* ಜೂ.17 ವರೆಗೆ ಕರಾವಳಿ, ಮಲೆನಾಡಿಗೆ ಆರೆಂಜ್‌ ಅಲರ್ಟ್‌* ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ * ನಿರಂತರ ಮಳೆಯಿಂದ ಹಲವು ನದಿಗಳ ನೀರಿನ ಮಟ್ಟದಲ್ಲಿ ಏರಿಕೆ 

ಬೆಂಗಳೂರು(ಜೂ.14): ರಾಜ್ಯದ ಹಲವು ಕಡೆ ಮುಂಗಾರು ಮಳೆ ಬಿರುಸಾಗಿ ಸುರಿಯುತ್ತಿದ್ದು, ಭಾನುವಾರ ಉತ್ತರ ಕನ್ನಡ, ಮಂಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಹುಬ್ಬಳ್ಳಿ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ. ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗಿದೆ. ಬಳ್ಳಾರಿ, ಧಾರಾವಾಡ, ಹಾವೇರಿ, ಗದಗ, ಕೊಪ್ಪಳ ಜಿಲ್ಲೆಯ ಹಲವೆಡೆ ತುಂತುರು ಮಳೆಯಾಗಿದೆ.

Add Asianetnews Kannada as a Preferred SourcegooglePreferred

ಬೆಳಗ್ಗಿನಿಂದ ದ.ಕ. ಜಿಲ್ಲೆಯಲ್ಲಿ ಎಡೆಬಿಡದೆ ಮಳೆ ಸುರಿದಿದೆ. ಮಳೆ ಜೊತೆಗೆ ಗಾಳಿಯ ಹೊಡೆತವೂ ಜೋರಾಗಿದ್ದುದರಿಂದ ಜಿಲ್ಲೆಯ ಹಲವು ಮನೆಗಳಿಗೆ ಹಾನಿ ಸೇರಿದಂತೆ ವಿವಿಧ ಹಾನಿ ಸಂಭವಿಸಿದೆ. ನಿರಂತರ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ಮತ್ತು ಕಾಪು ತಾಲೂಕುಗಳಲ್ಲಿ ಕ್ರಮವಾಗಿ 10 ಮತ್ತು 6 ಮನೆಗಳು ಹಾನಿಯಾಗಿವೆ.

KRS ನೀರಿನ ಮಟ್ಟ 82.54 ಅಡಿಗೆ ಕುಸಿತ: ಕಳೆದ ವರ್ಷಕ್ಕಿಂತ 8 ಅಡಿ ಕಡಿಮೆ

ಇನ್ನು 4 ದಿನ ವ್ಯಾಪಕ ಮಳೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಅರಬ್ಬಿ ಸಮುದ್ರದಲ್ಲಿ ತೀವ್ರಗೊಂಡ ಮೇಲ್ಮೈ ಸುಳಿಗಾಳಿಯ ಪರಿಣಾಮ ಜೂ.17ರವರೆಗೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂ.17ರವರೆಗೆ ಉಡುಪಿ, ಉತ್ತರ ಮತ್ತು ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಹಾಗೂ ಜೂ 16ರವರೆಗೆ ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ವಿಜಯಪುರ ಜಿಲ್ಲೆಗಳಿಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ಜೂ.17ರವರೆಗೆ ‘ಯಲ್ಲೋ ಅಲರ್ಟ್‌’ ನೀಡಲಾಗಿದೆ.