿ ಸ್ಥಾಪಿಸಲಾದ 8 ಕಾಳಜಿ ಕೇಂದ್ರದಲ್ಲಿ ಒಟ್ಟಾರೆ ಈವರೆಗೆ 313 ಮಂದಿಗೆ ಆಶ್ರಯ ನೀಡಿದಂತಾಗಿದೆ.

ಮಲೆನಾಡಿನಲ್ಲೂ ಅಬ್ಬರ: ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶಂಗೇರಿಯಲ್ಲಿ ಉತ್ತಮ ಮಳೆಯಾಗಿದ್ದು, ತುಂಗಾ, ಭದ್ರಾ ಹಾಗೂ ಹೇಮಾವತಿ ನದಿಗಳು ತುಂಬಿ ಹರಿಯುತ್ತಿವೆ. ತುಂಗಭದ್ರಾ ನದಿ ಮೈದುಂಬಿ ಹರಿಯುತ್ತಿರುವುದರಿಂದ ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ಯಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ತಾಲೂಕಿನ ನದಿ ತೀರದಲ್ಲಿ ಭಾಗದಲ್ಲಿ ? ಕಡೆ ಕಾಳಜಿ ಕೇಂದ್ರ ಸ್ಥಾಪಿಸಲು ಸ್ಥಳಗಳನ್ನು ಗುರುತಿಸಲಾಗಿದೆ.

5 ದಿನ ಗಾಳಿ ಸಹಿತ ಭಾರಿ ಮಳೆ ಸಾಧ್ಯತೆ: ಕರಾವಳಿ ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್'

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಇನ್ನಷ್ಟು ಜೋರಾಗಿದ್ದು, ಕರಾವಳಿ, ಮಲೆನಾಡು ಹಾಗೂ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಗಾಳಿಸಹಿತ ಮಳೆಯಾಗಲಿರುವುದರಿಂದ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಘೋಷಿಸಿದೆ.

ಪ್ರವಾಹಕ್ಕೆ ಸಿಲುಕಿದ ಶಿವಾಜಿ ಕೋಟೆಗೆ ತೆರಳುತ್ತಿದ್ದ ಪ್ರವಾಸಿಗರ ದೃಶ್ಯ ಸೆರೆ, ಪ್ರಾಣ ಉಳಿಸಲು ಹೋರಾಟ!

ಬೆಳಗಾವಿಯಲ್ಲಿ ಮುಳುಗಿದ ಸೇತುವೆ

ಮಹಾರಾಷ್ಟ್ರದಲ್ಲಿ ಭಾರಿಮಳೆಯಾಗುತ್ತಿರುವುದರಿಂದಬೆಳಗಾವಿಯಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಆತಂಕ ಮನೆ ಮಾಡಿದೆ. ಈ ಭಾಗದಲ್ಲಿ ಕೃಷ್ಣ ಸೇರಿ ಹಲವು ನದಿಗಳ ನೀರಿನಮಟ್ಟ ಏರಿಕೆಯಾಗಿ ಚಿಕ್ಕೋಡಿಯ 4 ಸೇತುವೆಗಳು ಜಲಾವೃತವಾಗಿವೆ. ಚಿಕ್ಕೋಡಿಯ ಮಲ್ಲಿಕವಾಡ -ದತ್ತವಾಡ, ನಿಪ್ಪಾಣಿ ತಾಲೂಕಿನ ಕಾರದಗಾ- ಬೋಜ್, ಕುನ್ನೂರ-ಭೋಜವಾಡಿ ಸೇತುವೆ ಮತ್ತು ಮಾಂಜರಿ-ಭಾವನ ಸೌಂದತ್ತಿ ಸೇತುವೆ ಜಲಾವೃತಗೊಂಡಿವೆ. ದೂದ್‌ಗಂಗಾ ನದಿ ನೀರಿನ ಮಟ್ಟ ಏರಿಕೆಯಾಗಿ ಚಿಕ್ಕೋಡಿಯ ಯಕ್ಸಂಬಾದ ಮುಲ್ದಾಣಕಿ ಬಾಬಾ ದರ್ಗಾಕ್ಕೆ ನೀರು ನುಗ್ಗಿದೆ.

ಮಹಾರಾಷ್ಟ್ರ ಪ್ರವಾಹದಿಂದ ಉತ್ತರ ಕರ್ನಾಟಕಕ್ಕೆ ಆತಂಕ

ಬೆಳಗಾವಿ: ನೆರೆಯ ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಮುಂದುವರಿದಿರುವುದರಿಂದ ಕೃಷ್ಣಾ ನದಿ ಪಾತ್ರದ ಬೆಳಗಾವಿ, ವಿಜಯಪುರ, ಬಾಗಲ ಕೋಟೆ, ಯಾದಗಿರಿ, ಕಲಬುರಗಿ ಮುಂತಾದ ಜಿಲ್ಲೆಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ.

Latest Videos
Follow Us:
Download App:
  • android
  • ios