ರಾಜ್ಯದಲ್ಲಿ ಸೆ.29ರಿಂದ ಅ.3ರ ವರೆಗೆ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಸೆ.29 ರಿಂದ ಅ.1ರ ವರೆಗೆ ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು(ಸೆ.27): ಮುಂದಿನ 24 ಗಂಟೆಯಲ್ಲಿ ರಾಜ್ಯದ ಉತ್ತರ ಒಳನಾಡಿನ ಐದು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ರಾಜ್ಯದಲ್ಲಿ ಕಳೆದ ಎರಡ್ಮೂರು ದಿನದಿಂದ ಮುಂಗಾರು ಚುರುಕುಗೊಂಡಿದ್ದು, ತಿಂಗಳಾಂತ್ಯದ ವರೆಗೂ ರಾಜ್ಯದಲ್ಲಿ ಉತ್ತಮ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ 24 ಗಂಟೆಯಲ್ಲಿ ಗದಗ, ಹಾವೇರಿ, ಧಾರವಾಡ ಹಾಗೂ ಬೆಳಗಾವಿಯಲ್ಲಿ ಭಾರೀ ಮಳೆಯಾಗಲಿದೆ. ಉಳಿದಂತೆ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಕೈಕೊಟ್ಟ ಮಳೆ: ಕಂಗೆಟ್ಟ ರೈತಾಪಿ ವರ್ಗ
ಸೆ.29 ರಿಂದ ಮೂರು ದಿನ ಭಾರೀ ಮಳೆ
ರಾಜ್ಯದಲ್ಲಿ ಸೆ.29ರಿಂದ ಅ.3ರ ವರೆಗೆ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಸೆ.29 ರಿಂದ ಅ.1ರ ವರೆಗೆ ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಸೆ.30 ಹಾಗೂ ಅ.1 ರಂದು ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚನೆ ನೀಡಲಾಗಿದೆ.
ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಚಿಕ್ಕಬಳ್ಳಾಪುರದ ತೊಂಡೇಭಾವಿಯಲ್ಲಿ ಅತಿ ಹೆಚ್ಚು 5 ಸೆಂ.ಮೀ ಮಳೆಯಾದ ವರದಿಯಾಗಿದೆ. ಗೋಕರ್ಣ, ಸಿಂದಗಿ, ಬೀದರ್, ಕಂಪ್ಲಿಯಲ್ಲಿ ತಲಾ 4, ಹೊನ್ನಾವರ, ಆಳಂದ, ಕುಕನೂರು, ಮಾನ್ವಿ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಹೆಬ್ಬೂರು ತಲಾ 3, ಕುಮಟಾ, ತಾಳಿಕೋಟೆ, ಫರಹತಾಬಾದ್, ಚಿಂಚೋಳಿ, ಕೆಂಭಾವಿ, ಬೆಂಗಳೂರು ನಗರ, ಗೌರಿಬಿದನೂರು, ಕುರುಗೋಡು ಹಾಗೂ ದೊಡ್ಡಬಳ್ಳಾಪುರದಲ್ಲಿ ತಲಾ 2 ಸೆಂ.ಮೀ. ಮಳೆಯಾಗಿದೆ.
