ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ. ಜು.16ರಂದು ದಕ್ಷಿಣ ಒಳನಾಡು ಭಾಗದ ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಭಾಗದಲ್ಲಿ ಹೆಚ್ಚಿನ ಮಳೆ ಆಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ‘ಯಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಬೆಂಗಳೂರು(ಜು.10): ಕರಾವಳಿ ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ ಮುಂದುವರೆಯುವ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ‘ಯಲ್ಲೋ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ.
ಉಳಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ. ಜು.16ರಂದು ದಕ್ಷಿಣ ಒಳನಾಡು ಭಾಗದ ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಭಾಗದಲ್ಲಿ ಹೆಚ್ಚಿನ ಮಳೆ ಆಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ‘ಯಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಉಡುಪಿ: ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ
ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ದಕ್ಷಿಣ ಕನ್ನಡದ ಮೂಲ್ಕಿಯಲ್ಲಿ ಅತಿ ಹೆಚ್ಚು 15 ಸೆಂ.ಮೀ ಮಳೆಯಾಗಿದೆ. ಉತ್ತರ ಕನ್ನಡದ ಮಂಕಿಯಲ್ಲಿ 12, ಕದ್ರಾ 10, ಸುಳ್ಯ 8, ಕ್ಯಾಸಲ್ ರಾಕ್, ಮಂಗಳೂರು ವಿಮಾನ ನಿಲ್ದಾಣ, ಧರ್ಮಸ್ಥಳ, ಮಾಣಿ, ಪಣಂಬೂರಿನಲ್ಲಿ ತಲಾ 7 ಸೆಂ.ಮೀ ಮಳೆಯಾಗಿದೆ.
