ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ಜುಲೈ 19 ರಿಂದ 23ರವರೆಗೆ ಯಲ್ಲೋ ಅಲರ್ಟ್‌ ನೀಡಲಾಗಿದೆ. ಬೀದರ್‌, ಬೆಳಗಾವಿ, ಕಲಬುರಗಿ ಜಿಲ್ಲೆಗಳಿಗೆ ಮುಂದಿನ ಎರಡ್ಮೂರು ದಿನ ‘ಯಲ್ಲೋ ಅಲರ್ಟ್‌’ ಮುನ್ಸೂಚನೆ ನೀಡಲಾಗಿದೆ. ಇನ್ನುಳಿದ ಜಿಲ್ಲೆಗಳಲ್ಲಿಯೂ ಮುಂದಿನ ಒಂದು ವಾರ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ತಿಳಿಸಿದ ಹವಾಮಾನ ಇಲಾಖೆ.

ಬೆಂಗಳೂರು(ಜು.19): ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಆರೆಂಜ್‌ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಜುಲೈ 19 ಮತ್ತು 20ಕ್ಕೆ ಆರೆಂಜ್‌ ಅಲರ್ಟ್‌, ಜುಲೈ 21ರಿಂದ 23 ವರೆಗೆ ಯಲ್ಲೋ ಅಲರ್ಟ್‌ ಸೂಚನೆ ನೀಡಲಾಗಿದೆ.

ಉಳಿದಂತೆ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ಜುಲೈ 19 ರಿಂದ 23ರವರೆಗೆ ಯಲ್ಲೋ ಅಲರ್ಟ್‌ ನೀಡಲಾಗಿದೆ. ಬೀದರ್‌, ಬೆಳಗಾವಿ, ಕಲಬುರಗಿ ಜಿಲ್ಲೆಗಳಿಗೆ ಮುಂದಿನ ಎರಡ್ಮೂರು ದಿನ ‘ಯಲ್ಲೋ ಅಲರ್ಟ್‌’ ಮುನ್ಸೂಚನೆ ನೀಡಲಾಗಿದೆ. ಇನ್ನುಳಿದ ಜಿಲ್ಲೆಗಳಲ್ಲಿಯೂ ಮುಂದಿನ ಒಂದು ವಾರ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯಲ್ಲಿ ವರುಣನ ಅಬ್ಬರ ಇಳಿಮುಖ: ಜು.21 ರ ಬಳಿಕ ಮಳೆ ಹೆಚ್ಚಳವಾಗುವ ಸಾಧ್ಯತೆ

ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಉತ್ತರ ಕನ್ನಡದ ಕ್ಯಾಸಲ್‌ರಾಕ್‌ ನಲ್ಲಿ ಅತಿ ಹೆಚ್ಚು 12 ಸೆಂ.ಮೀ, ಕೊಲ್ಲೂರು 11, ಜಗಲಬೆಟ್‌ 8, ಕದ್ರಾ, ಮಂಚಿಕೆರೆ ತಲಾ 7, ಸಿದ್ದಾಪುರ, ಯಲ್ಲಾಪುರ, ತರೀಕೆರೆ, ಕಮ್ಮರಡಿಯಲ್ಲಿ ತಲಾ 6 ಸೆಂ.ಮೀ ವರದಿಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.