ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ: ರೆಡ್ ಅಲರ್ಟ್ ಘೋಷಣೆ

ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ   ರೆಡ್ ಅಲರ್ಟ್ ಘೋಷಿಸಿದೆ.

Heavy rain in karantaka causes red alert announced By IMD

ಬೆಂಗಳೂರು, (ಆ.05): ಈಗಾಗಲೇ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದೆ, ಇದರ ಮಧ್ಯೆ ಭಾರತೀಯ ಹವಮಾನ ಇಲಾಖೆ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಒರಿಸ್ಸಾ ಮತ್ತು ಪಶ್ಚಿಮ ಬಂಗಾಳದಲ್ಲಿ ವಾಯುಭಾರ ಕುಸಿತವಾಗಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ 5 ದಿನಗಳ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇದರಿಂದ ಭಾರತೀಯ ಹವಮಾನ ಇಲಾಖೆ  ರೆಡ್ ಅಲರ್ಟ್ ಘೋಷಣೆ ಮಾಡಿದೆ.

ನಾಲ್ಕೈದು ದಿನ ಭಾರೀ ಮಳೆಯ ಮುನ್ನೆಚ್ಚರಿಕೆ

ಅಲ್ಲದೇ ಗುಜರಾತ್ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು ಇದರ ಪರಿಣಾಮ ದಕ್ಷಿಣದ ರಾಜ್ಯಗಳಲ್ಲಿ ಭಾರಿ ಮಳೆಯಾಗಿತ್ತಿದೆ. ಈಗಾಗಲೇ ಕರಾವಳಿ ಮತ್ತು ಮಲೆನಾಡು ಮತ್ತು ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆ. 6ರಿಂದ 9ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿತ್ತು.

ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಮುದ್ರ, ನದಿ ತೀರದ ಜನರು ಎಚ್ಚರಿಕೆಯಿಂದ ಇರುವಂತೆ ಇಲಾಖೆ ಸೂಚನೆ ನೀಡಿದೆ. 

Latest Videos
Follow Us:
Download App:
  • android
  • ios